ಪರಿಸರ ಮಾಲಿನ್ಯದಿಂದ ತತ್ತರಿಸಿದ ಶಾಲಾ ಮಕ್ಕಳು ಕೋರ್ಟಿಗೆ
ಬೆಂಗಳೂರು : ನಗರದ ವಾಯು, ಶಬ್ದ ಮಾಲಿನ್ಯದಿಂದ ತತ್ತರಿಸಿ ಹೋಗಿರುವ ಬಿಷಪ್ ಕಾಟನ್ ಶಾಲೆಯ ಪ್ರಚಂಡ ಪುಟಾಣಿಗಳು ನ್ಯಾಯಭಿಕ್ಷೆ ಕೋರಿ ಈಗ ಕೋರ್ಟ್ನ ಮೆಟ್ಟಿಲು ಏರಿದ್ದಾರೆ.
ಈ ಅರ್ಜಿಯನ್ನು ನ್ಯಾಯಾಲಯ ಅಂಗೀಕರಿಸಿದರೆ ಅತ್ಯಂತ ಚಿಕ್ಕ ವಯಸ್ಸಿನ ಬಾಲಕರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಇದಾಗುತ್ತದೆ. 14ರ ಹರೆಯದ ಪೋರ ಶುಶಾಂತ್ಚಾರಿ ಮತ್ತು ಆತನ ಗೆಳೆಯರು ಮಾಲಿನ್ಯದ ಮೇಲಿನ ತಮ್ಮ ದೂರನ್ನು ಕೋರ್ಟಿನ ಬಾಗಿಲಿಗೆ ಒಯ್ದಿದ್ದಾರೆ. ಈ ಸಂಬಂಧ ಹೈಕೋರ್ಟ್ನ ನ್ಯಾಯಮೂರ್ತಿ ಎಮ್. ಎಫ್. ಸಾಲ್ಡಾನಾ ಅವರಿಗೆ ಬರೆದಿರುವ ಪತ್ರದಲ್ಲಿ , ಸುಮಾರು 2 ಲಕ್ಷದಷ್ಟು ಮಕ್ಕಳಿಗೆ ತಮ್ಮ ಶಿಕ್ಷಕರು ಏನು ಹೇಳುತ್ತಿದ್ದಾರೆ ಎಂದು ಕೇಳಿಸಿಕೊಳ್ಳಲೂ ಸಾಧ್ಯವಾಗುತ್ತಿಲ್ಲ. ಏಕೆಂದರೆ, ಶಬ್ಧ ಮಾಲಿನ್ಯ ಸಹಿಸಿಕೊಳ್ಳಲು ಅಸಾಧ್ಯವಾಗಿದೆ.
ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಹೋಗುತ್ತಿರುವ ಶಬ್ಧ ಮಾಲಿನ್ಯದಿಂದ ಓದುವ ಮಾತು ಹಾಗಿರಲಿ, ನಿದ್ದೆ ಮಾಡಲೂ ಸಾಧ್ಯವಾಗುತ್ತಿಲ್ಲ. ಸುಮಾರು 60 ಸಾವಿರ ಆಟೋಗಳು ಸೇರಿದಂತೆ ನಗರದ ವಾಹನಗಳು ಮಾಡುವ ಶಬ್ಧ ಮತ್ತು ಯಾವುದೇ ಕಡಿವಾಣ ಇಲ್ಲದೆ ಅವು ಉಗುಳುವ ಹೊಗೆಯ ಬಗ್ಗೆಯೂ ಬಾಲಕರು ಗಮನ ಸೆಳೆದಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications