ಮಂಗಳೂರಿನ 5 ಪ್ಲಾಸ್ಟಿಕ್ ಘಟಕಗಳಿಗೆ ನೋಟೀಸ್
ಮಂಗಳೂರು : ಪುನರ್ ಉತ್ಪಾದಿಸಿದ ಪ್ಲಾಸ್ಟಿಕ್ ಮತ್ತು ಅದರ ಬಳಕೆ ಕುರಿತ ಶಾಸನದ 1999ರ ಮಾರ್ಗ ಸೂಚಿಗಳನ್ನು ಉಲ್ಲಂಘಿಸಿ ಪ್ಲಾಸ್ಟಿಕ್ ಚೀಲ ತಯಾರಿಸಿದ ಮಂಗಳೂರಿನ ಐದು ಮತ್ತು ಪುತ್ತೂರಿನ ಒಂದು ಪ್ಲಾಸ್ಟಿಕ್ ತಯಾರಿಕಾ ಘಟಕಗಳಿಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವಿವರಣೆ ಕೋರಿ ನೋಟೀಸ್ ಜಾರಿ ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಪಿಲ್ ಮೋಹನ್ ಮಂಗಳವಾರ ಸುದ್ದಿ ಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ. ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ಸುಪ್ರೀಂ ಪ್ಲಾಸ್ಟಿಕ್ ಇಂಡಸ್ಟ್ರೀಸ್, ಡೆಕ್ಕನ್ ಪ್ಲಾಸ್ಟಿಕ್ ಇಂಡಸ್ಟ್ರೀಸ್, ರಾಯಲ್ ಪ್ಲಾಸ್ಟಿಕ್ ಇಂಡಸ್ಟ್ರೀಸ್, ಎಬಿಕೆಒ ಇಂಡಸ್ಟ್ರೀಸ್ ಮತ್ತು ಮತ್ತು ಪಾೖಸ್ ಪ್ಲಾಸ್ಟಿಕ್ ಇಂಡಸ್ಟ್ರೀಸ್ ಹಾಗೂ ಪುತ್ತೂರಿನ ಸುಭಾಷ್ ಪಾಲಿಮರ್ಸ್ ಘಟಕಕ್ಕೆ ಶೋಕಾಸ್ ನೋಟೀಸ್ ಜಾರಿ ಮಾಡಲಾಗಿದೆ.
ಉತ್ಪಾದಕರು, ಮಾರಾಟಗಾರರು ಪುನರ್ ಉತ್ಪಾದಿತ ಪ್ಲಾಸ್ಟಿಕ್ ಬಳಕೆ ಶಾಸನದ ನಿಯಮಾವಳಿಗಳನ್ನು ಕಟ್ಟು ನಿಟ್ಟಾಗಿ ಪಾಲಿಸದಿದ್ದರೆ ಅವರನ್ನು ಪರಿಸರ ಕಾಯ್ದೆ ಯಡಿಯಲ್ಲಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಪ್ಲಾಸ್ಟಿಕ್ ಹೆಕ್ಕಿಕೋ ಚಳವಳಿ, ಮತ್ತು ಪ್ಲಾಸ್ಟಿಕ್ ಬಳಕೆಯನ್ನು ತಡೆಗಟ್ಟುವ ಕ್ರಮಗಳ ಹಿನ್ನೆಲೆಯಲ್ಲಿ ಈ ಎಚ್ಚರಿಕೆ ಮಹತ್ವದ್ದಾಗಿದೆ.
(ಮಂಗಳೂರು ಪ್ರತಿನಿಧಿಯಿಂದ)
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications