ಅತ್ತ ಜ್ವಾಲೆ ಇತ್ತ ಮಳೆ - ಇಳೆಯ ವಿಚಿತ್ರ
ಬೆಂಗಳೂರು :ವಿಜ್ಞಾನ - ತಂತ್ರಜ್ಞಾನ ಎಷ್ಟೇ ಮುಂದುವರಿದರೂ ಕೂಡ ಮಾನವ ಪ್ರಕೃತಿಯ ವಿರುದ್ಧ ಸೆಣಸಲಾರ, ಸೆಣಸಿ ಗೆಲ್ಲಲಾರ ಎಂಬ ಮಾತು ಅಕ್ಷರಶಃ ಸತ್ಯ. ಅತ್ತ ಜಪಾನ್‌ನ ಟೋಕಿಯೋದಿಂದ 180 ಕಿ.ಮೀಟರ್ ದೂರದಲ್ಲಿರುವ ಮಿಯಾಕಿಜಿಮಾ ದ್ವೀಪದಲ್ಲಿ ಮುಗಿಲಿನೆತ್ತರಕ್ಕೆ ಜ್ವಾಲಾಮುಖಿ ಚಿಮ್ಮಿದೆ. ಇತ್ತ ನೆರೆಯ ಆಂಧ್ರಪ್ರದೇಶದಲ್ಲಿ ಮಳೆಯ ಆರ್ಭಟಕ್ಕೆ ಉಕ್ಕಿ ಹರಿಯುತ್ತಿರುವ ನದಿಗಳು ನೂರಾರು ಜನರನ್ನು ಬಲಿತೆಗೆದುಕೊಂಡಿವೆ.
ಮಳೆಯನ್ನು, ಬೆಂಕಿಯನ್ನು ನಿಯಂತ್ರಿಸುವುದು ಸಾಧ್ಯವೇ? ರಾಜ್ಯದಲ್ಲಿ ಭಾರಿ ಅನಾಹುತ ಆಗುವ ಹಾಗೆ ಮಳೆಯಾಗಿಲ್ಲವಾದರೂ, ನಾಲ್ಕಾರು ಜೀವಗಳನ್ನು ಮಳೆ ಬಲಿ ತೆಗೆದುಕೊಂಡಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಕರಾವಳಿಯಲ್ಲಿ ಮುಂಗಾರು ಚುರುಕಾಗಿತ್ತು. ಅಂಕೋಲ, ಕಮ್ಮರಡಿಗಳಲ್ಲಿ ತಲಾ 7 ಸೆಂಟಿ ಮೀಟರ್, ಭಟ್ಕಳ, ಶಿರಾಳಿಗಳಲ್ಲಿ ತಲಾ 6 ಸೆಂಟಿ ಮೀಟರ್, ಕುಮಟಾದಲ್ಲಿ 5, ಹೊನ್ನಾವರ, ತೀರ್ಥಹಳ್ಳಿ, ಆನಂತದಾಪುರಗಳಲ್ಲಿ ತಲಾ 4, ಕಾರವಾರ, ಕೊಪ್ಪದಲ್ಲಿ 3, ಧರ್ಮಸ್ಥಳ, ಮಂಚಿಕೇರಿ, ಕೋಲಾರ, ಮೂರ್ನಾಡು, ಭಾಗಮಂಡಲ, ಮೂಡಿಗೆರೆಗಳಲ್ಲಿ ತಲಾ 2 ಸೆಂಟಿ ಮೀಟರ್ ಮಳೆ ಬಿದ್ದಿದೆ.
ಮುಂದಿನ 48 ಗಂಟೆಗಳ ಮುನ್ಸೂಚನೆಯಂತೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಅನೇಕ ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಗುಡುಗು ಸಹಿತ ಸುರಿಮಳೆ ಬೀಳುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆಗಳೇನೂ ಕಂಡು ಬರುವುದಿಲ್ಲ. ಸ್ಥಳೀಯ ಹವಾಮಾನ ಮುನ್ಸೂಚನೆಯಂತೆ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣ ಇದ್ದು, ಸಂಜೆ ಅಥವಾ ರಾತ್ರಿ ಒಂದೆರಡು ಬಾರಿ ಹಗುರದಿಂದ ಮಳೆ ಸುರಿಯುವ ಸಾಧ್ಯತೆ ಇದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications