ಇನ್ನೂ 920 ಐಟಿ ಎಂಜಿನಿಯರಿಂಗ್ ಸೀಟುಗಳು ಮಂಜೂರು
ಬೆಂಗಳೂರು : ಮಾಹಿತಿ ತಂತ್ರಜ್ಞಾನಕ್ಕೆ ಸಂಬಂಧಿಸಿದ ಕೋರ್ಸುಗಳಲ್ಲಿ ಇನ್ನೂ 920 ಸೀಟುಗಳನ್ನು ಹೆಚ್ಚಿಸಲು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಒಪ್ಪಿಗೆ ನೀಡಿದೆ.
ಮಂಡಳಿಯು ಬುಧವಾರ ಈ ಸೀಟು ಹೆಚ್ಚಳಕ್ಕೆ ಅನುಮತಿ ಕೊಟ್ಟಿದ್ದು, ಪ್ರವೇಶ ಪ್ರಕ್ರಿಯೆಯಲ್ಲಿ ಸೂಕ್ತ ಬದಲಾವಣೆಗಳನ್ನು ಮಾಡಿಕೊಳ್ಳುವಂತೆ ಸಿಇಟಿಗೆ ರಾಜ್ಯ ಸರ್ಕಾರ ಆದೇಶ ಕೊಟ್ಟಿದೆ. ತತ್ಪರಿಣಾಮ ಆಗಸ್ಟ್ 31ರಂದು ನಡೆಯಬೇಕಿದ್ದ ಸೀಟು ಆಯ್ಕೆ ಪ್ರಕ್ರಿಯೆಯನ್ನು ಸೆಪ್ಟೆಂಬರ್ 3ಕ್ಕೆ ಮುಂದೂಡಲಾಗಿದೆ ಎಂದು ಸಿಇಟಿ ಪ್ರಕಟಿಸಿದೆ.
ಹೆಚ್ಚಳವಾಗಿರುವ 920 ಸೀಟುಗಳ ಪೈಕಿ 730 ಸೀಟುಗಳನ್ನು ಉಚಿತ, ಪೇಮೆಂಟ್, ಕರ್ನಾಟಕ ಹಾಗೂ ಕರ್ನಾಟಕೇತರ ವರ್ಗದವರಲ್ಲಿ ಹಂಚಲಾಗುವುದು. ಈ ಮೊದಲೇ ಎಐಸಿಟಿಇ 1590 ಹೆಚ್ಚುವರಿ ಸೀಟುಗಳನ್ನು ಮಂಜೂರು ಮಾಡಿದ್ದು, ಅದರಂತೆ ಸಿಇಟಿ ಹೊಸ ಸೀಟು ಹಂಚಿಕೆ ಲೆಕ್ಕಾಚಾರ ಪ್ರಕಟಿಸಿ, ಹಂಚಿಕೆಯನ್ನೂ ಪ್ರಾರಂಭಿಸಿದೆ.
ಆಗಸ್ಟ್ 28, 29 ಮತ್ತು 30ನೇ ತಾರೀಖು ಪರಿಶಿಷ್ಟ ಜಾತಿ- ಪಂಗಡ ಹಾಗೂ 2ಎ ವರ್ಗದ ವಿದ್ಯಾರ್ಥಿಗಳು ತಮ್ಮ ತಮ್ಮ ಸೀಟುಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಈಗ ಮತ್ತಷ್ಟು ಸೀಟುಗಳ ಹೆಚ್ಚಳವಾಗಿರುವುದರಿಂದ ತಮ್ಮ ಆಯ್ಕೆಯಲ್ಲಿ ಬದಲಾವಣೆ ಬಯಸಿದಲ್ಲಿ , ಸೆಪ್ಟೆಂಬರ್ 2ನೇ ತಾರೀಖು ಬೆಳಗ್ಗೆ 9 ಗಂಟೆಗೆ ಸಿಇಟಿ ಕಚೇರಿ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications