ನಗರದಲ್ಲಿ ಗಣೇಶ ಹಬ್ಬಕ್ಕೆ ಮಳೆ ಭೀತಿ ಇಲ್ಲ
ಬೆಂಗಳೂರು : ಒಂದು ಕಡೆ ಅನಾವೃಷ್ಟಿ, ಮತ್ತೊಂದೆಡೆ ಅತಿವೃಷ್ಟಿ. ಮಳೆ ಬಯಸುವ ಕಡೆಯಲ್ಲಿ ಮಳೆಯೇ ಬರುವುದಿಲ್ಲ. ಇನ್ನು ಕೆಲವೆಡೆ ಸಾಕು ಸಾಕೆಂದರೂ ಮಳೆರಾಯ ನಿಲ್ಲುವುದಿಲ್ಲ. ಬಿಹಾರದ ಕೆಲವು ಪ್ರದೇಶಗಳು ಬರದಿಂದ ತತ್ತರಿಸುತ್ತಿವೆ. ಇತ್ತ ಆಂಧ್ರಪ್ರದೇಶ, ಮಹಾರಾಷ್ಟ್ರದಲ್ಲಿ ಮಳೆ ಧಾರಾಕಾರವಾಗಿ ಸುರಿಯುತ್ತಿದೆ.
ಕರ್ನಾಟಕದ ಮಟ್ಟಿಗೆ ಹೇಳುವುದಾದರೆ, ಅಂತಹ ಪ್ರಕೃತಿ ಪ್ರಕೋಪ ಕಂಡು ಬಂದಿಲ್ಲ. ಬರುವುದೂ ಬೇಡ. ಕಳೆದ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಕರ್ನಾಟಕದ ಬಹುತೇಕ ಎಲ್ಲೆಡೆ ಮಳೆ ಬಿದ್ದಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆಗಳಲ್ಲಿ ಮಳೆಯಾಗಿದೆ. ಬಾಗಮಂಡಲದಲ್ಲಿ ಅತಿ ಹೆಚ್ಚು ಎಂದರೆ 7 ಸೆಂಟಿ ಮೀಟರ್ ಮಳೆ ಬಿದ್ದಿದೆ. ಆಗುಂಬೆಯಲ್ಲಿ 5, ಶೃಂಗೇರಿಯಲ್ಲಿ 3, ಬಾಗಲಕೋಟೆ, ಬೆಳಗಾವಿ, ಕೊಪ್ಪ, ಕಮ್ಮರಡಿ, ಬೆಳ್ತಂಗಡಿ, ಜಗಲ್‌ಬೆಟ್, ಲೋಂಡಾಗಳಲ್ಲಿ ತಲಾ 2, ಧರ್ಮಸ್ಥಳ, ಕಾರ್ಕಳ, ಬೆಳಗಾವಿ ವಿಮಾನ ನಿಲ್ದಾಣ, ಸಂಕೇಶ್ವರ, ಲಕ್ಕುಂಡಿ, ತರೀಕೆರೆ, ಮದಾಪುರಗಳಲ್ಲಿ ತಲಾ 1 ಸೆಂಟಿ ಮೀಟರ್‌ಮಳೆ ಬಿದ್ದಿದೆ.
ಮುನ್ಸೂಚನೆಯಂತೆ ಮುಂದಿನ 48 ಗಂಟೆಗಳ ಅವಧಿಯಲ್ಲಿ ಕರಾವಳಿ ಕರ್ನಾಟಕದ ಬಹುತೇಕ ಪ್ರದೇಶಗಳಲ್ಲಿ ಹಾಗೂ ಒಳನಾಡಿನ ಅಲ್ಲಲ್ಲಿ ಮಳೆ ಅಥವಾ ಗುಡುಗಿನಿಂದ ಕೂಡಿದ ಸುರಿಮಳೆ ಬೀಳುವ ನಿರೀಕ್ಷೆ ಇದೆ. ಸ್ಥಳೀಯ ಮುನ್ಸೂಚನೆಯಂತೆ ಬೆಂಗಳೂರು ಹಾಗೂ ಸುತ್ತ ಮುತ್ತಲ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಇರುತ್ತದೆ ಆದರೆ, ಮಳೆ ಸುಳಿಯುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಂದರೆ ಬೆಂಗಳೂರು ನಗರ ವಾಸಿಗಳು ಮಳೆಯ ತೊಡಕಿಲ್ಲದೆ ಆನಂದದಿಂದ ಗಣೇಶಚತುರ್ಥಿ ಆಚರಿಸಬಹುದು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications