ಸುಪ್ರೀಂ ಕೋರ್ಟ್ ತೀರ್ಪಿನಿಂದ ರಾಜ್ ಬಿಡುಗಡೆ ವಿಳಂಬ : ಕೃಷ್ಣ
ಬೆಂಗಳೂರು : ಸರ್ವೋಚ್ಚ ನ್ಯಾಯಾಲಯ ಟಾಡಾ ಆರೋಪಿಗಳನ್ನು ಷರತ್ತಿನ ಜಾಮೀನಿನ ಮೇಲೆ ಬಿಡುಗಡೆ ಮಾಡದಂತೆ ನೀಡಿರುವ ಅನಿರ್ದಿಷ್ಟ ಕಾಲದ ತಡೆಯಾಜ್ಞೆಯಿಂದಾಗಿ ರಾಜ್‌ಕುಮಾರ್ ಅವರ ಬಿಡುಗಡೆ ಪ್ರಕ್ರಿಯೆ ವಿಳಂಬವಾಗುವ ಸಾಧ್ಯತೆ ಇದೆ ಎಂಬುದನ್ನು ರಾಜ್ಯದ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಒಪ್ಪಿಕೊಂಡಿದ್ದಾರೆ.
ಸರ್ವೋನ್ನತ ನ್ಯಾಯಾಲಯದ ತ್ರಿಸದಸ್ಯ ಪೀಠ ಶುಕ್ರವಾರ ನೀಡಿದ ತೀರ್ಪಿನ ಹಿನ್ನೆಲೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಕೃಷ್ಣ ಅವರು, ನ್ಯಾಯಾಲಯ ನೀಡಿರುವ ತೀರ್ಪಿಗೆ ಸರಕಾರ ತಲೆಬಾಗುತ್ತದೆ ಎಂದು ತಿಳಿಸಿದರು.
ಮುಂದಿನ ಕ್ರಮಗಳ ಬಗ್ಗೆ ಚಿಂತಿಸುವ ಮುನ್ನ ರಾಜ್ಯ ಸರಕಾರವು ಸರ್ವೋನ್ನತ ನ್ಯಾಯಾಲಯದ ತೀರ್ಪನ್ನು ಅಧ್ಯಯನ ಮಾಡುತ್ತದೆ ಎಂದು ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ. ಈ ಮಧ್ಯೆ ದೆಹಲಿಗೆ ಧಾವಿಸಿದ್ದ ರಾಜ್ಯದ ಅಡ್ವೊಕೇಟ್ ಜನರಲ್ ಎ.ಎನ್. ಜಯರಾಂ ಅವರು ಶುಕ್ರವಾರ ಸಂಜೆ ಅಥವಾ ರಾತ್ರಿ ರಾಜ್ಯಕ್ಕೆ ಮರಳಲಿದ್ದಾರೆ.
ಈ ತೀರ್ಪಿನಿಂದ ತೊಂದರೆಯಾಗದು : ಶುಕ್ರವಾರ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಗೋಪಾಲ್ - ವೀರಪ್ಪನ್ ನಡುವಣ ಸಂಧಾನ ಮಾತುಕತೆಯ ಮೇಲೆ ಪ್ರತೀಕೂಲ ಪರಿಣಾಮ ಬೀರುವುದಿಲ್ಲ ಎಂಬ ಆಶಾಭಾವನೆಯನ್ನು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಡಿ . ಬಿ. ಚಂದ್ರೇಗೌಡ ವ್ಯಕ್ತಪಡಿಸಿದ್ದಾರೆ.
ತೀರ್ಪಿನ ಪೂರ್ಣಪಾಠ ತಮ್ಮ ಕೈಗೆ ಬಂದಮೇಲೆ ಮುಂದಿನ ಕ್ರಮದ ಬಗ್ಗೆ ಆಲೋಚನೆ ಮಾಡಲಾಗುತ್ತದೆ ಎಂದಿರುವ ಅವರು ಸರ್ವೋಚ್ಚ ನ್ಯಾಯಾಲಯದ ತೀರ್ಪಿಗೆ ತಲೆಬಾಗುತ್ತೇವೆ ಎಂದು ಹೇಳಿದರು. ವೀರಪ್ಪನ್‌ನನ್ನು ಸೆರೆ ಹಿಡಿಯುವಲ್ಲಿ ಸರಕಾರ ವಿಫಲವಾಗಿದೆ ಎಂಬ ನ್ಯಾಯಾಲಯದ ಅಭಿಪ್ರಾಯಕ್ಕೆ ಪ್ರತಿಕ್ರಿಯಿಸಿದ ಚಂದ್ರೇಗೌಡ, ಬಿಕ್ಕಟ್ಟಿನ ಸಂದರ್ಭವನ್ನು ನಿಭಾಯಿಸಲು ಸಾಧ್ಯವಿಲ್ಲ ಎಂದು ಸರಕಾರ ಹೇಳಿಲ್ಲ ಎಂದು ಸಮರ್ಥಿಸಿಕೊಂಡರು.
(ಯುಎನ್‌ಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications