ಅಟಲ್ರ ಅಮೆರಿಕಾ ಯಾತ್ರೆ ನಿಶ್ಚಿತ: ಪ್ರಧಾನಿ ಕಾರ್ಯಾಲಯ ಸ್ಪಷ್ಟನೆ
ನವದೆಹಲಿ : ಅಮೆರಿಕಾ ಪ್ರವಾಸ ಕೈಗೊಳ್ಳುತ್ತಿರುವ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಗದಿತ ಕಾರ್ಯಕ್ರಮಗಳಲ್ಲಿ ಯಾವುದೇ ಬದಲಾವಣೆ ಆಗುತ್ತಿಲ್ಲ ಎಂದು ಪ್ರಧಾನ ಮಂತ್ರಿಗಳ ಕಾರ್ಯಾಲಯದ ಮೂಲಗಳು ಶನಿವಾರ ತಿಳಿಸಿವೆ.
ಅನಾರೋಗ್ಯದ ಕಾರಣ ಹಾಗೂ ವೈದ್ಯರ ಸಲಹೆಯ ಮೇರೆಗೆ ಪ್ರಧಾನಿ ವಾಜಪೇಯಿ ಅವರು ಎರಡು ದಿನ ತಡವಾಗಿ ಅಮೆರಿಕೆಗೆ ತೆರಳುತ್ತಿದ್ದಾರೆ. ಅವರು ನ್ಯೂಯಾರ್ಕ್ ಹಾಗೂ ವಾಷಿಂಗ್ಟನ್ನಲ್ಲಿ ನಡೆಯುವ ಎಲ್ಲ ಪೂರ್ವ ನಿಗದಿತ ಕಾರ್ಯಕ್ರಮಗಳಲ್ಲೂ ಭಾಗವಹಿಸುತ್ತಿದ್ದಾರೆ ಎಂದು ಪ್ರಧಾನಮಂತ್ರಿಗಳ ವಿಶೇಷಾಧಿಕಾರಿ ಎನ್.ಕೆ. ಸಿಂಗ್ ಅವರು ತಿಳಿಸಿದ್ದಾರೆ.
ಮಂಡಿ ನೋವಿನ ಕಾರಣ ಪ್ರಧಾನಿಯವರು ಅಮೆರಿಕಾ ಪ್ರವಾಸ ರದ್ದು ಮಾಡಲಿದ್ದಾರೆ ಎಂಬ ಊಹಾಪೋಹಗಳಿಗೆ ಈ ಹೇಳಿಕೆಯಿಂದ ತೆರೆ ಬಿದ್ದಿದೆ. ನುರಿತ ಮೂಳೆ ರೋಗ ತಜ್ಞರು ಪ್ರಧಾನಿಯವರ ಮಂಡಿನೋವಿಗೆ ಚಿಕಿತ್ಸೆ ನೀಡುತ್ತಿದ್ದು, ಅವರು ಚೇತರಿಸಿಕೊಂಡಿದ್ದಾರೆ. ಈಗ ಅವರಿಗೆ ಮಂಡಿ ನೋವಿನ ಸಮಸ್ಯೆ ಇಲ್ಲ ಎಂದೂ ಸಿಂಗ್ ಹೇಳಿದ್ದಾರೆ.
ಪ್ರಧಾನಿಯವರಿಗೆ ಚಿಕಿತ್ಸೆ ನೀಡುತ್ತಿರುವ ಮೂಳೆ ರೋಗ ತಜ್ಞರೂ ಹಾಗೂ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ. ಪಿ.ಕೆ. ದೇವ್ ಅವರು ವಾಜಪೇಯಿ ಅವರು ಗುಣಮುಖರಾಗಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಕೆಲವು ತಿಂಗಳುಗಳ ಹಿಂದೆ ಭಾರತಕ್ಕೆ ಭೇಟಿ ನೀಡಿದ್ದ ಬಿಲ್ ಕ್ಲಿಂಟನ್ ಅವರು ಪ್ರಧಾನಿಯವರಿಗೆ ಅಮೆರಿಕಕ್ಕೆ ಬರುವಂತೆ ಆಹ್ವಾನ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications