ಕಾವೇರಿ ಗಲಭೆ ಸಂತ್ರಸ್ಥರಿಗೆ ಪರಿಹಾರ ನೀಡುವಂತೆ ರಾಜ್‌ಕುಮಾರ್ ಮನವಿ
ಬೆಂಗಳೂರು : ‘ಕಾವೇರಿ ಗಲಾಟೆಯಲ್ಲಿ ನಷ್ಟಕ್ಕೊಳಗಾದವರಿಗೆ ಧನ ಸಹಾಯ ಮಾಡುವ ಭರವಸೆ ನೀಡಿದ್ದಿರಂತೆ. ಎಷ್ಟು ಬೇಗ ಸಾಧ್ಯವೋ ಅಷ್ಟು ಬೇಗ ಆ ಪರಿಹಾರ ನಿಧಿ ಸ್ಥಾಪಿಸಿ, ನಮ್ಮ ಬಿಡುಗಡೆ ಮಾಡಿಸಿ’ ಇದು ರಾಜ್‌ಕುಮಾರ್ ಅವರು ಮಾಡಿರುವ ಮನವಿ. ಚೆನ್ನೈ ತಲುಪಿರುವ ಕ್ಯಾಸೆಟ್‌ನಲ್ಲಿ ರುವ ಆ ಮನವಿಯನ್ನು ಖಾಸಗಿ ಟಿವಿ ಚಾನಲ್ ಪ್ರಸಾರ ಮಾಡಿದೆ.
ಕ್ಯಾಸೆಟ್ ನೋಡಿದ ನಂತರ ಕಾನೂನು ಸಚಿವ ಚಂದ್ರೇಗೌಡ ಹಾಗೂ ಗೃಹಸಚಿವ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚೆ ನಡೆಸಿದ ಮುಖ್ಯಮಂತ್ರಿಗಳು, ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮೊಕದ್ದಮೆಯನ್ನು ತ್ವರಿತವಾಗಿ ಇತ್ಯರ್ಥಪಡಿಸುವಂತೆ ಸರ್ವೋನ್ನತ ನ್ಯಾಯಾಲಯವನ್ನು ಕೋರಲಾಗುವುದು ಎಂದು ತಿಳಿಸಿದರು.
ವೀರಪ್ಪನ್ ಕೇವಲ ಹಳೆ ಬೇಡಿಕೆಗೆ ವಿವರಣೆ ಕೇಳಿದ್ದಾನೆ. ಪೊಂಗಲ್ ಹೊತ್ತಿಗೆ ತಿರುವಳ್ಳವರ್ ಹಾಗೂ ಸರ್ವಜ್ಞ ಮೂರ್ತಿಯ ಪ್ರತಿಮೆಯನ್ನು ಅನಾವರಣ ಮಾಡಲು ಎರಡೂ ಸರಕಾರಗಳು ಒಪ್ಪಿವೆ ಎಂದು ಕೃಷ್ಣ ಹೇಳಿದರು.
ಈ ಮಧ್ಯೆ ರಾಜ್ ಬಿಡುಗಡೆ ಸಂಬಂಧ ಸರಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ರಾಜ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ. ಗೋವಿಂದು ತೃಪ್ತಿ ವ್ಯಕ್ತಪಡಿಸಿದ್ದಾರೆ. ರಾಜ್ಯದ ಜನತೆ ಶಾಂತಿ, ಸೌಹಾರ್ದ ಕಾಪಾಡಬೇಕೆಂದು ಅವರು ಸುದ್ದಿಗಾರರಿಗೆ ಶುಕ್ರವಾರ ತಿಳಿಸಿದರು.
ಸರ್ವಪಕ್ಷ ಸಭೆ ಸೋಮವಾರ : ಸರ್ವೋನ್ನತ ನ್ಯಾಯಾಲಯದ ತಡೆಯಾಜ್ಞೆಯ ತೀರ್ಪಿನ ಹಿನ್ನೆಲೆಯಲ್ಲಿ ಮುಂದಿನ ಕ್ರಮಗಳ ಬಗ್ಗೆ ಚರ್ಚೆ ನಡೆಸಲು ಸೋಮವಾರ ಬೆಳಗ್ಗೆ 10.30ಕ್ಕೆ ರಾಜ್ಯ ಸಚಿವ ಸಂಪುಟದ ತುರ್ತು ಸಭೆಯನ್ನು ಮುಖ್ಯಮಂತ್ರಿಗಳು ಕರೆದಿದ್ದಾರೆ. ಸೋಮವಾರ ಸಂಜೆ 5 ಗಂಟೆಗೆ ಸರ್ವಪಕ್ಷಗಳ ಪ್ರತಿನಿಧಿಗಳ ಸಭೆಯನ್ನು ಸಹ ಕರೆಯಲಾಗಿದೆ. ಈ ಸಭೆಯಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗುವುದು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications