‘ವೀರಪ್ಪನ್ ವಿಷಯದಲ್ಲಿ ಸೋತಿರುವ ಕೃಷ್ಣ ರಾಜೀನಾಮೆ ಕೊಡಲಿ’
ಗುಲ್ಬರ್ಗಾ : ಸರ್ಕಾರದ ವೈಫಲ್ಯವನ್ನು ಸುಪ್ರೀಂಕೋರ್ಟ್ ಖಂಡಿಸಿರುವ ಹಿನ್ನೆಲೆಯಲ್ಲಿ , ನೈತಿಕ ಹೊಣೆ ಹೊತ್ತಿರುವ ಮುಖ್ಯಮಂತ್ರಿ ಕೃಷ್ಣ ರಾಜೀನಾಮೆ ನೀಡಬೇಕೆಂದು ಕರ್ನಾಟಕ ಸಂಯುಕ್ತ ಜನತಾದಳದ ಸಂಸದೀಯ ಮಂಡಳಿ ಕಾರ್ಯದರ್ಶಿ ಹಾಗೂ ಮಾಜಿ ಸಚಿವ ಎಸ್.ಕೆ. ಕಾಂತ ಆಗ್ರಹಿಸಿದ್ದಾರೆ.
ಶನಿವಾರ ಹೊರಡಿಸಿರುವ ಪತ್ರಿಕಾ ಪ್ರಕಟಣೆಯಲ್ಲಿ ಅವರು ಸರ್ಕಾರದ ವಿರುದ್ಧದ ತಮ್ಮ ನಿಲುವನ್ನು ವ್ಯಕ್ತಪಡಿಸಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆಯ ಬಗೆಗೆ ಕರ್ನಾಟಕ ಸರ್ಕಾರ ಅನಾಸ್ಥೆ ತಳೆದಿದೆ ಎಂದು ಶುಕ್ರವಾರ ಸುಪ್ರೀಂಕೋರ್ಟ್ ಖಂಡಾತುಂಡಾಗಿ ಹೇಳಿರುವುದು ಸರ್ಕಾರದ ವೈಫಲ್ಯವನ್ನು ಬಿಂಬಿಸುತ್ತದೆ ಎಂದಿದ್ದಾರೆ.
ವೀರಪ್ಪನ್ ಚಟುವಟಿಕೆಗಳ ಬಗ್ಗೆ ವರದಿ ಸಲ್ಲಿಸಿದ್ದ ಎಸ್ಪಿ ಅರ್ಕೇಶ್, ರಾಜ್ಕುಮಾರ್ ಅವರನ್ನು ವೀರಪ್ಪನ್ ಅಪಹರಿಸುವ ಸಾಧ್ಯತೆಯಿದೆ ಎಂದು ತಿಳಿಸಿದ್ದರೂ ಸರ್ಕಾರ ಅದನ್ನು ಗಂಭೀರವಾಗಿ ಪರಿಗಣಿಸಲಿಲ್ಲ. ಇದರಿಂದ ಬೇಸತ್ತ ಅರ್ಕೇಶ್ ವಿಶೇಷ ಕಾರ್ಯ ಪಡೆಯ ಯಾವ ಸಭೆಗೂ ಹಾಜರಾಗಲಿಲ್ಲ. ವೀರಪ್ಪನ್ ಹಿಡಿಯಲು ಸರ್ಕಾರ ಮಾಡಿರುವ ಖರ್ಚಿಗೆ ಶ್ವೇತಪತ್ರ ಹೊರಡಿಸಬೇಕೆಂದು ಆಗ್ರಹಿಸಿದ್ದರು ಎಂದು ಕಾಂತ ವಿವರಿಸಿದರು.
(ಯುಎನ್ಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications