Get Updates
Get notified of breaking news, exclusive insights, and must-see stories!

ರಾಜ್‌ ಬಿಡುಗಡೆ: ಅಗತ್ಯ ಬಿದ್ದರೆ ಪ್ರಧಾನಿ ಬಳಿಗೆ ಕೃಷ್ಣ

ಬೆಂಗಳೂರು : ರಾಜ್‌ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಬಿದ್ದರೆ, ಪ್ರಧಾನಿ ವಾಜಪೇಯಿ ಅವರು ಅಮೆರಿಕಕ್ಕೆ ತೆರಳುವ ಮೊದಲೇ, ರಾಜ್ಯದ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರು ಪ್ರಧಾನಿ ಅವರನ್ನು ಸಂಪರ್ಕಿಸುವ ಸಾಧ್ಯತೆ ಇದೆ ಎಂದು ರಾಜ್ಯದ ಹಿರಿಯ ಸಚಿವರೊಬ್ಬರು ತಿಳಿಸಿದ್ದಾರೆ.

ಸರ್ವೋಚ್ಚ ನ್ಯಾಯಾಲಯ ಟಾಡಾ ಬಂದಿಗಳ ಬಿಡುಗಡೆ ಸಂಬಂಧ ರಾಜ್ಯದ ಮನವಿಯನ್ನು ತಿರಸ್ಕರಿಸಿರುವ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ನಡೆದ ಸರ್ವಪಕ್ಷಗಳ ಸಭೆಯ ನಂತರ ಮಾತನಾಡಿದ ಸಚಿವರೊಬ್ಬರು ಈ ವಿಷಯ ತಿಳಿಸಿದ್ದಾರೆ. ಅಗತ್ಯಬಿದ್ದರೆ ಮುಂದಿನ ವಾರವೇ ಮತ್ತೊಂದು ಸರ್ವಪಕ್ಷ ಸಭೆಯನ್ನು ಕೃಷ್ಣ ಕರೆಯುವರು ಎಂದೂ ಅವರು ಹೇಳಿದರು.

ರಾಜ್‌ಕುಮಾರ್‌ ಹಾಗೂ ಇತರ ಮೂವರು ಒತ್ತೆಯಾಳುಗಳನ್ನು ಬಿಡಿಸಿಕೊಳ್ಳಲು ಕೇಂದ್ರ ಸರಕಾರದ ನೆರವನ್ನು ಪಡೆಯುವಂತೆ ಸರ್ವ ಪಕ್ಷಗಳ ಸಭೆಯಲ್ಲಿ ಸಲಹೆ ಬರಲಿಲ್ಲ ಎಂದೂ ಅವರು ತಿಳಿಸಿದ್ದಾರೆ. ಈ ಸಭೆಯಲ್ಲಿ ಕಾಂಗ್ರೆಸ್‌, ಬಿಜೆಪಿ, ಜೆಡಿಯು ಹಾಗೂ ಜೆಡಿಎಸ್‌ನ ಹಿರಿಯ ಸದಸ್ಯರು ಭಾಗವಹಿಸಿದ್ದರು.

ಸಭೆಯ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಜೆಡಿಯು ನಾಯಕ ಪಿ.ಜಿ.ಆರ್‌ ಸಿಂಧ್ಯಾ ಅವರು, ಸರ್ವಪಕ್ಷ ಸಭೆಯಲ್ಲಿ ಅಂತ ಹೇಳಿಕೊಳ್ಳುವ ಯಾವುದೇ ಮಹತ್ವದ ಸಲಹೆ ಬರಲಿಲ್ಲ. ನಾವು ಸಭೆಯಲ್ಲಿ ಪಾಲ್ಗೊಂಡಿದ್ದರಿಂದ ಸಭೆಯ ನಿರ್ಣಯಗಳನ್ನು ಗೌರವಿಸುತ್ತೇವೆ. ಆದರೆ, ಸರ್ಕಾರದ ಧೋರಣೆಗಳ ಬಗ್ಗೆ ಬೇಸರ ಮೂಡಿದೆ ಎಂದೂ ಅವರು ಹೇಳಿದರು. ಈ ಸಂದರ್ಭದಲ್ಲಿ ಪ್ರತಿಪಕ್ಷದ ಧುರೀಣ ಚೆನ್ನಿಗಪ್ಪ ಸಹ ಇದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+