Get Updates
Get notified of breaking news, exclusive insights, and must-see stories!

ಲಿಂಗನಮಕ್ಕಿ ಜಲಾಶಯ ಭರ್ತಿ : ಮುನ್ನೆಚ್ಚರಿಕೆ

ಬೆಂಗಳೂರು : ಲಿಂಗನಮಕ್ಕಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, 1819 ಅಡಿ ಗರಿಷ್ಠ ಮಟ್ಟದ ಜಲಾಶಯದಲ್ಲಿ ಭಾನುವಾರ ನೀರಿನ ಮಟ್ಟ 1816 ಅಡಿ ಆಗಿತ್ತು. ಜಲಾಶಯದ ರಕ್ಷಣೆಯ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಹೊರಗೆ ಬಿಡಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಲಿಂಗನಮಕ್ಕಿ ಕೆಳದಂಡೆಯಲ್ಲಿ ಹಾಗೂ ಶರಾವತಿ ಜಲಾನಯನ ಪ್ರದೇಶದಲ್ಲಿ ವಾಸಿಸುತ್ತಿರುವ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕರ್ನಾಟಕದ ವಿದ್ಯುತ್‌ ನಿಗಮ ಎಚ್ಚರಿಕೆ ನೀಡಿದೆ. ಜಲಾಶಯದ ಸುತ್ತ ಮುತ್ತಲ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಪರಿಣಾಮವಾಗಿ ಹೆಚ್ಚುವರಿ ನೀರನ್ನು ಜಲಾಶಯದಿಂದ ಹೊರಗೆ ಬಿಡುವುದು ಅನಿವಾರ್ಯವಾಗಿದೆ. ಜಲಾಶಯಕ್ಕೀಗ ಪ್ರತಿ ಸೆಕೆಂಡಿಗೆ 20,600 ಘನ ಅಡಿಗಳಷ್ಟು ನೀರು ಹರಿದು ಬರುತ್ತಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+