ರ್ಯಾಗಿಂಗ್ ಪಿಡುಗಿನ ನಿಯಂತ್ರಣಕ್ಕೆ ಸಚಿವ ಪರಮೇಶ್ವರ್ ಅಂಕುಶ
ಬೆಂಗಳೂರು : ರ್ಯಾಗಿಂಗ್ ಪಿಡುಗು ರಾಜ್ಯದ ವೃತ್ತಿಪರ ಕಾಲೇಜುಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈಗ ರಾಜ್ಯದ ಉನ್ನತ ಶಿಕ್ಷಣ ಸಚಿವರು ರ್ಯಾಗಿಂಗ್ ತಡೆಗೆ ವಿಶೇಷ ಹಾಗೂ ಕಠೋರ ಕ್ರಮಗಳ ಸುತ್ತೋಲೆ ಹೊರಡಿಸಿದ್ದಾರೆ.
ಕಾಲೇಜಿನ ಪ್ರಾಂಶುಪಾಲರ ನೇತೃತ್ವದಲ್ಲಿ ಸಮಿತಿ ರಚಿಸಿ ರ್ಯಾಗಿಂಗ್ ತಡೆಯಲು ನಿಶ್ಚಯಿಸಿರುವ ಸರಕಾರ, ಯಾವುದೇ ವೃತ್ತಿಪರ ಕಾಲೇಜುಗಳಲ್ಲಿ ರ್ಯಾಗಿಂಗ್ ಪ್ರಕರಣ ವರದಿಯಾದರೆ ಅದಕ್ಕೆ ಆಯಾ ಕಾಲೇಜಿನ ಆಡಳಿತ ಮಂಡಲಿಯನ್ನೇ ಹೊಣೆ ಮಾಡಲೂ ನಿರ್ಧರಿಸಿದೆ. ರ್ಯಾಗಿಂಗ್‌ನಲ್ಲಿ ತೊಡಗುವ ವಿದ್ಯಾರ್ಥಿಗಳಿಗೆ ವಿಧಿಸುವ ದಂಡದ ಮೊತ್ತವನ್ನು ಹೆಚ್ಚಿಸುವುದೇ ಅಲ್ಲದೆ, ಜೈಲು ಶಿಕ್ಷೆಗೂ ಗುರಿಪಡಿಸುವ ಬಗ್ಗೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ರಾಜ್ಯದಲ್ಲಿ ಹೆಚ್ಚುತ್ತಿರುವ ರ್ಯಾಗಿಂಗ್ ಅನ್ನು ಮೂಲೋತ್ಪಾಟನೆ ಮಾಡುವ ಹಿನ್ನೆಲೆಯಲ್ಲಿ ಮಂಗಳವಾರ ವೃತ್ತಿಪರ ಕಾಲೇಜುಗಳ ಪ್ರಾಂಶುಪಾಲರ ಸಭೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಸಚಿವರು, ಯಾವುದೇ ಕಾಲೇಜಿನಲ್ಲಿ ರ್ಯಾಗಿಂಗ್ ನಡೆದ ಬಗ್ಗೆ ಖಚಿತ ಮಾಹಿತಿ ದೊರೆತರೆ, ಆ ಕಾಲೇಜಿನ ಅನುಮತಿಯನ್ನು ರದ್ದು ಪಡಿಸುವಂತಹ ಅನಿವಾರ್ಯ ಕ್ರಮಗಳಿಗೂ ಮುಂದಾಗಲಾಗುವುದು ಎಂದು ತಿಳಿಸಿದರು.
ರ್ಯಾಗಿಂಗ್ ನಡೆಸಿದ ವಿದ್ಯಾರ್ಥಿಯ ಅಂಕಪಟ್ಟಿಯ ಮೇಲೆ ‘ ರ್ಯಾಗಿಂಗ್ ನಡೆಸಿದ ವಿದ್ಯಾರ್ಥಿ’ ಎಂದು ದಪ್ಪ ಅಕ್ಷರದಲ್ಲಿ ಮುದ್ರಿಸಲಾಗುವುದೂ ಎಂದೂ ಅವರು ಹೇಳಿದರು. ಹೊಸ ಸುತ್ತೋಲೆಯಲ್ಲಿ ರ್ಯಾಗಿಂಗ್ ನಡೆಸಿದ ವಿದ್ಯಾರ್ಥಿಗೆ 2 ಸಾವಿರದಿಂದ 25 ಸಾವಿರ ರುಪಾಯಿ ವರೆಗೆ ದಂಡ ಹಾಕುವ ಅವಕಾಶ ಇದ್ದು, ಆತ ಜೈಲು ಶಿಕ್ಷೆಗೂ ಗುರಿಯಾಗುತ್ತಾನೆ ಎಂದು ಅವರು ಹೇಳಿದರು.
ರ್ಯಾಗಿಂಗ್ ನಿರ್ಮೂಲನೆ ಮಾಡಲು ಕಾಲೇಜುಗಳಲ್ಲಿ ಜಾಗೃತ ದಳ ರಚಿಸಲಾಗುವುದೂ ಎಂದೂ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಆರೋಗ್ಯ ಸಚಿವ ಡಾ. ಮಲಕಾರೆಡ್ಡಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವೆ ನಫೀಸಾ ಫಜಲ್ ಹಾಜರಿದ್ದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications