‘ ರಾಜ್ ಬಿಡುಗಡೆಗೆ 10 ಲಕ್ಷ ಕನ್ನಡಿಗರು ಕಾಡಿಗೆ ನುಗ್ಗಲು ಸಿದ್ಧ ’
ಬೆಂಗಳೂರು : ರಾಜ್‌ಕುಮಾರ್ ಅವರನ್ನು ವೀರಪ್ಪನ್‌ನಿಂದ ಬಿಡಿಸಿಕೊಂಡು ಬರಲು ಹತ್ತು ಲಕ್ಷ ಕನ್ನಡಿಗರು, ಕಾಡಿಗೆ ನುಗ್ಗಲು ಸಿದ್ಧರಾಗಿದ್ದಾರೆ ಎಂದು ಕರ್ನಾಟಕ ಗಡಿ ಅಧ್ಯಯನ ಆಯೋಗದ ಅಧ್ಯಕ್ಷ ಹಾಗೂ ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಹೇಳಿದ್ದಾರೆ.
ಮಂಗಳವಾರ ಶಾಸಕರ ಭವನದ ಸಮ್ಮೇಳನ ಸಭಾಂಗಣದಲ್ಲಿ ಕನ್ನಡ ಚಳವಳಿ ಕೇಂದ್ರ ಸಮಿತಿ ‘ರಾಜ್ ಬಿಡುಗಡೆ ವಿಳಂಬ’ ಕುರಿತು ಏರ್ಪಡಿಸಿದ್ದ ಚರ್ಚೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಾಟಾಳ್ ನಾಗರಾಜ್ ಅವರು ಕನ್ನಡ ನಾಡಿನ ಜನತೆ ಹಾಗೂ ಸರಕಾರ ಅನುಮತಿ ಕೊಟ್ಟರೆ, ರಾಜ್‌ಕುಮಾರ್ ಹಾಗೂ ಇತರ ಮೂವರು ಒತ್ತೆಯಾಳುಗಳನ್ನು ಬಿಡಿಸಿಕೊಂಡು ಬರಲು ಕನ್ನಡದ ಕಲಿಗಳು ಕಾಡಿಗೆ ನುಗ್ಗಲು ಸಿದ್ಧರಾಗಿದ್ದಾರೆ ಎಂದರು.
ಕನ್ನಡಿಗರು ಬಹು ಸಂಯಮಿಗಳು, ರಾಜ್ ಅಪಹರಣ ಪ್ರಕರಣದಲ್ಲೂ ಕೂಡ ಅವರು ತಮ್ಮ ಸಂಯಮ ಮೆರೆದಿದ್ದಾರೆ. ನಮ್ಮ ಸಹನೆಯ ಕಟ್ಟೆ ಒಡೆಯವ ಮೊದಲೇ ವೀರಪ್ಪನ್ ರಾಜ್‌ಕುಮಾರ್ ಅವರನ್ನು ಬಿಡುವುದು ಒಳಿತು ಎಂದು ಎಚ್ಚರಿಕೆಯನ್ನು ನೀಡಿದರು.
ರಾಜ್ಯ ಸರಕಾರ ಅರಕೇಶ್ ಅವರ ವರದಿಯನ್ನು ಗಂಭೀರವಾಗಿ ಪರಿಗಣಿಸಲಿಲ್ಲ ಎಂದು ಆಕ್ಷೇಪಿಸಿದ ಅವರು, ಸರ್ಕಾರದ ಧೋರಣೆಯನ್ನು ಖಂಡಿಸಿದರು. ರಾಜ್ ಬಿಡುಗಡೆ ಸಂಬಂಧ ಸರಕಾರ ನಡೆಸಿದ ಸಭೆಗಳಿಗೆ ಕನ್ನಡ ಹೋರಾಟಗಾರರನ್ನು ಆಹ್ವಾನಿಸದ ಬಗ್ಗೆ ವಿಷಾದ ವ್ಯಕ್ತಪಡಿಸಿದರು.
ಸಭೆಯಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಸಂಸದರು ಹಾಗೂ ರಾಜ್ಯದ ಮೂವರು ಕೇಂದ್ರ ಮಂತ್ರಿಗಳು ಮೂಕ ಪ್ರೇಕ್ಷಕರಾಗಿರುವ ಬಗ್ಗೆ ವಿರೋಧ ವ್ಯಕ್ತವಾಯಿತು. ಸಭೆಯಲ್ಲಿ ಮಾಜಿ ಶಾಸಕ ಜಿ. ನಾರಾಯಣ ಕುಮಾರ್, ಕೆ. ಪ್ರಭಾಕರ ರೆಡ್ಡಿ, ಸಾಹಿತಿ ಚಂದ್ರಣ್ಣಗೌಡ, ಪ್ರಸನ್ನ ಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications