‘ಕೈಗಾರಿಕೆಗಳ ಸಮಸ್ಯೆ ಪರಿಹಾರಕ್ಕೆ ಪ್ರತಿ ಜಿಲ್ಲೆಯಲ್ಲಿ ಕೈಗಾರಿಕಾ ಅದಾಲತ್’
ಬೆಂಗಳೂರು : ಪ್ರತಿ ಜಿಲ್ಲಾ ಕೇಂದ್ರದಲ್ಲಿ ಕೈಗಾರಿಕಾ ಅದಾಲತ್ ನಡೆಸುವ ಮೂಲಕ ಕೈಗಾರಿಕೆಗಳ ಸಮಸ್ಯೆಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸುವ ಕಾರ್ಯಕ್ರಮ ರೂಪಿಸುವುದಾಗಿ ರಾಜ್ಯ ಬೃಹತ್ ಕೈಗಾರಿಕಾ ಸಚಿವ ಆರ್.ವಿ. ದೇಶಪಾಂಡೆ ಹೇಳಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಬರುವ ಮಾರ್ಚ್‌ನಿಂದ ಈ ಯೋಜನೆ ಕಾರ್ಯರೂಪಕ್ಕೆ ಬರಲಿದೆ ಎಂದು ತಿಳಿಸಿದರು. ರಾಜ್ಯದಲ್ಲಿರುವ ರೋಗಗ್ರಸ್ಥ ಕೈಗಾರಿಕೆಗಳ ಪಟ್ಟಿ ಸಿದ್ಧಪಡಿಸಿ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು, ಈ ಬಗ್ಗೆ ಆದೇಶ ನೀಡಲಾಗಿದೆ ಎಂದೂ ಹೇಳಿದರು.
ರಾಜ್ಯದಲ್ಲಿ 2092.53 ಕೋಟಿ ರುಪಾಯಿ ಬಂಡವಾಳ ಹೂಡಿಕೆಯ 9 ಯೋಜನೆಗಳಿಗೆ ಗುರುವಾರ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಅನುಮತಿ ನೀಡಲಾಗಿದೆ ಇದರಲ್ಲಿ ನಗರದ ನಾಗವಾರ ಬಳಿ 700 ಎಕರೆ ಭೂ ಪ್ರದೇಶದಲ್ಲಿ ತಲೆ ಎತ್ತಲಿರುವ 750 ಕೋಟಿ ರುಪಾಯಿ ವೆಚ್ಚದ ಮಾಹಿತಿ ತಂತ್ರಜ್ಞಾನ ಪಾರ್ಕ್ ಕೂಡ ಸೇರಿದೆ ಎಂದೂ ಅವರು ಹೇಳಿದರು.
ಸಕಲ ಮೂಲಭೂತ ಸೌಕರ್ಯಗಳನ್ನು ಹೊಂದಿದ 12 ಟ್ರಕ್ ಟರ್ಮಿನಲ್‌ಗಳನ್ನು 350 ಕೋಟಿ ರುಪಾಯಿ ವೆಚ್ಚದಲ್ಲಿ ರಾಜ್ಯದ ವಿವಿಧೆಡೆ ಪ್ರಾರಂಭಿಸಲು ಟ್ರೇಡಿಂಗ್ ಕಂಪನಿಗೆ ಅನುಮತಿ ನೀಡಲಾಗಿದೆ. 136 ಕೋಟಿ ರುಪಾಯಿ ವೆಚ್ಚದಲ್ಲಿ ಕೈಗಾರಿಕಾ ಉಪನಗರಗಳನ್ನು ಸ್ಥಾಪಿಸಲು ಸಹ ಅನುಮತಿ ನೀಡಲಾಗಿದೆ ಎಂದು ತಿಳಿಸಿದರು. ರಾಜ್ಯದ ಯಾವ ಭಾಗದಲ್ಲಿ ಯಾವ ಕೈಗಾರಿಕೆ ಸ್ಥಾಪಿಸಿದರೆ ಹೆಚ್ಚು ಲಾಭದಾಯಕ ಎಂಬ ಬಗ್ಗೆ ಅರಿಯಲು ವಿಶೇಷ ಯೋಜನೆ ಸಿದ್ಧಪಡಿಸಲಾಗುವುದೂ ಎಂದೂ ದೇಶಪಾಂಡೆ ಅವರು ತಿಳಿಸಿದರು.
ಅಭಿವೃದ್ಧಿ ಕುಂಠಿತಗೊಂಡಿಲ್ಲ : ರಾಜ್ ಅಪಹರಣದ ಹಿನ್ನೆಲೆಯಲ್ಲಿ ರಾಜ್ಯದ ಅಭಿವೃದ್ಧಿ ಕಾರ್ಯಗಳು ಕುಂಠಿತ ಗೊಂಡಿವೆ ಎಂದು ಪ್ರತಿಪಕ್ಷದ ಧುರೀಣರು ಮಾಡುತ್ತಿರುವ ಆಕ್ಷೇಪದಲ್ಲಿ ಅರ್ಥವೇ ಇಲ್ಲ. ರಾಜ್ಯದ ಅಭಿವೃದ್ಧಿಕಾರ್ಯಗಳು ಸುಗಮವಾಗಿ ಸಾಗಿವೆ. ಕೈಗಾರಿಕೋದ್ಯಮಿಗಳು ರಾಜ್ಯದಲ್ಲಿ ಬಂಡವಾಳ ಹೂಡಲು ಉತ್ಸುಕರಾಗಿದ್ದಾರೆ ಎಂದು ಸ್ಪಷ್ಟಪಡಿಸಿದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications