ಮಲ್ಲಿಕಾರ್ಜುನ ಮನ್ಸೂರರ ವಸ್ತು ಸಂಗ್ರಹಾಲಯ ಅನಾವರಣ
ಧಾರವಾಡ : ಖ್ಯಾತ ಹಿಂದೂಸ್ತಾನಿ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ 8ನೇ ಪುಣ್ಯತಿಥಿಯನ್ನು ಧಾರವಾಡದಲ್ಲಿ ಮಂಗಳವಾರ ಗೌರವಾದರಗಳಿಂದ ಆಚರಿಸಲಾಯಿತು. ಮನ್ಸೂರರ ಪುಣ್ಯತಿಥಿಯ ಅಂಗವಾಗಿ ವಸ್ತು ಸಂಗ್ರಹಾಲಯವನ್ನು ಉದ್ಘಾಟಿಸಲಾಯಿತು.
ಡಾ. ಮಲ್ಲಿಕಾರ್ಜುನ ಮನ್ಸೂರ್ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ರೂಪಿಸಿರುವ ಈ ಸಂಗ್ರಹಾಲಯವನ್ನು ಹೆಸರಾಂತ ಗಾಯಕಿ ಗಂಗೂಬಾಯಿ ಹಾನಗಲ್ ಅವರು ಉದ್ಘಾಟಿಸಿದರು. ಗಾನ ಸರಸ್ವತಿಯ ವರಪುತ್ರ ಹಾಗೂ ಹಿರಿಯ ಕಲಾವಿದ ವಾಸಿಸುತ್ತಿದ್ದ ‘ಮೃತ್ಯುಂಜಯ’ ದಲ್ಲಿ ಮನ್ಸೂರ್ ಅವರ ಅಪರೂಪದ ಭಾವಚಿತ್ರಗಳು, ಧ್ವನಿಸುರುಳಿ, ಮನ್ಸೂರರಿಗೆ ದೊರೆತಿದ್ದ ನೂರಾರು ಪ್ರಶಸ್ತಿ ಫಲಕ, ಪಾರಿತೋಷಕಗಳು, ಮನ್ಸೂರರು ಬಳಸುತ್ತಿದ್ದ ಹಲವು ಅಪರೂಪದ ವಸ್ತುಗಳನ್ನು ಪ್ರದರ್ಶಿಸಲಾಗಿದೆ.
ಜಿಲ್ಲಾಧಿಕಾರಿ ವಂದನಾ ಗುರುನಾನಿ ಅವರು ಹಿರಿಯ ಚೇತನ ಮನ್ಸೂರರಿಗೆ ಸರಕಾರದ ಪರವಾಗಿ ಗೌರವ ಅರ್ಪಿಸಿದರು. ಮನ್ಸೂರರ 8ನೇ ಪುಣ್ಯ ಸ್ಮರಣೆಯ ಅಂಗವಾಗಿ ಡಾ. ಮಲ್ಲಿಕಾರ್ಜುನ ಮನ್ಸೂರ್ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಹಾಗೂ ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಸಂಜೆ ಮನ್ಸೂರ್ ಕಲಾಭವನದಲ್ಲಿ ಸಂಗೀತೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications