ಸದಾಶಿವ ಆಯೋಗದ ಸಿಂಧುತ್ವ ಪ್ರಶ್ನಿಸಿದ ಅರ್ಜಿ ವಿಚಾರಣೆ 14ಕ್ಕೆ
ಬೆಂಗಳೂರು : ವೀರಪ್ಪನ್ ವಿರುದ್ಧ ಜಂಟಿ ಕಾರ್ಯಾಚರಣೆಯಲ್ಲಿ ತೊಡಗಿದ್ದ ಇಬ್ಬರು ಪೊಲೀಸ್ ಅಧಿಕಾರಿಗಳು ನ್ಯಾಯಮೂರ್ತಿ ಸದಾಶಿವ ನೇತೃತ್ವದ ಆಯೋಗದ ವಿಚಾರಣಾ ಸಮಿತಿಯ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ನ ಏಕ ಸದಸ್ಯ ನ್ಯಾಯಪೀಠ ಸೆಪ್ಟೆಂಬರ್ 14ಕ್ಕೆ ಮುಂದೂಡಿದೆ.
ಪೊಲೀಸ್ ಅಧಿಕಾರಿಗಳಾದ ಮುತ್ತುರಾಯ ಹಾಗೂ ಜಿ.ಎ. ಭಾವ ಅವರು ಈ ಅರ್ಜಿಯನ್ನು ಸಲ್ಲಿಸಿದ್ದಾರೆ. ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಂಡಿರುವ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಅವರು ಸೋಮವಾರ ಈ ಸಂಬಂಧ ಮಧ್ಯಂತರ ಆದೇಶ ಹೊರಡಿಸಿ, ಮುಂದಿನ ವಿಚಾರಣೆಯನ್ನು 14ಕ್ಕೆ ನಿಗದಿಗೊಳಿಸಿದರು.
ವೀರಪ್ಪನ್ ವಿರುದ್ಧದ ಕಾರ್ಯಾಚರಣೆಯಲ್ಲಿ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪದ ಮೇಲೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ನ್ಯಾ. ಸದಾಶಿವ ನೇತೃತ್ವದ ಆಯೋಗ ರಚಿಸಿತ್ತು. ಕಳೆದ ವಾರ ಹೈಕೋರ್ಟ್ ವಿಭಾಗೀಯ ಪೀಠ ಆಯೋಗದ ಪ್ರಶ್ನಿತ ಸಮಿತಿಯ ಕಲಾಪಕ್ಕೆ ತಡೆಯಾಜ್ಞೆ ನೀಡಿತ್ತು.
ನ್ಯಾಯಮೂರ್ತಿ ಸದಾಶಿವ ಆಯೋಗದ ಕಲಾಪವನ್ನು ಪ್ರಶ್ನಿಸಿ ಪೊಲೀಸ್ ಅಧಿಕಾರಿಗಳು ಮಾರ್ಚ್ ತಿಂಗಳಿನಲ್ಲೇ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ರಜಾಕಾಲದ ನ್ಯಾಯಪೀಠ ಆಗ ಕಲಾಪಕ್ಕೆ ತಾತ್ಕಾಲಿಕ ತಡೆಯಾಜ್ಞೆ ನೀಡಿತ್ತು. ರಾಜ್ಕುಮಾರ್ ಅವರ ಅಪಹರಣದ ಹಿನ್ನೆಲೆಯಲ್ಲಿ ಮತ್ತೆ ಅರ್ಜಿ ವಿಚಾರಣೆಗೆ ಬಂದಾಗ ಏಕ ಸದಸ್ಯ ನ್ಯಾಯಪೀಠ ಆಯೋಗದ ಕಲಾಪ ಮುಂದುವರಿಸಲು ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿದ ಅರ್ಜಿದಾರರು ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿ ಆಯೋಗದ ಕಲಾಪಕ್ಕೆ ತಡೆಯಾಜ್ಞೆ ಪಡೆದಿದ್ದರು. ಈ ಮೇಲ್ಮನವಿಯ ವಿಚಾರಣೆ 13ರಂದು ನಡೆಯಲಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications