ವೀರಪ್ಪನ್ ಬಂಧನಕ್ಕೆ ಆಗ್ರಹಿಸಿದ ವಾಟಾಳ್ ಬಂಧನ - ಬಿಡುಗಡೆ
ಬೆಂಗಳೂರು : ರಾಜ್ಕುಮಾರ್ ಅವರನ್ನು ಬೇಗ ಬಿಡುಗಡೆ ಮಾಡಿಸಬೇಕು, ಕಾಡುಗಳ್ಳ ವೀರಪ್ಪನ್ನನ್ನು ಬಂಧಿಸಬೇಕು ಎಂದು ಆಗ್ರಹಿಸಿ, ಬುಧವಾರ ಮಲ್ಲೇಶ್ವರದಿಂದ - ಮೈಸೂರು ಬ್ಯಾಂಕ್ ವೃತ್ತದವರೆಗೆ ಮೌನ ಮೆರವಣಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದ ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಮತ್ತಿತರರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದರು.
ನಗರದಲ್ಲಿ ಪ್ರತಿಬಂಧಕಾಜ್ಞೆಯಿರುವ ಹಿನ್ನೆಲೆಯಲ್ಲಿ ಅನುಮತಿ ಇಲ್ಲದೆ ಮೌನ ಮೆರವಣಿಗೆ ನಡೆಸಲೆತ್ನಿಸಿದ ವಾಟಾಳ್ ನಾಗರಾಜ್, ಕನ್ನಡ ಚಳವಳಿ ನಾಯಕ ಹಾಗೂ ಮಾಜಿ ಶಾಸಕ ಜಿ. ನಾರಾಯಣ ಕುಮಾರ್, ಪ್ರಭಾಕರ ರೆಡ್ಡಿ ಹಾಗೂ ಅವರ ಬೆಂಬಲಿಗರನ್ನು ಪೊಲೀಸರು ಮಲ್ಲೇಶ್ವರ ಮೈದಾನದಲ್ಲಿಯೇ ಬಂಧಿಸಿದರು. ಕನ್ನಡ ಚಳವಳಿ ಕೇಂದ್ರ ಸಮಿತಿ ಈ ಮೌನ ಮೆರವಣಿಗೆ ಕಾರ್ಯಕ್ರಮಕ್ಕೆ ಕರೆ ನೀಡಿತ್ತು.
300ಕ್ಕೂ ಹೆಚ್ಚು ವಾಟಾಳ್ ಬೆಂಬಲಿಗರು ರಾಜ್ಕುಮಾರ್ ಪರ ಹಾಗೂ ವೀರಪ್ಪನ್ ವಿರುದ್ಧ ಘೋಷಣೆ ಕೂಗಿದರು. ರಾಜ್ಕುಮಾರ್ ಅವರನ್ನು ಆದಷ್ಟು ಬೇಗ ಕಾಡುಗಳ್ಳನಿಂದ ಬಿಡುಗಡೆ ಮಾಡಿಸುವಂತೆ ಅವರು ಒತ್ತಾಯಿಸಿದರು. ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ವಾಟಾಳ್ ಇಂದು ನಾವು ಸಾಂಕೇತಿಕವಾಗಿ ಹೋರಾಟ ನಡೆಸಿದ್ದೇವೆ. ರಾಜ್ ಬಿಡುಗಡೆ ಮತ್ತಷ್ಟು ವಿಳಂಬವಾದರೆ, ಹಂತ ಹಂತವಾಗಿ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಮೆರವಣಿಗೆ ನಡೆಸಲೆತ್ನಿಸಿದ ವಾಟಾಳ್ ನಾಗರಾಜ್ ಹಾಗೂ ಮತ್ತಿತರರನ್ನು ಬಂಧಿಸಿ ನಂತರ ಬಿಡುಗಡೆ ಮಾಡಲಾಯಿತು ಎಂದು ತಿಳಿಸಿರುವ ಸ್ಥಳೀಯ ಪೊಲೀಸ್ ಅಧಿಕಾರಿಗಳು, ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮೆರವಣಿಗೆ ಹಿನ್ನೆಲೆಯಲ್ಲಿ ಮಲ್ಲೇಶ್ವರ ಮೈದಾನದ ಸುತ್ತ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications