ರಾತ್ರಿಯಾಗುತ್ತಿದ್ದಂತೆ ಚಿಕ್ಕದಾಗುತ್ತವೆ ಬೆಂಗಳೂರು ರಸ್ತೆಗಳು !
ಬೆಂಗಳೂರು :ನಗರದಲ್ಲಿ ಹೆಚ್ಚುತ್ತಿರುವ ಅಪರಾಧ ನಿಗ್ರಹಕ್ಕಾಗಿ ನಗರ ಪೊಲೀಸರು ವ್ಯಾಪಕ ಕಟ್ಟೆಚ್ಚರ ವಹಿಸಿದ್ದಾರೆ. ಸೂರ್ಯ ಮುಳುಗುತ್ತಿದ್ದಂತೆ ಕಬ್ಬಿಣದ ತಡೆಗೋಡೆಗಳು ರಸ್ತೆಗಳನ್ನು ಆವರಿಸುತ್ತವೆ. ಬೆಂಗಳೂರಿನ ರಸ್ತೆಗಳೆಲ್ಲ ಕಿರಿದಾಗುತ್ತವೆ. ಪೊಲೀಸರು ಚಿಕ್ಕ ಪುಟ್ಟ ರಸ್ತೆಗಳಲ್ಲೂ ಸಹ ಕಬ್ಬಿಣದ (ಬ್ಯಾರಿಕೇಡ್)ತಡೆಗಳನ್ನು ಇಟ್ಟು, ರಸ್ತೆಯಲ್ಲಿ ಸಂಚರಿಸುವ ಎಲ್ಲ ಮಾದರಿಯ ವಾಹನಗಳನ್ನೂ ಪರೀಕ್ಷಿಸುತ್ತಿದ್ದಾರೆ.
ಕೊಲೆ-ಸುಲಿಗೆ-ದರೋಡೆ ಕಳೆದ ಆಗಸ್ಟ್ ತಿಂಗಳಿಂದ ರಾಜಾರೋಷವಾಗಿ ನಡೆಯುತ್ತಿರುವುದೇ ಪೊಲೀಸರು ಚುರುಕಾಗಲು ಕಾರಣ. ಕಳೆದ ಸೋಮವಾರ ಬೆಳಗ್ಗೆ ಹಾಡು ಹಗಲೇ ಚಿನ್ನದ ವ್ಯಾಪಾರಿ ಬಳಿಯಿದ್ದ 22.15 ಲಕ್ಷ ರೂಪಾಯಿಗಳನ್ನು ಐವರು ಡಕಾಯಿತರ ತಂಡ ಮಲ್ಲೇಶ್ವರಂ ರೈಲ್ವೇ ನಿಲ್ದಾಣದ ಸಮೀಪ ದೋಚಿ ಪರಾರಿಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರೆಗೆ ಯಾವುದೇ ಸುಳಿವು ದೊರೆತಿಲ್ಲ.
ದುಷ್ಕರ್ಮಿಗಳು ವಾಹನಗಳಲ್ಲಿ ಮಾರಕಾಸ್ತ್ರಗಳನ್ನು ಸಾಗಿಸುತ್ತಿದ್ದಾರೆ ಎಂಬ ಗುಮಾನಿಯ ಮೇಲೆ ವಾಹನಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಹೆಚ್ಚಾಗಿ ಆಟೋರಿಕ್ಷಾಗಳು ಹಾಗೂ ಕಾರುಗಳನ್ನು ನಿಲ್ಲಿಸಿ ತಪಾಸಣೆ ನಡೆಸಲಾಗುತ್ತಿದೆ. ರಸ್ತೆಯಲ್ಲಿ ಸಂಚರಿಸುವ ದ್ವಿಚಕ್ರವಾಹನಗಳಾದಿಯಾಗಿ ಎಲ್ಲ ವಾಹನಗಳನ್ನು ತಡೆದು ಪರೀಕ್ಷಿಸುವುದಲ್ಲದೆ, ವಾಹನಗಳ ನೋಂದಣಿ ಸಂಖ್ಯೆನ್ನು ಪುಸ್ತಕದಲ್ಲಿ ದಾಖಲಿಸಿಕೊಳ್ಳಲಾಗುತ್ತಿದೆ.
ನೋಂದಣಿ ಫಲಕಗಳನ್ನೇ ಬದಲಾಯಿಸುವ ಸಾಧ್ಯತೆಯೂ ಇರುವುದರಿಂದ ವಾಹನ ಚಾಲಕರ ತಪಾಸಣೆಯೂ ನಡೆಯುತ್ತಿದೆ. ಅನುಮಾನ ಬಂದರೆ, ಕೂಲಂಕಷ ತನಿಖೆಗೆ ಗುರಿಪಡಿಸಲಾಗುತ್ತಿದೆ. ವಿಮಾನ ನಿಲ್ದಾಣ ರಸ್ತೆ, ಬನಶಂಕರಿ, ಜಯನಗರ, ಮಲ್ಲೇಶ್ವರ, ರಾಜಾಜಿನಗರ, ಮೈಸೂರು ಬ್ಯಾಂಕ್ ಕಾಲೋನಿ ಪ್ರದೇಶಗಳೂ ಸೇರಿದಂತೆ ನಗರದ ಬಹುತೇಕ ಬಡಾವಣೆಗಳ ರಸ್ತೆಗಳಲ್ಲಿ ವಾಹನಗಳನ್ನು ತಡೆದು ತಪಾಸಣೆ ಮಾಡುವ ಕಾಯಕದಲ್ಲಿ ಪೊಲೀಸರು ನಿರತರಾಗಿದ್ದಾರೆ.
ವಾಹನ ಚಾಲಕರ ಪರವಾನಗಿ, ವಾಹನದ ದಾಖಲೆಗಳನ್ನೂ ಪರಿಶೀಲಿಸುವ ಕಾರ್ಯ ನಡೆದಿದೆ. ರಾತ್ರಿ 10 ಗಂಟೆಯ ನಂತರ ತಪಾಸಣೆ ಕಾರ್ಯ ಮತ್ತಷ್ಟು ಚುರುಕುಗೊಳ್ಳುತ್ತಿದೆ. ರಾಜ್ ಅಪಹರಣದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಪರಿಸ್ಥಿತಿಯ ಲಾಭ ಪಡೆಯಬಾರದು ಎಂಬ ಕಾರಣದಿಂದಲೂ ಈ ಕಟ್ಟೆಚ್ಚರ ವಹಿಸಲಾಗಿದೆ ಎಂದು ಹಿರಿಯ ಪೊಲೀಸ್ ಮೂಲಗಳು ತಿಳಿಸಿವೆ.
ಮುಖಪುಟ / ಇವತ್ತು... ಈ ಹೊತ್ತು...
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications