ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ - ನನಸಾಗುವ ಕಾಲ ಹತ್ತಿರ
ಬೆಂಗಳೂರು : ದೇವನಹಳ್ಳಿ ಸಮೀಪ ನಿರ್ಮಿಸಲುದ್ದೇಶಿಸಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೇಂದ್ರ ಪರಿಸರ ಮಂಡಳಿ ಅತಿ ಶೀಘ್ರದಲ್ಲೇ ಅನುಮತಿ ನೀಡಲಿದೆ ಎಂಬ ವಿಶ್ವಾಸವನ್ನು ಕೇಂದ್ರ ನಾಗರಿಕ ವಿಮಾನ ಯಾನ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಸಚಿವ ಟಿ.ಎ. ಜಾನ್ ವ್ಯಕ್ತಪಡಿಸಿದ್ದಾರೆ.
ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಗತ್ಯವಾಗಿರುವ ಭೂಸ್ವಾಧೀನ ಕಾರ್ಯ ಪೂರ್ಣಗೊಂಡಿದೆ. ಈಗ ಕಾಮಗಾರಿಯನ್ನು ಯಾವ ಸಂಸ್ಥೆಗೆ ಒಪ್ಪಿಸ ಬೇಕೆಂಬ ಬಗ್ಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಬೇಕಾಗಿದೆ ಎಂದು ಅವರು ಹೇಳಿದರು. ನಿಲ್ದಾಣ ನಿರ್ಮಾಣ ಕಾರ್ಯವನ್ನು ನವೆಂಬರ್ 1ರಿಂದ ಆರಂಭಿಸಲು ಉದ್ದೇಶಿಸಲಾಗಿದೆ, ಇದಕ್ಕೆ ಕೇಂದ್ರ ಪರಿಸರ ಇಲಾಖೆ ಅನುಮತಿ ದೊರಕ ಬೇಕು ಎಂದು ಅವರು ಹೇಳಿದರು.
ವಿಮಾನ ನಿಲ್ದಾಣಕ್ಕಾಗಿ 4276 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಪ್ರತಿ ಎಕರೆಗೆ 5 ಲಕ್ಷ ರುಪಾಯಿಯಂತೆ ಪರಿಹಾರ ನೀಡಬೇಕಾಗಿದೆ ಎಂದು ಸಚಿವರು ಹೇಳಿದರು. ಈ ಕಾರ್ಯಕ್ಕಾಗಿ ವಶಪಡಿಸಿಕೊಂಡಿರುವ ಭೂಮಿಯಲ್ಲಿ 1368 ಎಕರೆ ಅರಣ್ಯ ಭೂಮಿಯೂ ಇದೆ ಎಂದು ಅವರು ತಿಳಿಸಿದರು.
ಬಳ್ಳಾರಿ, ಹಾಸನ, ಮೈಸೂರು, ಹುಬ್ಬಳ್ಳಿ ವಿಮಾನ ನಿಲ್ದಾಣಗಳ ಅಭಿವೃದ್ಧಿಪಡಿಸುವ ಕಾರ್ಯಕ್ರಮ ಇದ್ದು, ಮೈಸೂರು, ಬೆಳಗಾವಿ, ಮಂಗಳೂರು ಹಾಗೂ ಹುಬ್ಬಳ್ಳಿಗೆ ವಿಮಾನಯಾನ ಆರಂಭಿಸಲು ಖಾಸಗಿಯವರು ಮುಂದಾದರೆ ಅವರಿಗೆ ಅನುಮತಿ ನೀಡಲಾಗುವುದು, ಈಗಾಗಲೇ ಕೆಲವು ಖಾಸಗಿ ಸಂಸ್ಥೆಗಳು ಈ ಬಗ್ಗೆ ಆಸಕ್ತಿ ತೋರಿವೆ ಎಂದೂ ಅವರು ಹೇಳಿದರು.
(ಇನ್ಫೋ ವಾರ್ತೆ)
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications