ಹುಬ್ಬಳ್ಳಿ ಸಮೀಪ ನಾದಿನಿ ಕಡೆಯವರಿಂದ ಕೊಲೆ ಯತ್ನ
ಹು ಬ್ಬಳ್ಳಿ : ವರದಕ್ಷಿಣೆ ಆರೋಪವನ್ನು ತನ್ನ ಮೇಲೆ ಹೊರಿಸಿದ್ದರ ವಿರುದ್ಧ ಪೋಲಿಸರಿಗೆ ದೂರು ಕೊಡಲು ಹೋಗುತ್ತಿದ್ದ ವ್ಯಕ್ತಿ ಯನ್ನು ಆತನ ಹತ್ತಿರದ ಸಂಬಂಧಿಕರೇ ಇರಿದು ಗಾಯಗೊಳಿಸಿದ್ದಾರೆ. ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತಿಮ್ಮಾಪುರ ಸಮೀಪ ಈ ಘಟನೆ ಬುಧವಾರ ರಾತ್ರಿ ನಡೆದಿದೆ. ಇರಿತಕ್ಕೊಳಗಾಗಿ ತೀವ್ರವಾಗಿ ಗಾಯಗೊಂಡಿರುವ ರಾಜೇಶ್ ಎಂಬ ಈ ಹರಿಜನ ಯುವಕನನ್ನು ಕರ್ನಾಟಕ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಸೇರಿಸಲಾಗಿದೆ. ಆತನ ಪರಿಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿಯ ನಾದಿನಿ ಕಡೆಯವರು ಈ ದುಷ್ಕೃತ್ಯ ನಡೆಸಿದ್ದಾರೆಂದು ಆರೋಪ.
ಸುಮ್ಮಸುಮ್ಮನೆ ಆರೋಪ, ಕಾಂಗ್ರೆಸ್ ಸದಸ್ಯ ಅಮಾನತು : ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಈ ಮಾಸಿಕ ಸಭೆಯಲ್ಲಿ ಬರೀ ಆರೋಪ ಪ್ರತ್ಯಾರೋಪಗಳದ್ದೇ ಪಾರುಪತ್ಯ. ಆಳುವ ಪಕ್ಷ ಹಾಗೂ ವಿರೋಧ ಪಕ್ಷಗಳ ನಡುವೆ ಮಾತುಗಳ ಸಮರವೇ ನಡೆಯಿತು. ಈ ಘಟನೆ ಅಂತಿಮವಾಗಿ ಆಳುವ ಪಕ್ಷದ ಸದಸ್ಯರೊಬ್ಬರನ್ನು ಒಂದು ದಿನದ ಮಟ್ಟಿಗೆ ಅಮಾನತು ಮಾಡುವಲ್ಲಿ ಪರ್ಯವಸಾನವಾಯಿತು.
ಸಾಕ್ಷಿ ಪುರಾವೆ ಯಾವುದೂ ಇಲ್ಲದೆ ಕಮಿಷನರ್ ಮೇಲೆ ಆರೋಪಗಳನ್ನು ಹೊರಿಸುತ್ತಿದ್ದ ಕಾಂಗ್ರೆಸ್ ಪಕ್ಷದ ನಡಾಫ್ ಅವರನ್ನು ಮೇಯರ್ ಸರಳಾ ಭಡ್ಗೆ ಅಮಾನತುಗೊಳಿಸಿದರು. ಭಾರತೀಯ ಜನತಾಪಕ್ಷದ ಸದಸ್ಯರು ಮೇಯರ್ ಅವರ ತೀರ್ಪಿಗೆ ಬೆಂಬಲ ವ್ಯಕ್ತಪಡಿಸಿದರು. ಸಪ್ತಾಪುರ ಬಡಾವಣೆಯಲ್ಲಿ ನಿವೇಶನಗಳಿಗೆ ಗುರುತುಹಾಕುವಾಗ ಕಮಿಷನರ್ ಸಾಹೇಬರು ಬ್ರಷ್ಟಾಚಾರ ಮಾಡುತ್ತಿದ್ದಾರೆ ಎಂದು ನಡಾಫ್ ಆರೋಪ ಮಾಡಿದ್ದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications