ಮತ್ತೆ ಚುರುಕಾದ ಮಳೆರಾಯ
ಬೆಂಗಳೂರು : ದಕ್ಷಿಣ ಒಳನಾಡಿನಲ್ಲಿ ಮುಂಗಾರು ಮತ್ತೆ ಚುರುಕಾಗಿದೆ. ಕಳೆದೆರಡು ದಿನದಿಂದ ವಿಶ್ರಾಂತಿ ಪಡೆದಿದ್ದ ವರುಣದೇವ ಮತ್ತೆ ಪೂರ್ಣ ಪ್ರಮಾಣದಲ್ಲಿ ಕಾರ್ಯೋನ್ಮುಖನಾಗಿದ್ದಾನೆ. ಕರಾವಳಿ ಕರ್ನಾಟಕ ಹಾಗೂ ಉತ್ತರ ಒಳನಾಡಿನ ಕೆಲವೆಡೆಗಳಲ್ಲೂ ಮಳೆಯಾಗಿದೆ.
ಮಂಡ್ಯದಲ್ಲಿ ಅತಿ ಹೆಚ್ಚು ಎಂದರೆ 8 ಸೆಂಟಿ ಮೀಟರ್ ಮಳೆ ಬಿದ್ದಿದೆ. ಕೊಳ್ಳೇಗಾಲ, ಕೆ.ಆರ್. ಸಾಗರ, ಸಕಲೇಶಪುರಗಳಲ್ಲಿ 7 ಸೆಂಟಿ ಮೀಟರ್ ಮಳೆ ಬಿದ್ದಿದೆ. ಆನಂದಾಪುರದಲ್ಲಿ 6, ಬಂಡೀಪುರ, ಚಾಮರಾಜನಗರ, ಹೆಗ್ಗಡದೇವನಕೋಟೆಯಲ್ಲಿ ತಲಾ 5, ಶ್ರವಣಬೆಳಗೊಳ, ವೀರಾಜಪೇಟೆ, ಪಾಂಡವಪುರಗಳಲ್ಲಿ ತಲಾ 4, ಹಳಿಯಾಳ, ಬೇಲೂರು, ಹಳ್ಳಿ ಮೈಸೂರು, ಬಸರಾಳು, ಅಮ್ಟೆಗಳಲ್ಲಿ ತಲಾ 3 ಸೆಂಟಿ ಮೀಟರ್ ಮಳೆ ಆಗಿದ್ದರೆ, ಮಾಗಡಿ, ಅರಸಾಳು, ಹೊಳೆ ನರಸೀಪುರಗಳಲ್ಲಿ 2 ಸೆಂಟಿ ಮೀಟರ್ ಮಳೆ ಆಗಿದೆ. ಅಣ್ಣಿಗೇರಿ, ಚನ್ನಪಟ್ಟಣ, ನಾಪೋಕ್ಲು, ಮೈಸೂರಿನಲ್ಲಿ 1 ಸೆಂಟಿ ಮೀಟರ್ ಮಳೆ ಬಿದ್ದಿದೆ.
ಶನಿವಾರ ಬೆಳಗ್ಗೆಯವರೆಗಿನ ಮುನ್ಸೂಚನೆಯಂತೆ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಗುಡುಗಿನಿಂದ ಕೂಡಿದ ಸುರಿಮಳೆ ಬೀಳುವ ಸಂಭವ ಇದೆ. ಉತ್ತರ ಒಳನಾಡು ಹಾಗೂ ಕರಾವಳಿಯಲ್ಲೂ ಮಳೆ ನಿರೀಕ್ಷಿತ. ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಮುಖ್ಯವಾಗಿ ಮೋಡ ಕವಿದ ವಾತಾವರಣ ಇದ್ದು ಒಂದೆರಡು ಬಾರಿ ಮಳೆ ಬೀಳುವ ಸಂಭವ ಇದೆ. ಬೆಂಗಳೂರಿನಲ್ಲಿ ಗುರುವಾರ ಬೆಳಗ್ಗೆ ಒಣಹವೆ ಇತ್ತು. ಮಧ್ಯಾಹ್ನ ಸ್ವಲ್ಪ ಕಾಲ ಜೋರು ಮಳೆಯೇ ಸುರಿಯಿತು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications