ನಾಪತ್ತೆಯಾಗಿದ್ದ ಭದ್ರಾವತಿ ಶಾಸಕ ಅಪ್ಪಾಜಿ ಬೆಂಗಳೂರಲ್ಲಿ ಪ್ರತ್ಯಕ್ಷ
ಬೆಂಗಳೂರು : ಭದ್ರಾವತಿಯ ಶಾಸಕ ಅಪ್ಪಾಜಿ ಕಾಣೆಯಾಗಿದ್ದಾರೆ ಎಂದು ಇದ್ದಕ್ಕಿದ್ದಂತೆ ಶುಕ್ರವಾರ ರಾತ್ರಿ ಭಾರಿ ಸುದ್ದಿಯಾಯಿತು. ಈಗ ಅಪ್ಪಾಜಿ ತಾವಾಗಿಯೇ ಬೆಂಗಳೂರಿನಲ್ಲಿ ಪ್ರತ್ಯಕ್ಷರಾಗಿದ್ದಾರೆ. ಕಳೆದ ವಾರ ಭದ್ರಾವತಿಗೆ ಹೋಗುವುದಾಗಿ ತಿಳಿಸಿ ಬೆಂಗಳೂರಿನಿಂದ ಹೊರಟ ಅವರು ಬೆಂಗಳೂರಿನಲ್ಲೂ ಇರಲಿಲ್ಲ. ಭದ್ರಾವತಿಗೂ ಹೋಗಲಿಲ್ಲ.
ಶುಕ್ರವಾರ ಅಪ್ಪಾಜಿಯವರ ಸಂಬಂಧಿಕರಾದ ಯೋಗಾನಂದ್ ಎಂಬುವವರು ಅಪ್ಪಾಜಿ ಕಾಣೆಯಾಗಿದ್ದಾರೆ ಎಂದು ವಿಧಾನಸೌಧ ಪೊಲೀಸರಿಗೆ ದೂರು ನೀಡಿದ್ದರು. ಈ ಸುದ್ದಿ ಪತ್ರಿಕೆಗಳಲ್ಲಿ ಶನಿವಾರ ಬಂದೊಡನೆಯೇ ಯೋಗಾನಂದ್ ಅವರಿಗೆ ಫೋನ್ ಮಾಡಿದ ಶಾಸಕರು, ತಾವು ಮೈಸೂರಿನಲ್ಲಿರುವುದಾಗಿ, ಕೂಡಲೇ ಬೆಂಗಳೂರಿಗೆ ಬರುತ್ತಿದ್ದೇನೆ ಎಂದು ತಿಳಿಸಿದರು.
ಈಗ ಶಾಸಕ ಅಪ್ಪಾಜಿ ಬೆಂಗಳೂರಿಗೆ ಬಂದಿದ್ದಾರೆ ಎಂಬುದನ್ನು ನಗರ ಪೊಲೀಸ್ ಆಯುಕ್ತ ಟಿ. ಮಡಿಯಾಳ್ ಖಚಿತ ಪಡಿಸಿದ್ದಾರೆ. ಅಪ್ಪಾಜಿ ಅವರು ನಾಪತ್ತೆಯಾದ ಬಗ್ಗೆ ಪೊಲೀಸರು ದೂರು ದಾಖಲಿಸಿಕೊಂಡಿಲ್ಲ, ಆದರೆ ನಾಪತ್ತೆಯ ನಾಟಕದ ಹಿಂದಿನ ರಹಸ್ಯ ಭೇದಿಸಲು ವಿಚಾರಣೆ ನಡೆಸುವುದಾಗಿ ತಿಳಿಸಿದ್ದಾರೆ. ಭದ್ರಾವತಿಗೆ ಹೋಗುವುದಾಗಿ ತಿಳಿಸಿ ಸೆ. 8ರಂದು ಬೆಂಗಳೂರು ಬಿಟ್ಟ ಶಾಸಕರು ಮೈಸೂರಿಗೆ ಏಕೆ ಹೋಗಿದ್ದರು? ಅವರ ಕುಟುಂಬದವರಿಗೂ ಈ ಬಗ್ಗೆ ಮಾಹಿತಿ ನೀಡದಿದ್ದುದು ಏಕೆ? ಎಂಬಿತ್ಯಾದಿ ಪ್ರಶ್ನೆಗಳಿಗೆ ವಿಚಾರಣೆಯ ನಂತರ ಉತ್ತರ ಸಿಕ್ಕೀತು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications