ಮಲ್ಲಿಗೆಯ ಕವಿಗೆ ದಸರಾ ಕವಿಗೋಷ್ಠಿ ಅಧ್ಯಕ್ಷತೆ
ಮೈಸೂರು : ಈ ಬಾರಿಯ ದಸರಾ ಕವಿಗೋಷ್ಠಿ ಅಧ್ಯಕ್ಷತೆಯನ್ನು ಹಿರಿಯ ಕವಿ ಮೈಸೂರು ಮಲ್ಲಿಗೆ ಖ್ಯಾತಿಯ ಕೆ.ಎಸ್. ನರಸಿಂಹಸ್ವಾಮಿ ವಹಿಸಲಿದ್ದಾರೆ.
ಸಹಸ್ರಮಾನದ ಮೊದಲ ದಸರಾ ಉತ್ಸವದ ಕವಿಗೋಷ್ಠಿಯನ್ನು ವಿಶಿಷ್ಠವಾಗಿ ಆಚರಿಸಲು ನಿರ್ಧರಿಸಿದ್ದು, ನಾಡಿನ ಹಿರಿಯ ಕವಿ-ಕವಯತ್ರಿಯರನ್ನು ಗೋಷ್ಠಿಗೆ ಆಹ್ವಾನಿಸಲಾಗಿದೆ ಎಂದು ಕವಿಗೋಷ್ಠಿ ಉಪಸಮಿತಿ ಅಧ್ಯಕ್ಷ ಮಾನಸ ಗಂಗೋತ್ರಿಯ ಕನ್ನಡ ಅಧ್ಯಯನ ಸಂಸ್ಥೆಯ ಮುಖ್ಯಸ್ಥರಾದ ಡಾ. ಸಿ. ಪಿ. ಸಿದ್ಧಾಶ್ರಮ ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಕವಿಗೋಷ್ಠಿ ಅಕ್ಟೋಬರ್ 7ರಂದು ಸಂಜೆ ಜಗನ್ಮೋಹನ ಅರಮನೆಯಲ್ಲಿ ಸಂಜೆ 6ಕ್ಕೆ ನಡೆಯಲಿದೆ. ಗೋಷ್ಠಿಯಲ್ಲಿ ತುಳು, ಕೊಂಕಣಿ, ಉರ್ದು, ಸಂಸ್ಕೃತ ಮತ್ತು ಕೊಡವ ಭಾಷೆಗಳ ಕವಿಗಳು ಭಾಗವಹಿಸಲಿದ್ದಾ ರೆ. ಕನ್ನಡದ ಹಿರಿಯ ಕವಿಗಳಾದ ಜಿ. ಎಸ್. ಶಿವರುದ್ರಪ್ಪ, ಚನ್ನವೀರ ಕಣವಿ, ಕೆ. ಎಸ್. ನಿಸಾರ್ ಅಹಮದ್, ರಾಮಚಂದ್ರ ಶರ್ಮ, ಸುಮತೀಂದ್ರ ನಾಡಿಗ, ಸಿದ್ಧಲಿಂಗ ಪಟ್ಟಣಶೆಟ್ಟಿ, ಶಾಂತರಸ, ಅಕಬರ್ ಆಲಿ, ಸುಜನಾ ಮತ್ತು ಪ್ರೊ.ಸಿದ್ಧಲಿಂಗಯ್ಯ ಸೇರಿದಂತೆ 20 ಕವಿಗಳು ಭಾಗವಹಿಸಲಿದ್ದಾರೆ.
ಗೋಷ್ಠಿಯಲ್ಲಿ ಐವರು ಕವಿಯತ್ರಿಯರು ಭಾಗವಹಿಸುತ್ತಿದ್ದು , ಹಿರಿಯ ಕವಿಗಳೇ ಇರುವ ಕವಿಗೋಷ್ಠಿ ನಡೆಯುತ್ತಿರುವುದು ಇದೇ ಮಾದಲ ಬಾರಿ ಎಂದು ಭಾವಿಸಲಾಗಿದೆ ಎಂದು ಸಿದ್ಧಾಶ್ರಮ ಹೇಳಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications