ಉನ್ನತಾಧಿಕಾರಿಗಳೊಂದಿಗೆ ಖರ್ಗೆ ದಿಢೀರ್ ಚೆನ್ನೈಗೆ
ಚೆನ್ನೈ : ರಾಜ್‌ಕುಮಾರ್ ಅಪಹರಣವಾಗಿ 50 ದಿನ ಕಳೆದಿದೆ. ನ್ಯಾಯಾಲಯದ ತಡೆ, ವೀರಪ್ಪನ್ ಬಿಗಿಪಟ್ಟಿನಿಂದ ರಾಜ್ ಬಿಡುಗಡೆಯ ಬಿಕ್ಕಟ್ಟು ಮತ್ತಷ್ಟು ಬಿಗಡಾಯಿಸಿದೆ. ಈ ಮಧ್ಯೆ ರಾಜ್ಯದ ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಗೃಹ ಕಾರ್ಯದರ್ಶಿ ಪ್ರಸಾದ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಕೆ.ಆರ್. ಶ್ರೀನಿವಾಸ್ ಸೋಮವಾರ ಚೆನ್ನೈಗೆ ಹೋಗಿದ್ದಾರೆ.
ರಾಜ್ ಬಿಡುಗಡೆ ಸಂಬಂಧ ತಮಿಳುನಾಡಿನ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರೊಂದಿಗೆ ಖರ್ಗೆ ಮಾತುಕತೆ ನಡೆಸಲಿದ್ದಾರೆ. ಟಾಡಾ ಬಂದಿಗಳ ಬಿಡುಗಡೆಗೆ ಸರ್ವೋನ್ನತ ನ್ಯಾಯಾಲಯ ನೀಡಿರುವ ತಡೆಯಾಜ್ಞೆಯನ್ನು ತೆರವು ಗೊಳಿಸುವಂತೆ ರಾಜ್ಯ ಸರಕಾರ ಸಲ್ಲಿಸಿರುವ ಪ್ರತಿ ಪ್ರಮಾಣಪತ್ರದ ಮೇಲಿನ ವಿಚಾರಣೆ ನಾಳೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಖರ್ಗೆ ಅವರ ಚೆನ್ನೈ ಭೇಟಿಗೆ ಮಹತ್ವ ಬಂದಿದೆ.
ಈ ದಿಢೀರ್ ಚೆನ್ನೈ ಭೇಟಿಗೆ ಕಾರಣವೇನು ಎಂಬುದಕ್ಕೆ ಖರ್ಗೆ ಸರಿಯಾದ ಉತ್ತರ ನೀಡಿಲ್ಲ. ಕರುಣಾನಿಧಿ ಅವರ ಭೇಟಿಯ ನಂತರ ಈ ಬಗ್ಗೆ ಮಾತನಾಡುವುದಾಗಿ ತಿಳಿಸಿದ್ದಾರೆ. ಮಂಗಳವಾರ ಸರ್ವೋನ್ನತ ನ್ಯಾಯಾಲಯದ ತೀರ್ಪು ಹೊರ ಬಿದ್ದ ನಂತರ ಎರಡೂ ರಾಜ್ಯಗಳ ಸಂಧಾನಕಾರ ಆರ್.ಆರ್. ಗೋಪಾಲ್ ಮತ್ತೆ ಕಾಡಿಗೆ ಹೋಗುವ ಸಾಧ್ಯತೆ ಇದ್ದು, ಈ ಬಗ್ಗೆ ಮಾತುಕತೆ ನಡೆಸಲು ಖರ್ಗೆ ಅವರು ಚೆನ್ನೈಗೆ ಬಂದಿದ್ದಾರೆ ಎಂದು ಶಂಕಿಸಲಾಗಿದೆ.
50 ದಿನದಲ್ಲಿ ಆದದ್ದೇನು ? : ರಾಜ್ ಅಪಹಣದ 50 ದಿನಗಳಲ್ಲಿ ಏನೇನಾಯಿತು ಎಂದು ಬರೆಯಲು 50 ಪುಟವೂ ಸಾಲದು. ಚಿತ್ರೋದ್ಯಮದ ಚಟುವಟಿಕೆಗಳು ಸ್ತಬ್ಧವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಬೊಕ್ಕಸಕ್ಕೆ ಕೋಟ್ಯಂತರ ರುಪಾಯಿ ನಷ್ಟ ಸಂಭವಿಸಿರುವುದಂತೂ ಸತ್ಯ. ಈ ಮಧ್ಯೆ ಮುಂದಿನ ಸೋಮವಾರದಿಂದ ಚಿತ್ರೀಕರಣವೂ ಸೇರಿದಂತೆ ಎಲ್ಲ ರೀತಿಯ ಚಿತ್ರ ಚಟುವಟಿಕೆಗಳನ್ನೂ ಪುನಾರಂಭಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಲಿ ನಿರ್ಧಾರ ಕೈಗೊಂಡಿದೆ. ರಾಜ್ ಬಿಡುಗಡೆಗ ಒತ್ತಾಯಿಸಿ ಭಾರಿ ಪ್ರತಿಭಟನಾ ಪ್ರದರ್ಶನ ನಡೆಸಲೂ ತೀರ್ಮಾನಿಸಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications