ತುಂಬಿ ಹರಿಯುತ್ತಿದೆ ಬೆಣ್ಣೆ ಹಳ್ಳ - ಜನರಿಗೆ ಮುನ್ಸೂಚನೆ
ಹುಬ್ಬಳ್ಳಿ : ಇಲ್ಲಿಗೆ ಸಮೀಪದ ಬೆಣ್ಣೆಹಳ್ಳ ನಾಲೆಯ ದಂಡೆಯಲ್ಲಿರುವ ಐದು ಹಳ್ಳಿಗಳ ಜನರಿಗೆ ಸುರಕ್ಷಿತ ಸ್ಥಳಗಳಿಗೆ ಹೋಗುವಂತೆ ಸೋಮವಾರ ಸೂಚನೆ ನೀಡಲಾಗಿದೆ.
ಈ ಭಾಗದಲ್ಲಿ ಭಾನುವಾರ ಬೆಳಗ್ಗಿನಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ, ನಾಲೆಯಲ್ಲಿ ನೀರು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದ್ದು, ನೀರಿನ ಮಟ್ಟ ಇನ್ನೂ ಹೆಚ್ಚಾಗುವ ಸಂಭವವಿರುವ ಹಿನ್ನಲೆಯಲ್ಲಿ ಈ ಸೂಚನೆ ನೀಡಲಾಗಿದೆ.
ಭಾರಿ ಮಳೆಯಿಂದಾಗಿ ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಲ್ಲಿ ಮನೆಗಳು ಕುಸಿದಿದ್ದು, ಅನೇಕ ಕಟ್ಟಡಗಳಿಗೆ ಹಾನಿಯಾಗಿದೆ. ತಗ್ಗು ಪ್ರದೇಶಗಳಲ್ಲಿರುವ ಜನರಿಗೆ ತೀವ್ರ ತೊಂದರೆಯಾಗಿದ್ದು, ಸಾಮಾನ್ಯ ಜನಜೀವನ ಅಸ್ಥವ್ಯಸ್ಥಗೊಂಡಿದ್ದು, ಯಾವುದೇ ಸಾವು-ನೋವು ವರದಿಯಾಗಿಲ್ಲ. ಒಂದೇ ದಿನದಲ್ಲಿ ಇಲ್ಲಿ 112.5 ಮಿ.ಮೀಟರ್ ಮಳೆ ದಾಖಲಾಗಿದೆ.
ನವಲಗುಂದದಿಂದ ಬಾಗಲಕೋಟೆ ಹೆದ್ದಾರಿಯಲ್ಲಿ ಬೆಣ್ಣೆ ಹಳ್ಳದ ಸೇತುವೆ ಮೇಲೂ ರಭಸದಿಂದ ನೀರು ಹರಿಯುತ್ತಿದ್ದು, ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ತಾಲೂಕಿನ ಇತರ ಎಲ್ಲ ಕೆರೆ ಕಟ್ಟೆಗಳೂ ತುಂಬಿವೆ. ಮಾರ್ಗ ಬದಲಿಸಿ ಸಂಚಾರವನ್ನು ಸುಗಮಗೊಳಿಸುವ ಕಾರ್ಯ ಮುಂದುವರಿದಿದೆ.
ಭಾರಿ ಮಳೆ ಹಾಗೂ ಪ್ರವಾಹದ ಕಾರಣ ಬೆಳೆದು ನಿಂತಿದ್ದ ಬೆಳೆಗಳಿಗೆ ಭಾರಿ ಹಾನಿ ಉಂಟಾಗಿದೆ. ನವಲಗುಂದ ಹತ್ತಿರದ ಯಮನೂರು ಜಲಾವೃತವಾಗಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications