ಶಿವಮೊಗ್ಗ : ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ
ಶಿವಮೊಗ್ಗ : ಕಲ್ಲುತೂರಾಟದಲ್ಲಿ ತೊಡಗಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಇಲ್ಲಿನ ಜಿಲ್ಲಾಪಂಚಾಯಿತಿ ಕಚೇರಿಯಲ್ಲಿ ಮುಖ್ಯಮಂತ್ರಿ ಕೃಷ್ಣ ಅವರು, ಪರಿಶೀಲನಾ ಸಭೆ ನಡೆಸುತ್ತಿದ್ದ ಸಂದರ್ಭದಲ್ಲಿ ಹೊರಗಡೆ ಘೋಷಣೆಗಳನ್ನು ಕೂಗುತ್ತಿದ್ದ ಕಾರ್ಯಕರ್ತರ ಗುಂಪನ್ನು ಚದುರಿಸಲು ಲಾಠಿ ಪ್ರಹಾರ ನಡೆಸುವುದು ಅನಿವಾರ್ಯವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ರಾಜ್ಯದ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಬೆಂಬಲಿಗರು ಎಂದು ಹೇಳಲಾದ ಕಾಂಗ್ರೆಸ್ ಕಾರ್ಯಕರ್ತರು ಸ್ಥಳೀಯ ಕಾಂಗ್ರೆಸ್ ಶಾಸಕರ ವಿರುದ್ಧ ಘೋಷಣೆಗಳನ್ನು ಕೂಗಿ, ತಮ್ಮನ್ನು ಸುತ್ತುವರಿದ ಪೊಲೀಸರ ಮೇಲೆ ಕಲ್ಲು ತೂರುವ ಮೂಲಕ ಲಾಠಿ ಪ್ರಹಾರ ನಡೆಯಲೂ ಕಾರಣರಾದರು.
ಇದಕ್ಕೂ ಮುನ್ನ ಸ್ಥಳೀಯ ಶಾಸಕರ ವಿರುದ್ಧ ಘೋಷಣೆ ಕೂಗುತ್ತಿದ್ದ ಕಾರ್ಯಕರ್ತರೊಬ್ಬರಿಗೆ ರಾಜ್ಯ ಸಮಾಜ ಕಲ್ಯಾಣ ಸಚಿವ ಕಾಗೋಡು ತಿಮ್ಮಪ್ಪ ಕಪಾಳಮೋಕ್ಷ ಮಾಡಿದ್ದೇ ಈ ಪರಿಸ್ಥಿತಿಗೆ ಕಾರಣವಾಯಿತು. ಸ್ಥಳೀಯ ಶಾಸಕರ ಮನೆಯಲ್ಲಿ ಮುಖ್ಯಮಂತ್ರಿಗಳು ಬೆಳಗಿನ ಉಪಾಹಾರ ಸೇವಿಸಿದ್ದೂ, ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿತ್ತು. ಈಗ ಪರಿಸ್ಥಿತಿ ಶಾಂತವಾಗಿದೆ. (ಯು.ಎನ್.ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications