ಮುಂದುವರಿದ ಮಳೆಯ ಆರ್ಭಟ
ಬೆಂಗಳೂರು : ಹವಾಮಾನ ಇಲಾಖೆ ಊಹಿಸಿದ್ದಂತೆ ಕಳೆದ ಎರಡು ದಿನಗಳಿಂದ ಬೆಂಗಳೂರಿನ ಹವಾಮಾನದಲ್ಲಿ ಭಾರಿ ಬದಲಾವಣೆ ಉಂಟಾಗಿದೆ. ಶನಿವಾರ ರಾತ್ರಿ ನಾಲ್ಕು ಗಂಟೆಗಳ ಕಾಲ ಧಾರಾಕಾರವಾಗಿ ಮಳೆ ಬಿದ್ದಿದೆ. ಶನಿವಾರ ನಗರದಲ್ಲಿ 7 ಸೆಂಟಿ ಮೀಟರ್ ಮಳೆ ಬಿದ್ದಿತ್ತು. ಭಾನುವಾರ ರಾತ್ರಿ ಸಹ ಮಳೆ ಆಯಿತು. ಬೆಂಗಳೂರು ವಿಮಾನ ನಿಲ್ದಾಣದಲ್ಲಿ 2 ಸೆಂಟಿ ಮೀಟರ್ ಮಳೆ ದಾಖಲಾಗಿದೆ.
ರಾಜ್ಯದ ಇತರೆಡೆಗಳಲ್ಲೂ ಕಳೆದೆರಡು ದಿನಗಳಲ್ಲಿ ಮಳೆ ಬಿದ್ದಿದೆ. ಹುಬ್ಬಳ್ಳಿಯಲ್ಲಿ ನಾಲ್ಕು ಗಂಟೆಗಳ ಕಾಲ ಸತತವಾಗಿ ಸುರಿದ ಮಳೆಗೆ 40 ಅಡಿ ಉದ್ದದ ಕಾಂಪೌಂಡ್ ನೆಲಕಚ್ಚಿದೆ. ನಾಗಶೆಟ್ಟಿ ಕೊಪ್ಪ, ಇಂದಿರಾ ಕಾಲೋನಿಯ ಮನೆಗಳಿಗೆಲ್ಲಾ ನೀರು ನುಗ್ಗಿದೆ. ನಾಲೆಯ ಪಕ್ಕದ ಮನೆಗಳು ಕುಸಿಯುವ ಹಂತದಲ್ಲಿವೆ. ಕೆಲವು ಗೋಡೆಗಳ ಬಿರುಕು ಬಿಟ್ಟಿವೆ.
ರಾಜ್ಯದಲ್ಲಿ ಉತ್ತರ ಒಳನಾಡಿನಲ್ಲಿ ಮುಂಗಾರು ತೀವ್ರಗೊಂಡಿದೆ. ಕರಾವಳಿ ಕರ್ನಾಟಕದಲ್ಲಿ ದುರ್ಬಲವಾಗಿದೆ. ದಕ್ಷಿಣ ಒಳನಾಡಿನ ಅಲ್ಲಲ್ಲಿ ಚದುರಿದಂತೆ ಮಳೆ ಬಿದ್ದಿದೆ. ನವಲಗುಂದದಲ್ಲಿ ಅತಿ ಹೆಚ್ಚು ಎಂದರೆ 10 ಸೆಂಟಿ ಮೀಟರ್, ಕಲದಗಿಯಲ್ಲಿ 8, ಸವದತ್ತಿ, ಲಕ್ಷ್ಮೇಶ್ವರ, ಗುಲ್ಬರ್ಗಾಗಳಲ್ಲಿ ತಲಾ 7 ಸೆಂಟಿ ಮೀಟರ್, ಯಲ್ಲಾಪುರ, ಲೋಂಡಾ, ಕೂಡ್ಲಿಗಿಯಲ್ಲಿ ತಲಾ 5, ಚಿತ್ತಾಪುರ, ಯಾದಗಿರಿ, ಗುಳೇದಗುಡ್ಡ, ನರಗುಂದ, ಬಾಗಲಕೋಟೆಯಲ್ಲಿ 4, ಮಹಾಲಿಂಗಪುರ, ಮುಧೋಳ, ಇಳಕಲ್, ಲೋಕಾಪುರ, ಜಮಖಂಡಿ, ಖಾನಾಪುರ, ಇಂಡಿ, ಚಿಂತಾಮಣಿ, ದೇವನಹಳ್ಳಿಗಳಲ್ಲಿ ತಲಾ 3, ಬ್ಯಾಡಗಿ, ಕೊಪ್ಪಳ, ಬೆಂಗಳೂರು ವಿಮಾನ ನಿಲ್ದಾಣಗಳಲ್ಲಿ ತಲಾ 2 ಸೆಂಟಿ ಮೀಟರ್ ಮಳೆ ಆಗಿದೆ.
ಬುಧವಾರ ಬೆಳಗಿನವರೆಗಿನ ಮುನ್ಸೂಚನೆಯಂತೆ ಒಳನಾಡಿನ ಅನೇಕ ಕಡೆಗಳಲ್ಲಿ ಹಾಗೂ ಕರಾವಳಿಯ ಕೆಲವು ಕಡೆ ತುಂತುರು ಮಳೆ ಬೀಳುವ ಸಂಭವ ಇದೆ. ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಏನೂ ಕಂಡು ಬರುವುದಿಲ್ಲ ಎನ್ನುತ್ತದೆ ಹವಾಮಾನ ಇಲಾಖೆ.
ಸ್ಥಳೀಯ ಮುನ್ಸೂಚನೆಯಂತೆ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇದ್ದು, ಸಂಜೆ ಅಥವಾ ರಾತ್ರಿ ಮಳೆ ಅಥವಾ ಗುಡುಗಿನಿಂದ ಕೂಡಿದ ಸುರಿಮಳೆ ಬೀಳುವ ಸಾಧ್ಯತೆ ಇದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications