ವಿಶ್ವ ವಾಣಿಜ್ಯ ಒಪ್ಪಂದದ ಅಪಾಯದ ಬಗ್ಗೆ ಜನಜಾಗೃತಿ
ಮಂಡ್ಯ : ವಿಶ್ವವಾಣಿಜ್ಯ ಒಪ್ಪಂದ ಹಾಗೂ ಮುಕ್ತ ಮಾರುಕಟ್ಟೆ ನೀತಿಯಿಂದ ಉಂಟಾಗುತ್ತಿರುವ ಹಾಗೂ ಮುಂದಿನ ವರ್ಷಗಳಲ್ಲಿ ಉಂಟಾಗುವ ಅಪಾಯದ ಬಗ್ಗೆ ಜನ ಜಾಗೃತಿ ಉಂಟು ಮಾಡಲು ಭಾರತೀಯ ಕಿಸಾನ್ ಸಂಘ ಸರಣಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದೆ ಎಂದು ಭಾರತೀಯ ಕಿಸಾನ್ ಸಂಘದ ರಾಷ್ಟ್ರೀಯ ಉಪಾಧ್ಯಕ್ಷ ಭಾಸ್ಕರ ರಾವ್ ತಿಳಿಸಿದ್ದಾರೆ.
ವಿಶ್ವ ವ್ಯಾಪಾರ ಸಂಘಟನೆಯ ಒಪ್ಪಂದಗಳಿಂದಾಗಿ ಈಗಾಗಲೇ 700ಕ್ಕೂ ಹೆಚ್ಚು ವಸ್ತುಗಳು ಯಾವ ಅಡ್ಡಿ ಆತಂಕಗಳಿಲ್ಲದೆ ಭಾರತಕ್ಕೆ ಆಮದಾಗುತ್ತಿವೆ. ಮುಂದಿನ ವರ್ಷದ ಏಪ್ರಿಲ್ ಹೊತ್ತಿಗೆ ಮತ್ತೂ ಕೆಲವು ಪದಾರ್ಥಗಳಿಗೆ ಅನುಮತಿ ದೊರಕಲಿದ್ದು, ರೈತರಿಗೆ ಇದರಿಂದ ಭಾರಿ ಅನ್ಯಾಯ ಆಗುತ್ತದೆ ಎಂದು ಅವರು ತಿಳಿಸಿದರು. ಭಾರತ ಈಗ ಜಾರಿಗೆ ತಂದಿರುವ ಆಮದು ನೀತಿಯನ್ನು ಕೈಬಿಡಬೇಕು ಎಂದಿರುವ ಅವರು, ಜನವರಿ 26ರಂದು ಬೃಹತ್ ಪ್ರತಿಭಟನೆ ನಡೆಸಲು ಸಂಘ ಉದ್ದೇಶಿಸಿದ್ದು, ಈ ಸಂಬಂಧ ರೈತರಲ್ಲಿ ಜಾಗೃತಿ ಮೂಡಿಸಲು ಪಾದಯಾತ್ರೆ ನಡೆಸುತ್ತಿರುವುದಾಗಿ ತಿಳಿಸಿದರು.
ಪೆಪ್ಸಿ, ಕೋಕಾಕೋಲಾ ಮುಂತಾದ ಹಲವು ಎಂ.ಎನ್.ಸಿ.ಗಳು ನಮ್ಮ ದೇಶದ ಸಾವಿರಾರು ಕೋಟಿ ರುಪಾಯಿಗಳನ್ನು ವಿದೇಶಕ್ಕೆ ಒಯ್ಯುತ್ತಿವೆ ನಮ್ಮ ದೇಶದ ಬೊಕ್ಕಸವನ್ನು ಬರಿದು ಮಾಡುತ್ತಿವೆ ಎಂದು ಆರೋಪಿಸಿದರು. ಈ ಸಂದರ್ಭದಲ್ಲಿ ಪ್ರಾಂತ ಸಂಘಟನಾ ಕಾರ್ಯದರ್ಶಿ ಶಿವ, ಜಿಲ್ಲಾ ಶಾಖೆಯ ಅಧ್ಯಕ್ಷ ಜವರೇಗೌಡ, ಜಿಲ್ಲಾ ಸಮಿತಿಯ ಮಹಿಳಾ ಅಧ್ಯಕ್ಷೆ ಡಾ. ಹೇಮಾವತಿ ಉಪಸ್ಥಿತರಿದ್ದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications