ತೈಲಾಗಾರದ ಪೈಪ್‌ಲೈನ್ ಯೋಜನೆಗೆ ವಿರೋಧ
ಮಂಗಳೂರು :ಪೈಪ್‌ಲೈನ್ ಮೂಲಕ ತೈಲ ಸಾಗಿಸುವ ಯೋಜನೆಗೆ ಭಾರಿ ವಿರೋಧ ಕೇಳಿಬಂದಿದೆ. ಈ ಸಂಬಂಧ ಸೋಮವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಂಗಳೂರು ತೈಲಾಗಾರದ ಉತ್ಪನ್ನಗಳನ್ನು ರೈಲು ಮಾರ್ಗದ ಮೂಲಕವೇ ಸಾಗಿಸಬೇಕು ಎಂದು ಎಚ್‌ಪಿಸಿಎಲ್ ಪೈಪ್‌ಲೈನ್ ಸಂತ್ರಸ್ತರು ಪಟ್ಟು ಹಿಡಿದರು.
ಎಂಆರ್‌ಪಿಎಲ್ ತೈಲೋತ್ಪನ್ನ ಸಾಗಿಸಲು ಎಚ್‌ಪಿಸಿಎಲ್ ಪ್ರಸ್ತಾಪಿಸಿರುವ ಮಂಗಳೂರು - ಬೆಂಗಳೂರು ನಡುವಣ 364 ಕಿ.ಮೀಟರ್ ಉದ್ದದ ಪೈಪ್‌ಲೈನ್ ಕಾಮಗಾರಿಗೆ ಸೋಮವಾರ ನಡೆದ ಸಭೆಯಲ್ಲಿ ತೀವ್ರ ವಿರೋಧ ವ್ಯಕ್ತವಾಯಿತು. ಸಂತ್ರಸ್ತರಿಗೆ ಮಾಹಿತಿ ನೀಡಲೆಂದು ಕರೆದಿದ್ದ ಈ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಉಸ್ತುವಾಸಿ ಸಚಿವ ರಮಾನಾಥ ರೈ ವಹಿಸಿದ್ದರು.
ಈ ಯೋಜನೆಯ ಪೂರ್ವಭಾವಿ ಕಾಮಗಾರಿ ಈಗಾಗಲೇ ಪ್ರಗತಿಯಲ್ಲಿದೆ ಭೂಸ್ವಾಧೀನ ಕಾರ್ಯ ಮುಗಿದಿದ್ದು, ಕಾಮಗಾರಿ ಆರಂಭದ ಹಂತದಲ್ಲಿದೆ. ಪೈಪ್‌ಲೈನ್ ಕೃಷಿ ಭೂಮಿ, ಮನೆ ಇರುವ ಪ್ರದೇಶಗಳ ಮೂಲಕ ಹಾದು ಹೋಗಲಿದ್ದು, ಜನರಿಗೆ ತೊಂದರೆಯಾಗುತ್ತದೆ ಎಂದು ಸಂತ್ರಸ್ತರು ಹಾಗೂ ಪರಿಸರ ವಾದಿಗಳು ವಾದಿಸಿದರು.
ಈ ಕಾರ್ಯ ಆರಂಭಿಸುವ ಮುನ್ನ ಭೂಸ್ವಾಧೀನಾಧಿಕಾರಿಗಳು ಸ್ಥಳೀಯನ್ನು ವಿಶ್ವಾಸಕ್ಕೂ ತೆಗೆದುಕೊಂಡಿಲ್ಲ. ಅವರಿಗೆ ಕನಿಷ್ಠ ಮಾಹಿತಿಯನ್ನೂ ನೀಡಿಲ್ಲ ಎಂದು ಆಕ್ಷೇಪಿಸಿದರು. ಈ ಯೋಜನೆಗೆ ರೈಲು ಮಾರ್ಗವೇ ಸುರಕ್ಷಿತ ಎಂದೂ ಪಟ್ಟುಹಿಡಿದರು.
ಸಚಿವರ ಸೂಚನೆ : ಯೋಜನೆ ಕೈಗೆತ್ತಿಕೊಳ್ಳುವ ಮುನ್ನ ಪಾರದರ್ಶಕವಾಗಿಯೂ ಹಾಗೂ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮಾಹಿತಿ ನೀಡುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಪೈಪ್‌ಲೈನ್ ಯೋಜನೆ ಅನುಷ್ಠಾನಕ್ಕೆ ತರುತ್ತಿರುವ ಪೆಟ್ರೋನೆಟ್‌ನ ಎಸ್.ಬಿ. ಪಾಂಡೆ, ಭೂಸ್ವಾಧೀನ ಅಧಿಕಾರಿ ಆನಂದ ಮಲ್ಯ, ಜಿಲ್ಲಾಧಿಕಾರಿ ಕಪಿಲ್ ಮೋಹನ್ ಇದ್ದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications