ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಅಕ್ಟೋಬರ್ 17ರಂದು ಮಧ್ಯಾಹ್ನ 12.31ಕ್ಕೆ ತೀರ್ಥೋದ್ಭವ
ಮಡಿಕೇರಿ : ಅಕ್ಟೋಬರ್ 17ರಂದು ತುಲಾಸಂಕ್ರಮಣ. ಭಾರತೀಯ ಕಾಲಮಾನದ ರೀತ್ಯ ಅಂದು ಮಧ್ಯಾಹ್ನ 12.31ಕ್ಕೆ ತಲಕಾವೇರಿಯ ಕುಂಡಿಕೆಯಲ್ಲಿ ತೀರ್ಥೋದ್ಭವ ಆಗಲಿದೆ.
ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರೂ ಸೇರಿದಂತೆ ಕಾವೇರಿ ಕಣಿವೆಯ ಎಲ್ಲ ಶಾಸಕರು ಮತ್ತು ಸಂಸತ್ ಸದಸ್ಯರು ಅಂದು ತಲಕಾವೇರಿಗೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ತೆರಿಗೆ ಸುಧಾರಣಾ ಆಯೋಗದ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರು ಸಹ ಅ.16ರಂದು ಇಲ್ಲಿಗೆ ಭೇಟಿ ನೀಡುವ ಕಾರ್ಯಕ್ರಮ ಇದೆ.
ತಲಕಾವೇರಿಯಲ್ಲಿ ತೀರ್ಥೋದ್ಭವ ಆಗುತ್ತಿರುವ ಹಿನ್ನೆಲೆಯಲ್ಲಿ ಭಾಗಮಂಡಲ ಹಾಗೂ ತಲಕಾವೇರಿ ಪ್ರದೇಶದ ವ್ಯಾಪ್ತಿಯಲ್ಲಿ ಅಕ್ಟೋಬರ್ 16ರಿಂದ 18ರವರೆಗೆ ಮದ್ಯ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳಾದ ಜಯಂತಿ ಅವರು ಆದೇಶ ಹೊರಡಿಸಿದ್ದಾರೆ.