ಶಿಕ್ಷಣ ಶುಲ್ಕ ಹೆಚ್ಚಳ : 29ರಂದು ವಿಧಾನಸೌಧ ಚಲೋ
ಹುಬ್ಬಳ್ಳಿ : ಕರ್ನಾಟಕ ಸರಕಾರ ಕಾಲೇಜು, ವೃತ್ತಿ ಶಿಕ್ಷಣ ಕಾಲೇಜುಗಳ ಶುಲ್ಕವನ್ನು ಏರಿಸಿರುವುದನ್ನು ಪ್ರತಿಭಟಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಸ್.ಎಫ್.ಐ) ಮತ್ತು ಡಿವೈಎಫ್ಐ, ಸೆ. 29ರಂದು ವಿಧಾನಸೌಧ ಚಲೋ ಕಾರ್ಯಕ್ರಮ ನಡೆಸಲಿದೆ.
ಈ ವಿಷಯವನ್ನು ಎಸ್.ಎಫ್.ಐನ ರಾಜ್ಯ ಉಪಾಧ್ಯಕ್ಷ ಯುವರಾಜ ಪಿ. ಕಂಬಾಳಿಮಠ ತಿಳಿಸಿದ್ದಾರೆ. ಶಿಕ್ಷಣ ಶುಲ್ಕ ಏರಿಕೆ, ಹಾಸ್ಟೆಲ್ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳ ಬೇಡಿಕೆಯ ಈಡೇರಿಕೆ ಸೇರಿದಂತೆ ಗ್ರಾಮೀಣ ವಿದ್ಯಾರ್ಥಿಗಳ ಕೃಪಾಂಕ ವಿಷಯಕ್ಕೆ ಸಂಬಂಧಿಸಿದಂತೆ ಕಾನೂನು ರಚನೆ, ನಿರುದ್ಯೋಗ ಭತ್ಯೆ ನೀಡಿಕೆಗೆ ವಿಧಾನಸೌಧ ಚಲೋ ಸಂದರ್ಭದಲ್ಲಿ ಒತ್ತಾಯಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯ ಹಾಗೂ ಕೇಂದ್ರ ಸರಕಾರದ ಶಿಕ್ಷಣ ವಿರೋಧಿ ನೀತಿಯಿಂದಾಗಿ ಇಂದು ಶಿಕ್ಷಣ ವ್ಯಾಪಾರವಾಗುತ್ತಿದೆ. ತನ್ನ ನೈತಿಕ ಮೌಲ್ಯವನ್ನೇ ಕಳೆದುಕೊಳ್ಳುತ್ತಿದೆ. ಖಾಸಗಿ ವಿಶ್ವ ವಿದ್ಯಾಲಯಗಳ ಸ್ಥಾಪನೆ ಸಂಬಂಧ ಸಚಿವರುಗಳು ಹೇಳಿಕೆ ನೀಡಿದ್ದಾರೆ ಇದು ಸಂವಿಧಾನ ಬಾಹಿರವಾದದ್ದು ಎಂದು ಅವರು ಆರೋಪಿಸಿದ್ದಾರೆ. ಶಿಕ್ಷಣ ವ್ಯಾಪಾರೀಕರಣದಿಂದಾಗಿ, ಜನಸಾಮಾನ್ಯರಿಗೆ ಶಿಕ್ಷಣ ಕೈಗೆಟುಕದ ವಸ್ತುವಾಗಿದೆ. ಶಿಕ್ಷಣ ಕೇವಲ ಶ್ರೀಮಂತರ ಸ್ವತ್ತಾಗುತ್ತಿದೆ ಎಂದು ಅವರು ಹೇಳಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications