ಗೋಪಾಲ್ ಇನ್ನೂ ವೀರಪ್ಪನ್ ಸಂಪರ್ಕ ಸಾಧಿಸಿಲ್ಲ: ಕರುಣಾನಿಧಿ
ಚೆನ್ನೈ : ನಾಲ್ಕನೇ ಬಾರಿಗೆ ಸಂಧಾನಕ್ಕಾಗಿ ಕಳೆದ ಬುಧವಾರ ಕಾಡಿಗೆ ತೆರಳಿದ ನಕ್ಕೀರನ್ ಗೋಪಾಲ್ ಅವರು ವೀರಪ್ಪನ್ನೊಂದಿಗೆ ಸಂಪರ್ಕ ಸಾಧಿಸಲು ವಿಫಲರಾಗಿದ್ದಾರೆ. ಕಳೆದ ಗುರುವಾರವೇ ಸತ್ಯಮಂಗಲ ಅರಣ್ಯ ಪ್ರವೇಶಿಸಿದ ಗೋಪಾಲ್ ತಾಳಮಲೈ ಅರಣ್ಯ ಪ್ರದೇಶದಲ್ಲಿ ವೀರಪ್ಪನ್ ಚಾರರು ತರಬಹುದಾದ ಸಂದೇಶಕ್ಕಾಗಿ ಕಾಯುತ್ತಿದ್ದಾರೆ.
ಈ ವಿಷಯವನ್ನು ಸೋಮವಾರ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿ ಅವರು ಇಂದು ಅಥವಾ ನಾಳೆ ಗೋಪಾಲ್ ಅಡಗುದಾಣದತ್ತ ಪ್ರಯಾಣ ಬೆಳೆಸುವರು ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಗೋಪಾಲ್ ಅವರು, ಅರಣ್ಯದಿಂದ ಹಿಂದಿರುಗಿದ ನಂತರ ಮುಂದಿನ ಕ್ರಮಗಳ ಬಗ್ಗೆ ಚಿಂತಿಸಲಾಗುವುದು ಎಂದೂ ಅವರು ಸುದ್ದಿಗಾರರಿಗೆ ತಿಳಿಸಿದರು.
ಕೆಲವು ಪತ್ರಿಕೆಗಳಲ್ಲಿ ಗೋಪಾಲ್ ಹಾಗೂ ವೀರಪ್ಪನ್ ಈಗಾಗಲೇ ಮಾತುಕತೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಇದು ಶುದ್ಧ ಸುಳ್ಳು, ಭಾರಿ ಮಳೆಯ ಕಾರಣ ಗೋಪಾಲ್ ಇನ್ನೂ ವೀರಪ್ಪನ್ ಸಂಪರ್ಕ ಸಾಧಿಸಲೇ ಆಗಿಲ್ಲ ಎಂದು ಸ್ಪಷ್ಟಪಡಿಸಿದರು.
ರಾಜ್ಕುಮಾರ್ ಹಾಗೂ ಮತ್ತಿತರ ಮೂವರ ಅಪಹರಣವಾಗಿ 57 ದಿನಗಳು ಕಳೆದಿವೆ. ಆದರೂ, ಎರಡೂ ಸರಕಾರಗಳಿಗೆ ಏನೂ ಮಾಡಲಾಗಿಲ್ಲ. ರಾಜ್ ಬಿಡುಗಡೆ ವಿಳಂಬ ಸರ್ಕಾರದ ವೈಫಲ್ಯವಲ್ಲವೇ ಎಂದು ಪತ್ರಕರ್ತರು ಪ್ರಶ್ನಿಸಿದಾಗ, ಭಾರಿ ಮಳೆಯಿಂದಾಗಿ ಈ ಬಾರಿಯ ಸಂಧಾನ ಕಾರ್ಯಾಚರಣೆ ವಿಳಂಬವಾಗಿದೆ ಎಂದಷ್ಟೇ ಕರುಣಾನಿಧಿ ಹೇಳಿದರು. (ಯು.ಎನ್.ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications