ನಾಲ್ಕು ಪಥವಾಗಲಿದೆ ಮೈಸೂರಿನ ಜೆಎಲ್ಬಿ ರಸ್ತೆ
ಮೈಸೂರು : ಮೈಸೂರು ನಗರದಲ್ಲೂ ಈಗ ವಾಹನಗಳ ಸಂಚಾರ ಅಧಿಕಗೊಂಡಿದೆ. ನಗರದ ಪ್ರಮುಖ ರಸ್ತೆಯಾದ ಜೆ.ಎಲ್.ಬಿ. ರಸ್ತೆಯಲ್ಲಂತೂ ವಾಹನಗಳ ದಟ್ಟಣೆ ಇಮ್ಮುಡಿಯಾಗಿದೆ. ಈ ಸಂಚಾರದ ಒತ್ತಡವನ್ನು ಕಡಿಮೆ ಮಾಡಲು ರಸ್ತೆಯನ್ನು ನಾಲ್ಕು ಸಾಲಿನ ರಸ್ತೆಯಾಗಿ ಪರಿವರ್ತಿಸಲು ನಗರ ಪಾಲಿಕೆ ನಿರ್ಧರಿಸಿದೆ.
ಈ ವಿಷಯವನ್ನು ಮೈಸೂರು ನಗರ ಪೊಲೀಸ್ ಆಯುಕ್ತರು ಸೋಮವಾರ ತಿಳಿಸಿದ್ದಾರೆ. ವಿಶ್ವವಿಖ್ಯಾತ ದಸರಾ ಮಹೋತ್ಸವ ಮುಗಿದ ತರುವಾಯ ರಸ್ತೆಯ ಅಗಲೀಕರಣ ಕಾರ್ಯ ಪ್ರಕ್ರಿಯೆಯನ್ನು ಪಾಲಿಕೆ ಕೈಗೊಳ್ಳಲಿದೆ. ಎ.ಡಿ.ಬಿ. ಯೋಜನೆಯಡಿಯಲ್ಲಿ ಈ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ರಸ್ತೆಯಲ್ಲಿ ಸಂಚಾರ ಅಧಿಕಗೊಂಡಿರುವ ಬಗ್ಗೆ ಇತ್ತೀಚೆಗೆ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಗ್ರಾಹಕ ಪರಿಷತ್ತಿನ ಸದಸ್ಯರು, ಸಂಚಾರ ಹಾಗೂ ಅಪರಾಧ ವಿಭಾಗದ ಉಪ ಪೊಲೀಸ್ ಆಯುಕ್ತರು ಮತ್ತು ನಗರ ಪಾಲಿಕೆಯ ಹಿರಿಯ ಅಧಿಕಾರಿಗಳು, ಅಭಿಯಂತರರ ಸಮಕ್ಷಮದಲ್ಲಿ ನಡೆದ ಸಭೆಯಲ್ಲಿ ಜೆಎಲ್ಬಿ ರಸ್ತೆ ಅಗಲೀಕರಣ ಕಾರ್ಯ ಕೈಗೆತ್ತಿಕೊಂಡು, ಕಾಲು ದಾರಿಯಲ್ಲಿ ಮರ ನೆಡಲು ನಿರ್ಧರಿಸಲಾಯಿತು ಎಂದೂ ಪೊಲೀಸ್ ಆಯುಕ್ತರ ಕಚೇರಿಯ ಪತ್ರಿಕಾ ಪ್ರಕಟಣೆ ತಿಳಿಸಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications