ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

‘ಗೋಡಂಬಿ ಉತ್ಪಾದಕರ ಹಿತಾಸಕ್ತಿಗೆ ಮಾರುಕಟ್ಟೆ ಕಾಯ್ದೆಯಲ್ಲಿ ತಿದ್ದುಪಡಿ’

By Staff
|
Google Oneindia Kannada News

ಮಂಗಳೂರು : ಗೋಡಂಬಿ ಉತ್ಪಾದಕರ ತೊಂದರೆಗಳ ನೀಗಿಸಿ, ಸೂಕ್ತ ಸವಲತ್ತು ನೀಡುವುದಾಗಿ ರಾಜ್ಯ ಸರ್ಕಾರ ಭರವಸೆ ಕೊಟ್ಟಿದೆ.

ಮಾರುಕಟ್ಟೆ ಶುಲ್ಕದಿಂದ ತಮಗೆ ತೊಂದರೆಯಾಗುತ್ತಿದೆ ಎಂದು ಗೋಡಂಬಿ ಉತ್ಪಾದಕರು ರಾಜ್ಯ ಸರ್ಕಾರಕ್ಕೆ ದೂರು ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಮಾರುಕಟ್ಟೆ ಕಾಯ್ದೆಗೆ ತಿದ್ದುಪಡಿ ತರಲು ಸರ್ಕಾರ ಉದ್ದೇಶಿಸಿದೆ ಎಂದು ಮುಖ್ಯಮಂತ್ರಿ ಕೃಷ್ಣ ಸೋಮವಾರ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಎಂಆರ್‌ಟಿಎಲ್‌ನಂತಹ ದೊಡ್ಡ ಸಂಸ್ಥೆಗಳಿಂದ ಉದ್ಯೋಗಾವಕಾಶಗಳ ಸೃಷ್ಟಿ ಆಗುತ್ತಿಲ್ಲ. ಸಣ್ಣ ಕೈಗಾರಿಕೆಗಳನ್ನು ಪ್ರೋತ್ಸಾಹಿಸಲು ಸರ್ಕಾರ ಉದ್ದೇಶಿಸಿದ್ದು, ಸಾವಿರಾರು ದುಡಿಯುವ ಕೈಗಳಿಗೆ ಉದ್ಯೋಗ ನೀಡಿರುವ ಗೋಡಂಬಿ ಕೈಗಾರಿಕೆ ರಫ್ತು ಆಧಾರಿತ ಉದ್ಯಮದ ಹಿತಾಸಕ್ತಿಯನ್ನು ರಾಜ್ಯ ಸರ್ಕಾರ ರಕ್ಷಿಸುತ್ತದೆ ಎಂದು ಭರವಸೆ ಕೊಟ್ಟರು.

ಟಾಸ್ಕ್‌ಫೋರ್ಸ್‌ : 10 ತಿಂಗಳ ಹಿಂದೆ ಬೆಂಗಳೂರಿನಲ್ಲಿ ರಚಿಸಿದ ಬೆಂಗಳೂರು ಅಭಿವೃದ್ಧಿ ಟಾಸ್ಕ್‌ಫೋರ್ಸ್‌ ಮಾದರಿಯಲ್ಲಿ ಮಂಗಳೂರಲ್ಲೂ ಟಾಸ್ಕ್‌ಫೋರ್ಸ್‌ ರಚನೆ ಮಾಡಿರುವುದನ್ನು ಮುಖ್ಯಮಂತ್ರಿ ಪ್ರಕಟಿಸಿದರು. ಉದ್ಯಮಿ ವಿನಯ್‌ ಹೆಗ್ಡೆ ಅಧ್ಯಕ್ಷತೆಯ ಟಾಸ್ಕ್‌ಫೋರ್ಸ್‌ನಲ್ಲಿ ವಿವಿಧ ಕ್ಷೇತ್ರಗಳ ಪರಿಣತರಿದ್ದು, ಅಭಿವೃದ್ಧಿ ಕಾರ್ಯಗಳ ಮೇಲೆ ನಿಗಾ ಇಡಲಿದ್ದಾರೆ. ಸೂಕ್ತ ಸಲಹೆಗಳನ್ನೂ ನೀಡಲಿದ್ದಾರೆ. ಇದರಿಂದ ಅಭಿವೃದ್ಧಿ ಕಾರ್ಯಗಳು ಸಮರ್ಪಕ ಹಾಗೂ ತ್ವರಿತವಾಗಿ ಆಗಲಿವೆ ಎಂದು ಕೃಷ್ಣ ಹೇಳಿದರು.

(ಮಂಗಳೂರು ಪ್ರತಿನಿಧಿಯಿಂದ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X