ತೈಲೋತ್ಪನ್ನ ಬಚ್ಚಿಟ್ಟರೆ ಕಠಿಣ ಕ್ರಮ : ರಾಮ್ನಾಯ್ಕ್ ಎಚ್ಚರಿಕೆ
ನವದೆಹಲಿ : ಇನ್ನು ನಾಲ್ಕಾರು ದಿನಗಳಲ್ಲಿ ತೈಲೋತ್ಪನ್ನಗಳ ಬೆಲೆ ಏರಲಿರುವುದು ಬಹುತೇಕ ಖಚಿತವಾಗಿದೆ. ಯಾವುದೇ ಕ್ಷಣದಲ್ಲಾದರೂ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯ ಸುದ್ದಿ ಹೊರಬೀಳಬಹುದು.
ಈ ಸಂದರ್ಭದ ಲಾಭ ಪಡೆದು ಹಣ ಮಾಡಲು ಈಗಾಗಲೇ ಸಾಕಷ್ಟು ಮಂದಿ ತುದಿಗಾಲಿನಲ್ಲಿ ನಿಂತಿದ್ದಾರೆ. ಬೆಲೆ ಏರುವ ಹಿನ್ನೆಲೆಯಲ್ಲಿ ತೈಲೋತ್ಪನ್ನಗಳನ್ನು ದಾಸ್ತಾನು ಮಾಡುತ್ತಿದ್ದಾರೆ.
ಸರಕಾರದ ಗಮನಕ್ಕೂ ಈ ವಿಷಯ ಬಂದಿದೆ. ಈ ಹಿನ್ನೆಲೆಯಲ್ಲಿ ತೈಲೋತ್ಪನ್ನಗಳನ್ನು ಅಡಗಿಸಿಡುವ, ಸಗಟು ಹಾಗೂ ಚಿಲ್ಲರೆ ವ್ಯಾಪಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರಕಾರ ಸೋಮವಾರ ಎಚ್ಚರಿಕೆ ನೀಡಿದೆ. ಈ ರೀತಿ ತೈಲ ಬಚ್ಚಿಡುವುದನ್ನು ಸಮಾಜ ವಿರೋಧಿ ಕೃತ್ಯ ಎಂದು ಪರಿಗಣಿಸಿ ದಂಡಿಸಲಾಗುವುದು ಎಂದೂ ಸರಕಾರ ಪ್ರಕಟಿಸಿದೆ.
ತೈಲೋತ್ಪನ್ನಗಳನ್ನು ಬಚ್ಚಿಟ್ಟು, ಕೃತಕ ಅಭಾವ ಸೃಷ್ಟಿಸಿ, ಬೆಲೆ ಏರಿದ ನಂತರ ಮಾರಾಟ ಮಾಡಿ ಲಾಭ ಮಾಡುವ ಮನೋಭಾವ ವಣಿಕರಿಗೆ ತಕ್ಕುದಲ್ಲ. ಇಂತಹ ಹೇಯ ಕೃತ್ಯಕ್ಕೆ ಕೈ ಹಾಕುವ ವಣಿಕರು ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಪೆಟ್ರೋಲಿಯಂ ಖಾತೆ ಸಚಿವ ರಾಮ್ ನಾಯ್ಕ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications