ಅಸಂಪ್ರದಾಯಿಕ ಉತ್ಪಾದನಾ ಘಟಕಗಳಿಂದ ವಿದ್ಯುತ್ ಖರೀದಿಗೆ ಒಪ್ಪಂದ
ಬೆಂಗಳೂರು: ರಾಜ್ಯದ ನಾಲ್ಕು ಅಸಂಪ್ರದಾಯಿಕ ಶಕ್ತಿ ಮೂಲಗಳ ವಿದ್ಯುತ್ ಉತ್ಪಾದಕರಿಂದ ವಾರ್ಷಿಕ 66 ದಶಲಕ್ಷ ಯುನಿಟ್ ವಿದ್ಯುತ್ ಖರೀದಿ ಒಪ್ಪಂದಕ್ಕೆ ರಾಜ್ಯ ವಿದ್ಯುತ್ ಪ್ರಸಾರ ನಿಗಮ ಸೋಮವಾರ ಸಹಿ ಹಾಕಿದೆ.
224 ಮೆಗಾವ್ಯಾಟ್ ಸಾಮರ್ಥ್ಯದ 32ಕ್ಕೂ ಹೆಚ್ಚು ಅಸಂಪ್ರದಾಯಿಕ ಶಕ್ತಿ ಮೂಲಗಳ ವಿದ್ಯುತ್ ಉತ್ಪಾದಕರು ವಿದ್ಯುತ್ ಖರೀದಿ ಒಪ್ಪಂದಕ್ಕೆ ಆಸಕ್ತಿ ವ್ಯಕ್ತಪಡಿಸಿದ್ದಾರೆ ಎಂದು ಕೆಪಿಟಿಸಿಎಲ್ ಚೇರ್ಮನ್ ವಿ.ಪಿ . ಬಳಿಗಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಒಪ್ಪಂದದಂತೆ ನಿಗಮವು ಪ್ರತಿ ಯುನಿಟ್ಗೆ 3 ರುಪಾಯಿ ಒಂದು ಪೈಸೆಯಂತೆ ವಿದ್ಯುತ್ ಖರೀದಿಸಲಿದೆ. ಖರೀದಿ ದರದಲ್ಲಿ ವಾರ್ಷಿಕ ಶೇಕಡಾ 5ರಷ್ಟು ಹೆಚ್ಚಳವಿರುವ ಈ ಒಪ್ಪಂದವು 10 ವರ್ಷಗಳ ಅವಧಿಯದಾಗಿದೆ. ಪರಿಸರಕ್ಕೆ ಹಾನಿ ಮಾಡದೆ ಅಸಂಪ್ರದಾಯಿಕ ಮೂಲಗಳಿಂದ ವಿದ್ಯುತ್ ಉತ್ಪಾದಿಸುವವರಿಂದ ವಿದ್ಯುತ್ ಖರೀದಿಸಲು ಸರಕಾರ ಅವಕಾಶವನ್ನು ಮುಕ್ತವಾಗಿಟ್ಟುಕೊಂಡಿದೆ ಎಂದು ಬಳಿಗಾರ್ ಹೇಳಿದ್ದಾರೆ.
ಒಪ್ಪಂದಕ್ಕೆ ಸಹಿ ಹಾಕಿರುವ ಕಂಪನಿಗಳಲ್ಲಿ ಮಳವಳ್ಳಿಯ ಜೈವಿಕ ಅನಿಲ ವಿದ್ಯುತ್ ಘಟಕ, ಬನ್ನೇರಿ ಅಮ್ಮನ ಸಕ್ಕರೆ ಘಟಕ, ಕಾವೇರಿ ಜಲಾನಯನ ಪ್ರದೇಶದ ಕಬಿನಿ ನದಿ ದಂಡೆಯಲ್ಲಿರುವ ಮಾರುತಿ ಪವರ್ ಗ್ರೂಪ್, ಕಾರ್ಕಳದ ಸೀತಾನದಿ ಬಳಿಯಿರುವ ಘಟಕಗಳು ಸೇರಿವೆ.
(ಯುಎನ್ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications