28ರ ಕರ್ನಾಟಕ ಬಂದ್‌ಗೆ ಸರ್ವತ್ರ ಬೆಂಬಲ, ಸಾರಿಗೆ ಸ್ತಬ್ಧ ಸಂಭವ
ಬೆಂಗಳೂರು : ರಾಜ್‌ಕುಮಾರ್ ಬಿಡುಗಡೆಗೆ ಒತ್ತಾಯಿಸಿ 28 ರಂದು ನಡೆಸಲುದ್ದೇಶಿಸಿರುವ ಕರ್ನಾಟಕ ಬಂದ್‌ಗೆ ಸರ್ವತ್ರ ಬೆಂಬಲ ವ್ಯಕ್ತವಾಗಿದೆ. ಈ ಮಧ್ಯೆ ರಾಜ್ಯ ಗೃಹ ಸಚಿವರು, ಬಂದ್‌ಗಿದು ಸಕಾಲವಲ್ಲ, ಬಂದ್ ನಿರ್ಧಾರ ಕೈಬಿಡಿ ಎಂದು ಪದೇ ಪದೇ ಮನವಿ ಮಾಡುತ್ತಲೇ ಇದ್ದಾರೆ.
ಯಾರು ಏನೇ ಹೇಳಿದರೂ, ಬಂದ್ ನಡೆಯುವುದು ಖಚಿತ ಎಂದು ಈಗಾಗಲೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಲಿ ಸ್ಪಷ್ಟ ನುಡಿಗಳಲ್ಲಿ ತಿಳಿಸಿಬಿಟ್ಟಿದೆ. ಬಂದ್ ನಡೆಯುವುದು ಖಚಿತ ಎಂದು ಗೊತ್ತಾದ ಮೇಲಂತೂ ಸರಕಾರ ಸಾರಿಗೆ ವಾಹನಗಳ ಸಂಚಾರ ಸ್ತಬ್ಧಗೊಳಿಸುವ ಹಾಗೂ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸುವ ಬಗ್ಗೆ ಚಿಂತಿಸುತ್ತಿದೆ.
ಬೆಂಬಲ : ಬೆಂಗಳೂರು ಆಟೋ ಚಾಲಕರ ಸಂಘ, ಟ್ಯಾಕ್ಸಿ ಚಾಲಕರ ಸಂಘ, ಬೆಂಗಳೂರು ಹೊಟೆಲ್ ಮಾಲಿಕರ ಸಂಘ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕನ್ನಡ ಬಳಗ, ವಾಟಾಳ್ ನಾಗರಾಜ್, ಕನ್ನಡ ಚಳವಳಿ ಕೇಂದ್ರ ಸಮಿತಿ, ರಾಜ್ಯದ ಹಲವು ಕನ್ನಡ ಪರ ಸಂಘಟನೆಗಳು ಬೆಂಬಲ ಸೂಚಿಸಿವೆ. ಇದನ್ನು ಸ್ವಾಭಿಮಾನದ ಬಂದ್ ಎಂದು ಬಣ್ಣಿಸಿ, ದಲಿತ ಸಂಘರ್ಷ ಸಮಿತಿ ಬೆಂಬಲ ವ್ಯಕ್ತಪಡಿಸಿದೆ.
ಕರ್ನಾಟಕ ಟೆಲಿವಿಷನ್ ನಿರ್ಮಾಪಕರು ಮತ್ತು ನಿರ್ದೇಶಕರ ಸಂಘ ತನ್ನ ಬೆಂಬಲ ವ್ಯಕ್ತ ಪಡಿಸಿದೆ. ಬಂದ್ ದಿನ ಆಟೋ ಓಡಿಸದಿರಲು ಎಲ್ಲ ಚಾಲಕರಿಗೂ ಸಂಘದ ಅಧ್ಯಕ್ಷ ಸೋಮಶೇಖರ್ ಮನವಿ ಮಾಡಿದ್ದಾರೆ. ಹೊಟೆಲ್‌ಗಳನ್ನು ಬಂದ್ ಮಾಡುವಂತೆ ಹೊಟೆಲ್‌ಗಳ ಸಂಘದ ಅಧ್ಯಕ್ಷ ಬಿ. ಚಂದ್ರಶೇಖರ ಹೆಬ್ಬಾರ್ ಪ್ರಾರ್ಥಿಸಿದ್ದಾರೆ.
ಸಾರ್ವಜನಿಕರ ಆಸ್ತಿ ಪಾಸ್ತಿಗೆ ಹಾನಿ ಉಂಟು ಮಾಡದಂತೆ ಕೋರಿರುವ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕನ್ನಡ ಕ್ರಿಯಾ ಸಮಿತಿ ಬಂದ್‌ಗೆ ಬೆಂಬಲ ನೀಡಿದೆ. ರವಿಚಂದ್ರನ್ ಅಭಿಮಾನಿಗಳ ಸಂಘ, ಬಿಎಚ್‌ಇಎಲ್ ಕನ್ನಡ ಸಂಘ, ಬಿಇಎಂಎಲ್ ಕನ್ನಡ ಸಂಘವೇ ಮುಂತಾದ ಸಾವಿರಾರು ಸಂಘಟನೆಗಳು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿವೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications