ನಮ್ಮೂರ ನೆಲಕ್ಕೆ ಎಂಎ-ನ್-ಸಿ-ಗ-ಳ ಬೀಜ ಬೇಡ: ರೈತರ ಪ್ರತಿಭಟನೆ
ಬೆಂಗಳೂರು : ವಿಶ್ವ ವಾಣಿಜ್ಯ ಸಂಸ್ಥೆಯ ಒಪ್ಪಂದದ ಲಾಭ ಪಡೆದು ಬಹು ರಾಷ್ಟ್ರೀಯ ಕಂಪನಿಗಳು ಅಭಿವೃದ್ಧಿ ಪಡಿಸಿರುವ ಹೊಸ ತಳಿಯ ಬೀಜಗಳನ್ನು ಮಾರುಕಟ್ಟೆಗೆ ತಂದಿರುವುದನ್ನು ವಿರೋಧಿಸಿ ರೈತರು ನಗರದಲ್ಲಿ ಮಂಗಳವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಬಿತ್ತನೆ ಬೀಜಗಳ ಸ್ವಾಭಾವಿಕ ರೂಪವನ್ನು ಹಾಳುಗೆಡವಿ, ಭಾರತೀಯ ರೈತರ ಸಾಂಪ್ರದಾಯಿಕ ಆಚರಣೆಗೆ ಧಕ್ಕೆ ತರುತ್ತಿರುವ ಬಹುರಾಷ್ಟ್ರೀಯ ಕಂಪನಿಗಳನ್ನು ಎತ್ತಂಗಡಿ ಮಾಡಬೇಕು. ಅವು ಅಭಿವೃದ್ಧಿ ಪಡಿಸಿರುವ ಹೊಸ ತಳಿಯ ಬೀಜಗಳ ಉಪಯೋಗ ರೈತರ ಸ್ವಾಭಾವಿಕ ಹಕ್ಕಿ-ನ ಚ್ಯುತಿಗೆ ಕಾರಣವಾಗಿದೆ ಎಂದು ಮೆರವಣಿಗೆಯ ವಕ್ತಾರರು ಅಭಿಪ್ರಾಯಪಟ್ಟರು.
ಕೆಲವು ಸಂಘ ಸಂಸ್ಥೆಗಳ ಬೆಂಬಲದೊಂದಿಗೆ ಕರ್ನಾಟಕ ರಾಜ್ಯ ರೈತ ಸಂಘ ಮೆರವಣಿಗೆ ನಡೆಸಿತು. ಚಿಕ್ಕ ಲಾಲ್‌ಬಾಗ್‌ನಿಂದ ಹೊರಟ ಮೆರವಣಿಗೆ ಮಲ್ಲೇಶ್ವರಂ ಮೈದಾನದಲ್ಲಿ ಸಭೆ ಸೇರಿತು. ಮೆರವಣಿಗೆಯ ಮುಖಂಡರು ಸಭೆ ಉದ್ದೇಶಿಸಿ ಮಾತನಾಡಿದರು. ಪರಿಸರವಾದಿ ವಂದನಾ ಶಿವ, ಕರ್ನಾಟಕ ಹಿಂದುಳಿದ ವರ್ಗಗಳ ಸಮಿತಿ ಅಧ್ಯಕ್ಷ ರವಿವರ್ಮ ಕುಮಾರ್ ಮೆರವಣಿಯಲ್ಲಿ ಭಾಗವಹಿಸಿದ್ದ ಪ್ರಮುಖರು.
ಬಹುರಾಷ್ಟ್ರೀಯ ಕಂಪನಿಗಳನ್ನು ಎತ್ತಂಗಡಿ ಮಾಡಲು ಎರಡನೇ ಕ್ವಿಟ್ ಇಂಡಿಯಾ ಚಳವಳಿ ನಡೆಸಬೇಕು. ಭಾರತದ ಮಾರುಕಟ್ಟೆ ತುಂಬುತ್ತಿರುವ ಬಹುರಾಷ್ಟ್ರೀಯ ಕಂಪನಿಗಳ ಬಿತ್ತನೆ ಬೀಜಗಳು ದುಬಾರಿಯಾಗಿದ್ದು, ರೈತರು ಕೊಂಡುಕೊಳ್ಳದೇ ವಿಧಿಯಿಲ್ಲ ಎನ್ನುವಂತಾಗಿದೆ. ಸಾಲ ಸೋಲ ಮಾಡಿ ಮಾರುಕಟ್ಟೆಯಲ್ಲಿ ಕಾಸು ಸುರಿದು, ಹೊಲದಲ್ಲಿ ಬೀಜ ಚೆಲ್ಲುವ ರೈತರು ಬೆಳೆ ಹಾಳಾದಾಗ ಆತ್ಮಹತ್ಯೆ ಮಾಡಿಕೊಳ್ಳುವುದು ಸಾಮಾನ್ಯವಾಗುತ್ತಿದೆ ಎಂದು ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರಮುಖರು ಹೇಳಿದರು.
ಇನ್ನು 10 ವರ್ಷಗಳ ಕಾಲ ಜೆನೆಟಿಕ್ ಎಂಜಿನಿಯರಿಂಗ್‌ನ ವಾಣಿಜ್ಯೀಕರಣವನ್ನು ರದ್ದುಪಡಿಸಬೇಕೆಂದು 2 ದಿನಗಳ ಕಾಲ ನಡೆದ ಬೀಜ ನ್ಯಾಯಮಂಡಳಿ ಒತ್ತಾಯಿಸಿದೆ.
(ಯುಎನ್‌ಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications