ಬಂದ್ ಕೈಬಿಡಲು ಚಿತ್ರೋದ್ಯಮಿಗಳಿಗೆ ಸಾಹಿತಿಗಳ ಮನವಿ
ಹುಬ್ಬಳ್ಳಿ : ವೀರಪ್ಪನ್ ಒತ್ತೆಯಲ್ಲಿರುವ ಡಾ. ರಾಜ್‌ಕುಮಾರ್ ಹಾಗೂ ಇತರ ಮೂವರ ಶೀಘ್ರ ಬಿಡುಗಡೆಗೆ ಒತ್ತಾಯಿಸಿ 28ರಂದು ನಡೆಸಲುದ್ದೇಶಿಸಿರುವ ಕರ್ನಾಟಕ ಬಂದ್‌ನ್ನು ಕೈಬಿಡುವಂತೆ ಧಾರವಾಡದ ಸಾಹಿತಿ - ಕಲಾವಿದರು ಚಿತ್ರೋದ್ಯಮಿಗಳು ಹಾಗೂ ರಾಜ್ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.
ರಾಜ್ಯ ಸರಕಾರ ರಾಜ್‌ಕುಮಾರ್ ಅವರ ಬಿಡುಗಡೆಗೆ ಶಕ್ತಿ ಮೀರಿ ಪ್ರಯತ್ನಗಳನ್ನು ಮಾಡುತ್ತಿದೆ. ರಾಜ್ ಅವರನ್ನು ಬಿಡಿಸಲು ವೀರಪ್ಪನ್‌ನ ಅನುಚಿತ ಬೇಡಿಕೆಗಳನ್ನೂ ಈಡೇರಿಸಲು ಸಿದ್ಧವಾಗಿದೆ ಹೀಗಿದ್ದೂ ಕೂಡ ಬಂದ್ ಆಚರಿಸುವುದು ಸೂಕ್ತವಲ್ಲ ಎಂದು ಸಾಹಿತಿ - ಕಲಾವಿದರ ಪರವಾಗಿ ಕನ್ನಡ ಕಾವಲು ಸಮಿತಿಯ ಮಾಜಿ ಅಧ್ಯಕ್ಷ ಹಾಗೂ ಪತ್ರಕರ್ತ ಪಾಟೀಲ ಪುಟ್ಟಪ್ಪ ಮತ್ತಿತರರು ಮನವಿ ಮಾಡಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಂದ್‌ನಂತಹ ಕ್ರಮಗಳು ರಾಜ್ ಬಿಡುಗಡೆಯ ಪ್ರಕ್ರಿಯೆಯನ್ನು ಮತ್ತಷ್ಟು ಜಟಿಲಗೊಳಿಸುತ್ತದೆಯೇ ಹೊರತು, ಇದರಿಂದ ಒಳಿತಾಗುವುದಿಲ್ಲ. ಬಂದ್ ಕಾಲದಲ್ಲಿ ಹಿಂಸಾಚಾರ ನಡೆದರೆ, ಅದು ಭಾಷಾ ಅಲ್ಪಸಂಖ್ಯಾತರ ವಿರುದ್ಧ ತಿರುಗುವ ಸಾಧ್ಯತೆಗಳೂ ಇವೆ. ಮಿಗಿಲಾಗಿ ಸಮಾಜಘಾತುಕ ಶಕ್ತಿಗಳು ಪರಿಸ್ಥಿತಿಯ ದುರ್ಲಾಭ ಪಡೆಯಲು ಹೊಂಚು ಹಾಕುತ್ತಾರೆ. ಹೀಗಾಗಿ ಬಂದ್ ನಿರ್ಧಾರವನ್ನು ಕೈಬಿಡುವಂತೆ ಅವರು ಪ್ರಾರ್ಥಿಸಿದ್ದಾರೆ.
ಕೇಂದ್ರ ಏನು ಮಾಡಬೇಕು ? : ಕೇಂದ್ರ ಸರಕಾರ ರಾಜ್ ಬಿಡುಗಡೆಗೆ ಮುಂದಾಗಬೇಕು ಎಂದು ಆಗ್ರಹಿಸಿ ಬಂದ್ ಆಚರಿಸಲಾಗುತ್ತಿದೆ. ಕೇಂದ್ರ ವೀರಪ್ಪನ್ ವಿರುದ್ಧ ಬಲಪ್ರಯೋಗ ಮಾಡಬೇಕೆ? ಬಲಪ್ರಯೋಗದಿಂದ ರಾಜ್ ಅವರಿಗೂ ತೊಂದರೆ ಆಗುವುದಿಲ್ಲವೇ? ಈಗ ಸಂಧಾನವೊಂದೇ ಸೂಕ್ತ ಮಾರ್ಗ ಹೀಗಾಗಿ ಬಂದ್ ಕೈಬಿಡುವುದೇ ಸೂಕ್ತ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸಾಹಿತಿ ಕಲಾವಿದರು ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಗೆ ರಾಜ್ಯ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ. ಗಿರಡ್ಡಿ ಗೋವಿಂದರಾಜ್, ಡಾ. ಎಂ.ಎಸ್. ವೃಷಭೇಂದ್ರ ಸ್ವಾಮಿ, ಪ್ರೊ. ಕೆ.ಎಸ್. ದೇಶಪಾಂಡೆ, ಡಾ. ಆರ್. ಬಿ. ಪಾಟೀಲ್, ನೀಲಗಂಗಯ್ಯ ಸೇರಿದಂತೆ ಸುಮಾರು 25 ಮಂದಿ ಸಹಿ ಹಾಕಿದ್ದಾರೆ.
(ಹುಬ್ಬಳ್ಳಿ ಪ್ರತಿನಿಧಿಯಿಂದ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications