ರಾಜ್ಯದ ಏಳು ಜಿಲ್ಲೆಗಳಲ್ಲಿ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ
ಬೆಂಗಳೂರು :ರಾಜ್ ಕುಮಾರ್ ಬಿಡುಗಡೆ ಆಗ್ರಹಿಸಿ ಸೆಪ್ಟೆಂಬರ್ 28 ರಂದು ಕರ್ನಾಟಕ ಬಂದ್ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ, ರಾಜ್ಯದ ಏಳು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದೆ.
ಬೆಂಗಳೂರು ನಗರ ಮತ್ತು ಗ್ರಾಮಾಂತರ, ಮಂಡ್ಯ, ಚಾಮರಾಜ ನಗರ, ಹಾಸನ , ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಸಾರಲಾಗಿದೆ. ಆದರೆ ಮೈಸೂರು ನಗರದಲ್ಲಿ ಕನ್ನಡ ಸಂಘಟನೆಗಳು ಕರ್ನಾಟಕ ಬಂದ್ ಆಚರಿಸಲಾಗುವುದಿಲ್ಲ ಎಂದು ಹೇಳಿರುವುದರಿಂದ ಅಲ್ಲಿನ ಶಾಲಾ ಕಾಲೇಜುಗಳಿಗೆ ರಜೆ ಇರುವುದಿಲ್ಲ.
ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಂತೆ ಕೋರ್ಟ್, ಸರಕಾರಕ್ಕೆ ಸೂಚಿಸಿರುವ ಹಿನ್ನೆಲೆಯಲ್ಲಿ ಸರಕಾರ ಮುನ್ನೆಚ್ಚರಿಕೆ ಕ್ರಮವಾಗಿ ಮತ್ತು ವಿದ್ಯಾರ್ಥಿ ವೃಂದದ ಸುರಕ್ಷೆಯ ದೃಷ್ಟಿಯಿಂದ ಗುರುವಾರದಂದು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದೆ. ಉಳಿದ ಜಿಲ್ಲೆಗಳಲ್ಲಿ ಪರಿಸ್ಥಿತಿಯನ್ನು ಗಮನಿಸಿಕೊಂಡು ಶಾಲೆ ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ.
ವಿಮಾನ ಪ್ರಯಾಣಿಕರಿಗೆ ಬದಲಿ ವ್ಯವಸ್ಥೆ : ಮುಂಗಡ ಟಿಕೆಟ್ ಕಾದಿರಿಸಿದ ವಿಮಾನ ಪ್ರಯಾಣಿಕರು ಬೇರೆ ಬೇರೆ ಊರುಗಳಿಂದ ಬರಲಿದ್ದು, ನಗರದಲ್ಲಿ ಸಾರಿಗೆ ವ್ಯವಸ್ಥೆ ಅಸ್ತವ್ಯಸ್ತವಾಗುವ ಸಂಭವವಿರುವುದರಿಂದ ಪ್ರಯಾಣಿಕರು ವಿಮಾನ ನಿಲ್ದಾಣ ತಲುಪಲು ಬೇಕಾಗದ ಬದಲಿ ವ್ಯವಸ್ಥೆಯನ್ನು ಯಾವುದೇ ಸಮಯದಲ್ಲಾದರೂ ಒದಗಿಸಲಾಗುವುದು ಎಂದು ವಿಮಾನ ನಿಲ್ದಾಣ ಪ್ರಾಧಿಕಾರ ಹೇಳಿದೆ.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications