ವೀರಪ್ಪನ್ ವಶದಲ್ಲಿದ್ದ ಒತ್ತೆಯಾಳು ನಾಗಪ್ಪ ಬಿಡುಗಡೆ
ಮೈಸೂರು : ಕಳೆದ 60 ದಿನಗಳಿಂದ ಡಾ. ರಾಜ್ಕುಮಾರ್ ಅವರ ಸಂಗಡ ವೀರಪ್ಪನ್ ವಶದಲ್ಲಿದ್ದ ಒತ್ತೆಯಾಳುಗಳಲ್ಲೊಬ್ಬರಾದ ನಾಗಪ್ಪ ಅವರನ್ನು ವೀರಪ್ಪನ್ ಗುರುವಾರ ಸಂಜೆ ಬಿಡುಗಡೆ ಮಾಡಿದ್ದಾನೆ.
ಗುರುವಾರ ಸಂಜೆ ದಿಂಬಂ ಅರಣ್ಯ ಪ್ರದೇಶದ ಸರಹದ್ದಿನಲ್ಲಿ ಪ್ರತ್ಯಕ್ಷನಾದ ನಾಗಪ್ಪ ಅವರನ್ನು ಗಾಜನೂರಿಗೆ ಕರೆತರಲಾಯಿತು. ಗಾಜನೂರಿನಿಂದ ನಾಗಪ್ಪ ಬೆಂಗಳೂರಿನತ್ತ ಹೊರಟಿದ್ದು, ಯಾವುದೇ ಕ್ಷಣದಲ್ಲಿ ಬೆಂಗಳೂರು ತಲುಪಿ, ಪಾರ್ವತಮ್ಮ ರಾಜ್ ಕುಮಾರ್ ಅವರನ್ನು ಭೇಟಿ ಆಗಲಿದ್ದಾರೆ. ಈ ಬಗ್ಗೆ ಅಧಿಕೃತವಾಗಿ ಮಾಹಿತಿ ಸಿಕ್ಕಿಲ್ಲ. ಆದರೂ, ನಾಗಪ್ಪ ಬಿಡುಗಡೆಯಾಗಿದ್ದಾರೆ ಎಂಬುದನ್ನು ನಮ್ಮ ಮೈಸೂರು ಪ್ರತಿನಿಧಿ ಖಾತ್ರಿ ಪಡಿಸಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿ ಅವರು, ಡಾ. ರಾಜ್ಕುಮಾರ್ ಅವರ ಬಿಡುಗಡೆ ಗುರುವಾರವೇ ಆಗುತ್ತದೆ ಎಂಬ ಸೂಚನೆ ನೀಡಿದ್ದರು. ಆದರೆ, ನಾಗಪ್ಪ ಅವರ ಬಿಡುಗಡೆ ಆಗಿರುವ ಹಿನ್ನೆಲೆಯಲ್ಲಿ ಡಾ. ರಾಜ್ಕುಮಾರ್ ಅವರ ಬಿಡುಗಡೆ ಯಾವುದೇ ಕ್ಷಣದಲ್ಲಾದರೂ ಆಗಬಹುದು ಎಂದು ನಿರೀಕ್ಷಿಸಲಾಗಿದೆ.
ಕಳೆದ ಭೀಮನ ಅಮಾವಾಸ್ಯೆಯಂದು ವೀರಪ್ಪನ್ ದೊಡ್ಡ ಗಾಜನೂರಿನಿಂದ ಡಾ. ರಾಜ್ಕುಮಾರ್, ನಾಗಪ್ಪ, ಗೋವಿಂದರಾಜು ಹಾಗೂ ನಾಗೇಶ್ ಅವರನ್ನು ಅಪಹರಿಸಿದ್ದ ಎಂಬುದನ್ನು ಇಲ್ಲಿ ಸ್ಮರಿಸಬಹುದು. ಸಾಮಾನ್ಯವಾಗಿ ತನ್ನ ಎಲ್ಲ ಕಾರ್ಯಾಚರಣೆಯನ್ನೂ ಕಾಳಿಕಾದೇವಿಯ ಪೂಜೆ ಮಾಡಿ ಅಮಾವಾಸ್ಯೆಯ ದಿನದಂದೇ ಮಾಡುವ ವೀರಪ್ಪನ್ ನಾಗಪ್ಪ ಅವರನ್ನು ಅಮಾವಾಸ್ಯೆಯ ದಿನವೇ ಬಿಡುಗಡೆ ಮಾಡಿದ್ದಾನೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications