ಮೈಸೂರು ತಾತಾಚಾರ್ಗೆ ರಾಜ.್ಯ ಸಂಗೀತ ವಿದ್ವಾನ್ ಪ್ರಶಸ್ತಿ
ಬೆಂಗಳೂರು : ಹೆಸರಾಂತ ಪಿಟೀಲು ವಾದಕ ಟಿ.ಎಸ್. ತಾತಾಚಾರ್ ಅವರಿಗೆ ಕರ್ನಾಟಕ ಸರ್ಕಾರ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಘೋಷಿಸಿದೆ.
ತಾತಾಚಾರ್ ಅವರ ಶೇಷ ಜೀವನ ಪೂರ್ತಿ ಪ್ರತಿ ತಿಂಗಳು ಒಂದು ಸಾವಿರ ರುಪಾಯಿಯನ್ನು ಪ್ರಶಸ್ತಿ ರೂಪದಲ್ಲಿ ಸರ್ಕಾರ ಸಂದಾಯ ಮಾಡಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಅ.ರಾ. ಚಂದ್ರಹಾಸ ಗುಪ್ತ ಶುಕ್ರವಾರ ಮೈಸೂರಿನಲ್ಲಿ ಘೋಷಿಸಿದರು.
ಸಂಗೀತ ಸಾಧನೆಯಿಂದ ಅನೇಕ ಪ್ರಶಸ್ತಿಗಳನ್ನು ಗಿಟ್ಟಿಸಿಕೊಂಡಿರುವ ತಾತಾಚಾರ್ ಟೈಗರ್ ವರದಾಚಾರ್, ಮೈಸೂರು ವಾಸುದೇವಾಚಾರ್, ಅರಿಯಾಕುಡಿ ರಾಮಾನುಜ ಅಯ್ಯಂಗಾರ್, ಡಾ. ಸೆಮ್ಮಣ್ಣುಗುಡಿ ಶ್ರೀನಿವಾಸ ಅಯ್ಯರ್ ಹಾಗೂ ಟಿ.ಆರ್. ಮಹಾಲಿಂಗಮ್ರಂಥವರ ಸಂಗೀತಕ್ಕೆ ಪಿಟೀಲು ಸಾಥ್ ನೀಡಿದ್ದಾರೆ. ಪಿಟೀಲು ಚೌಡಯ್ಯ, ದ್ವಾರಂ ವೆಂಕಟಸ್ವಾಮಿ ನಾಯ್ಡು ಹಾಗೂ ಅವರ ಮಗ ಟಿ. ಶ್ರೀನಿವಾಸನ್ ಜೊತೆ ಜಂಟಿ ವಾದ್ಯ ಗೋಷ್ಠಿಗಳನ್ನು ಪ್ರದರ್ಶಿಸಿದ್ದಾರೆ.
ಮೈಸೂರು ತಾತಾಚಾರ್ ಎಂದೇ ಪ್ರಸಿದ್ಧರಾಗಿರುವ ಈ ಪಿಟೀಲು ಮಾಂತ್ರಿಕ, ಒಡೆಯರ್ ಆಸ್ಥಾನದಲ್ಲಿ ಅನೇಕ ಕಚೇರಿಗಳನ್ನು ನಡೆಸಿದ್ದಾರೆ. ಸಂಗೀತಾಸಾಕ್ತ ದಿಗ್ಗಜಗಳು ಇವರ ಕಚೇರಿಯನ್ನು ತಪ್ಪದೇ ವೀಕ್ಷಿಸುತ್ತಿದ್ದರು. ನೊಬೆಲ್ ಪ್ರಶಸ್ತಿ ವಿಜೇತ ಭೌತವಿಜ್ಞಾನಿ ಸರ್ ಸಿ.ವಿ. ರಾಮನ್ ಅನೇಕ ವರ್ಷಗಳ ಕಾಲ ವಾರಕ್ಕೆ 2 ಬಾರಿಯಾದರೂ ತಾತಾಚಾರ್ ಪಿಟೀಲು ವಾದನ ಕೇಳುತ್ತಿದ್ದರಂತೆ.
(ಯುಎನ್ಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications