ಆರೋಗ್ಯ ತಪಾಸಣೆಗೆ ಮಲ್ಯ ಆಸ್ಪತ್ರೆಗೆ ನಾಗಪ್ಪ
ಬೆಂಗಳೂರು :ಬುಧವಾರ ರಾತ್ರಿ ಕಾಡಿನಿಂದ ಕಂಬಿಕಿತ್ತು, ನಾಡು ಸೇರಿದ ನಾಗಪ್ಪ ಕೊನೆಗೂ ಬೆಂಗಳೂರು ತಲುಪಿದ್ದಾರೆ. ಚಾಮರಾಜನಗರದಿಂದ ಬೆಂಗಳೂರಿಗೆ ಬಂದ ನಾಗಪ್ಪ ಅವರು, ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಹಾಗೂ ಪಾರ್ವತಮ್ಮ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಆನಂತರ ಆರೋಗ್ಯ ತಪಾಸಣೆಗಾಗಿ ನಾಗಪ್ಪ ಅವರನ್ನು ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಪಾರ್ವತಮ್ಮ ಆಸ್ಪತ್ರೆಯಿಂದ ಮನೆಗೆ : ಕಳೆದ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಾರ್ವತಮ್ಮ ರಾಜ್‌ಕುಮಾರ್ ಅವರು, ಗುಣಮುಖರಾಗಿ ಶುಕ್ರವಾರ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ನಾಗಪ್ಪ ಅವರು ಸದಾಶಿವ ನಗರದ ರಾಜ್‌ಕುಮಾರ್ ಅವರ ಮನೆಯಲ್ಲೇ ಪಾರ್ವತಮ್ಮ ಅವರನ್ನು ಭೇಟಿ ಮಾಡಿ ತಾವು ಕಾಡಿನಿಂದ ಬಂದ ಸಾಹಸ ಹಾಗೂ ರಾಜ್‌ಕುಮಾರ್ ಅವರ ಯೋಗಕ್ಷೇಮದ ಬಗ್ಗೆ ವಿವರಿಸಿದರು.
ಪತ್ರಿಕಾಗೋಷ್ಠಿಯಿಂದ ಹೊರನಡೆದ ಕೃಷ್ಣ : ಈ ಮಧ್ಯೆ ನಾಗಪ್ಪ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಯಾಂದರಿಂದ ಕೆರಳಿದ ಮುಖ್ಯಮಂತ್ರಿಗಳು ಪತ್ರಿಕಾಗೋಷ್ಠಿಯನ್ನು ಅರ್ಧಕ್ಕೆ ನಿಲ್ಲಿಸಿ, ಹೊರ ನಡೆದಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ನಾಗಪ್ಪ ತಾವು ವೀರಪ್ಪನ್ ವಶದಿಂದ ತಪ್ಪಿಸಿಕೊಂಡು ಬಂದುದಾಗಿ ಹೇಳಿದ್ದಾರೆ.
ಬುಧವಾರ ರಾತ್ರಿ ಎಲ್ಲರೂ ಮಲಗಿದ್ದಾಗ, ತಾವು ಹೋರಳುತ್ತಾ (ಉರುಳು ಸೇವೆ) ವೀರಪ್ಪನ್ ಬಿಡಾರದಿಂದ ಬಹುದೂರ ಹೋಗಿ ಓಡಿ ಬಂದುದಾಗಿ ಹೇಳಿದ್ದಾರೆ. ಅವರ ತಲೆ ಹಾಗೂ ಹಲ್ಲಿಗೆ ಪೆಟ್ಟೂ ಬಿದ್ದಿದೆ.
ಸಂಧಾನದ ಮೇಲೆ ಪರಿಣಾಮ ಇಲ್ಲ - ಕರುಣಾನಿಧಿ : ನಾಗಪ್ಪ ಅವರು ವೀರಪ್ಪನ್ ಕಣ್ಣುತಪ್ಪಿಸಿ ಓಡಿ ಬಂದಿರುವ ಹಿನ್ನೆಲೆಯಲ್ಲಿ ರಾಜ್ ಬಿಡುಗಡೆ ಪ್ರಕ್ರಿಯೆಯ ಸಂಧಾನದ ಮಾತುಕತೆಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ತಿಳಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರು, ಗೋಪಾಲ್ ಅವರ ಈ ಬಾರಿಯ ಸಂಧಾನ ಯಾತ್ರೆ ಯಶಸ್ವಿಯಾಗೇ ಆಗುತ್ತದೆ. ರಾಜ್‌ಕುಮಾರ್ ಹಾಗೂ ಉಳಿದಿಬ್ಬರ ಬಿಡುಗಡೆ ಇಂದೋ, ನಾಳೆಯೋ ಆಗುತ್ತದೆ ಎಂದು ಹೇಳಿದ್ದಾರೆ.
ಮುಖಪುಟ / ರಾಜ್ ಅಪಹರಣ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications