ಕಾಗವಾಡ ವಿಧಾನಸಭಾ ಕ್ಷೇತ್ರ ಸಂಯುಕ್ತ ಜನತಾದಳ ಪಾಲು
ಬೆಳಗಾವಿ : ಬೆಳಗಾವಿ ಜಿಲ್ಲೆಯ ಕಾಗವಾಡ ವಿಧಾನಸಭಾ ಕ್ಷೇತ್ರ ಸಂಯುಕ್ತ ಜನತಾದಳ ಪಾಲಾಗಿದೆ. ಸಂಯುಕ್ತ ಜನತಾದಳ ಅಭ್ಯರ್ಥಿ ಭರಮಗೌಡ ಅಲಿಯಾಸ್ ರಾಜು ಕಾಗೆ ಅವರು ತಮ್ಮ ಹತ್ತಿರದ ಪ್ರತಿಸ್ಪರ್ಧಿ ಆಡಳಿತಾರೂಢ ಕಾಂಗ್ರೆಸ್ನ ವಿಜಯಾ ತಾಯಿ ಪಾಟೀಲ್ ಅವರನ್ನು ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದಾರೆ.
43 ಸಾವಿರದ 557 ಮತಗಳನ್ನು ಗಳಿಸಿದ ಭರಮಗೌಡ ಅವರು, 42 ಸಾವಿರದ 538 ಮತ ಗಳಿಸಿದ ಕಾಂಗ್ರೆಸ್ ಅಭ್ಯರ್ಥಿ ವಿಜಯಾ ಅವರನ್ನು ಪರಾಭವಗೊಳಿಸಿದ್ದಾರೆ. ಬಿ.ಜೆ. ಪಿ. ಅಭ್ಯರ್ಥಿ ಸಂಗನಗೌಡ ಪಾಟೀಲ್ರಿಗೆ ಕೇವಲ 3 ಸಾವಿರದ 61 ಮತಗಳು ಮಾತ್ರ ಲಭಿಸಿವೆ.
ಉತ್ತರ ಕರ್ನಾಟಕ ಭಾಗದಲ್ಲಿ ಇನ್ನೂ ಸಂಯುಕ್ತ ಜನತಾದಳ ಅಸ್ತಿತ್ವ ಉಳಿಸಿಕೊಂಡಿರುವುದರ ಸಂಕೇತ ಇದು ಎಂದು ಹೇಳಬಹುದು.
ಶಾಸಕ ಪಿ. ಅಪ್ಪಾಗೌಡ ಪಾಟೀಲರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಸೆ.30ರಂದು ನಡೆದ ಉಪ ಚುನಾವಣೆಯ ಮತಗಳ ಎಣಿಕೆ ಕಾರ್ಯ ಮಂಗಳವಾರ ಬೆಳಗ್ಗೆ ಆರಂಭಗೊಂಡಿತು. ಮೊದಲ ಬಾರಿಗೆ ಗ್ರಾಮಾಂತರ ಪ್ರದೇಶದಲ್ಲಿ ವಿದ್ಯುನ್ಮಾನ ಮತ ಯಂತ್ರ ಬಳಸಿದ ಪರಿಣಾಮವಾಗಿ ಮತ ಎಣಿಕೆ ಪ್ರಾರಂಭವಾದ ಕೆಲವೇ ಗಂಟೆಗಳಲ್ಲಿ ಫಲಿತಾಂಶ ಹೊರಬಿತ್ತು. ಉಪ ಚುನಾವಣೆಯಲ್ಲಿ ಶೇ. 65ರಷ್ಟು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications