ಮಮತಾ ಒತ್ತಡಕ್ಕೆ ಮಣಿದ ಪ್ರಧಾನಿ, ತೈಲ ಬೆಲೆ ಇಳಿಕೆ ಸಂಭವ
ಕಲ್ಕತ್ತಾ : ಏಕಾಏಕಿ ಏರಿದ ತೈಲೋತ್ಪನ್ನಗಳ ಬೆಲೆಯನ್ನು ಭಾಗಶಃ ಇಳಿಸುವ ಭರವಸೆಯನ್ನು ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನೀಡಿದ್ದಾರೆ. ಈ ಸಂಬಂಧ 6ರಂದು ನಡೆಯಲಿರುವ ಕೇಂದ್ರ ಸಚಿವ ಸಂಪುಟದ ಸಭೆ ಅತ್ಯಂತ ಮಹತ್ವದ್ದಾಗಿದೆ.
ಈಗಾಗಲೇ ಏರಿಸಿರುವ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಮತ್ತು ಸೀಮೆ ಎಣ್ಣೆ ಬೆಲೆಗಳನ್ನು ಶುಕ್ರವಾರ ನಡೆಯುವ ಸಚಿವ ಸಂಪುಟದ ಸಭೆಯಲ್ಲಿ ಭಾಗಶಃ ಕಡಿಮೆ ಮಾಡುವ ಬಗ್ಗೆ ಪ್ರಧಾನಿಯವರು ಮಮತಾ ಬ್ಯಾನರ್ಜಿ ಅವರಿಗೆ ಆಶ್ವಾಸನೆ ನೀಡಿರುವ ಹಿನ್ನೆಲೆಯಲ್ಲಿ ಅವರು ರಾಜೀನಾಮೆಯನ್ನು ಹಿಂದಕ್ಕೆ ಪಡೆಯುವ ನಿರ್ಧಾರ ಕೈಗೊಂಡಿದ್ದಾರೆ. ಈ ವಿಷಯವನ್ನು ತೃಣಮೂಲ ಕಾಂಗ್ರೆಸ್ ಪಕ್ಷದ ವಕ್ತಾರ ಸುದೀಪ್ ಬಂಡೋಪಾಧ್ಯಾಯ ತಿಳಿಸಿದ್ದಾರೆ.
ಜನಸಾಮಾನ್ಯರಿಗೆ ತೊಂದರೆ ಆಗುವ ರೀತಿಯಲ್ಲಿ ತೈಲೋತ್ಪನ್ನಗಳ ಬೆಲೆ ಏರಿಸಿದ್ದರಿಂದ ಅದನ್ನು ಪ್ರತಿಭಟಿಸಿ ಸಚಿವರುಗಳಾದ ಮಮತಾ ಬ್ಯಾನರ್ಜಿ ಹಾಗೂ ಅಜಿತ್ ಪಾಂಜಾ ಅವರು ಶನಿವಾರ ಸಚಿವ ಸಂಪುಟಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಪ್ರಧಾನಿ ಅವರೇ ಮಧ್ಯಪ್ರವೇಶಿಸಿ ಬಿಕ್ಕಟ್ಟು ಪರಿಹರಿಸುವ ಕಾಳಜಿ ವಹಿಸಿದ ಹಿನ್ನೆಲೆಯಲ್ಲಿ ರಾಜೀನಾಮೆ ನಿರ್ಧಾರವನ್ನು ಕೈಬಿಡಲು ಈ ನಾಯಕರಿಬ್ಬರೂ ನಿರ್ಧರಿಸಿದ್ದಾರೆ. ಬೆಲೆ ಇಳಿಕೆ ಸಂಬಂಧ ಅಧಿಕೃತ ಪ್ರಕಟಣೆಗೆ ಅವರಿಬ್ಬರೂ ಕಾದಿದ್ದಾರೆ.
ಸಚಿವರಿಬ್ಬರೂ ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ ಸಂಧಾನಕ್ಕಾಗಿ ಪ್ರಧಾನಿಯವರ ಕಾರ್ಯಾಲಯದ ವಿಶೇಷ ಕರ್ತವ್ಯಾಧಿಕಾರಿ ಸುಧೀಂದ್ರ ಕುಲಕರ್ಣಿ ಇಲ್ಲಿಗೆ ಆಗಮಿಸಿ, ಎರಡನೇ ಸುತ್ತಿನ ಮಾತುಕತೆ ನಡೆಸಿದರು. ಈ ಮಾತುಕತೆಯ ನಂತರ ಬ್ಯಾನರ್ಜಿ ತಮ್ಮ ರಾಜೀನಾಮೆ ವಾಪಸು ಪಡೆಯುವ ಇಂಗಿತವನ್ನು ವ್ಯಕ್ತಪಡಿಸಿದರು.
ನಾಯಕ್ ಎಚ್ಚರಿಕೆ : ತೈಲೋತ್ಪನ್ನಗಳ ಬೆಲೆಯನ್ನು ಭಾಗಶಃ ಇಳಿಸುವ ಬಗ್ಗೆ ಪ್ರಧಾನಿಯವರಿದಂ ಭರವಸೆ ದೊರಕಿದೆ ಎಂಬ ವಿಷಯ ತಿಳಿದ ನಂತರ ನವದೆಹಲಿಯಲ್ಲಿ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ರಾಂ ನಾಯಕ್ ಅವರು, ಬೆಲೆ ಇಳಿಸುವುದರಿಂದ ತೈಲ ನಿಧಿಯ ಕೊರತೆ ಹೆಚ್ಚುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಪ್ರಧಾನಿಯವರಿಗೆ ಈ ಎಲ್ಲ ವಿಷಯವೂ ಗೊತ್ತಿದೆ. ಅವರಿಗೆ ಬೆಲೆ ಏರಿಕೆ ಕೈಬಿಡುವ ಅಧಿಕಾರವೂ ಇದೆ. ಈ ಸಂಬಂಧ ಅಂತಿಮ ನಿರ್ಧಾರ ಪ್ರಧಾನಿಯವರಿಗೇ ಬಿಟ್ಟಿದ್ದು ಎಂದು ಅವರು ಹೇಳಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications