ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಸ್‌. ನಿಜಲಿಂಗಪ್ಪ ಸ್ಮಾರಕ ಟ್ರಸ್ಟ್‌ ಡಿಸೆಂಬರ್‌ನಲ್ಲಿ ಅಸ್ತಿತ್ವಕ್ಕೆ

By Staff
|
Google Oneindia Kannada News

ಬೆಂಗಳೂರು : ಹಿರಿಯ ರಾಜಕೀಯ ಮುತ್ಸದ್ಧಿ ದಿವಂಗತ ಎಸ್‌. ನಿಜಲಿಂಗಪ್ಪ ಅವರ ಹೆಸರಿನಲ್ಲಿ ಟ್ರಸ್ಟ್‌ ರಚನೆ ಆಗಲಿದೆ. ಡಿಸೆಂಬರ್‌ 10ರಂದು ಸ್ಥಾಪನೆಯಾಗಲಿರುವ ಈ ಟ್ರಸ್ಟ್‌, ಎಸ್‌ಎನ್‌ ಅವರ ಹಲವು ಕನಸು ಹಾಗೂ ಕಾರ್ಯ ಯೋಜನೆಗಳನ್ನು ನನಸಾಗಿಸುವ ನಿಟ್ಟಿನಲ್ಲಿ ಕಾರ್ಯಾರಂಭ ಮಾಡಲಿದೆ. ಈ ವಿಷಯವನ್ನು ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು ಇಲ್ಲಿ ತಿಳಿಸಿದ್ದಾರೆ.

ಮಂಗಳವಾರ ಆನಂದರಾವ್‌ ವೃತ್ತದ ಎಸ್‌ಜೆಆರ್‌ ಕಾಲೇಜಿನ ಸಭಾಂಗಣದಲ್ಲಿ ಅಖಿಲ ಭಾರತ ವೀರಶೈವ ಮಹಾ ಸಭಾ ಹಾಗೂ ಕರ್ನಾಟಕ ವೀರಶೈವ ವಿದ್ಯಾಭಿವೃದ್ಧಿ ಸಂಸ್ಥೆ ಏರ್ಪಡಿಸಿದ್ದ ಎಸ್‌ಎನ್‌ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು, ಈ ಉದ್ದೇಶಿತ ಟ್ರಸ್ಟ್‌ಗೆ ಚಿತ್ರದುರ್ಗದ ಮುರುಘ ರಾಜೇಂದ್ರ ಮಠದ ಶ್ರೀಗಳು 45 ಎಕರೆ ಭೂಮಿಯನ್ನು ದಾನವಾಗಿ ನೀಡಿದ್ದಾರೆ ಎಂದು ಹೇಳಿದರು.

ಸಭೆಯಲ್ಲಿ ವೀರಶೈವ ಮಹಾಸಭಾದ ಅಧ್ಯಕ್ಷ ಭೀಮಣ್ಣ ಖಂಡ್ರೆ, ಮಾಜಿ ಕೇಂದ್ರ ಸಚಿವ ಗುರುಪಾದ ಸ್ವಾಮಿ, ಸಿದ್ಧಗಂಗಾ ಮಠದ ಡಾ. ಶಿವಕುಮಾರಸ್ವಾಮೀಜಿ ಮುಂತಾದವರು ಪಾಲ್ಗೊಂಡಿದ್ದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X