ಗುರುವಾರದಿಂದ ನಗರದಲ್ಲಿ ಹೃದ್ರೋಗ ತಜ್ಞರ ಸಮಾವೇಶ
ಬೆಂಗಳೂರು : ದಿ ಇಂಡಿಯನ್ ಕಾಲೇಜ್ ಆಫ್ ಕಾರ್ಡಿಯಾಲಜಿ ಅಖಿಲ ಭಾರತ ಹೃದ್ರೋಗ ತಜ್ಞರ ಸಂಘಟನೆ. ಈ ಸಂಘಟನೆ ಗುರುವಾರದಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ತನ್ನ 7ನೇ ವಾರ್ಷಿಕ ಸಮಾವೇಶವನ್ನು ಏರ್ಪಡಿಸಿದೆ.
ಹೊಟೆಲ್ ಅಶೋಕಾದಲ್ಲಿ ನಡೆಯುವ ಈ ಸಮಾವೇಶದಲ್ಲಿ ದೇಶ ವಿದೇಶಗಳ ಸುಮಾರು 400ಕ್ಕೂ ಹೆಚ್ಚು ಹೃದಯ ತಜ್ಞರು ಪಾಲ್ಗೊಳ್ಳುತ್ತಿದ್ದಾರೆ. ಮೂರು ದಿನಗಳ ಕಾಲ ನಡೆಯುವ ಕಾರ್ಯಕ್ರಮದಲ್ಲಿ ತಜ್ಞರು ಚರ್ಚೆ, ವಿಚಾರ ಸಂಕಿರಣಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ವಿಷಯವನ್ನು ಸಮಾವೇಶದ ಸಂಘಟನಾ ಕಾರ್ಯದರ್ಶಿ ಹಾಗೂ ಖ್ಯಾತ ಹೃದ್ರೋಗ ತಜ್ಞ ಡಾ. ಸಿ.ಎನ್. ಮಂಜುನಾಥ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಹೃದಯ ರೋಗ ಚಿಕಿತ್ಸೆಯಲ್ಲಿ ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಸಂಶೋಧನೆಗಳು ನಡೆದಿವೆ. ಶಸ್ತ್ರ ಚಿಕಿತ್ಸೆ ಇಲ್ಲದೆಯೂ ಕೆಲವು ಹೃದಯ ಕಾಯಿಲೆಗಳನ್ನು ಗುಣಪಡಿಸಬಹುದಾಗಿದೆ. ಹೃದಯ ಬಡಿತ ನಿಲ್ಲಿಸದೆಯೂ ಬೈಪಾಸ್ ಸರ್ಜರಿ ಮಾಡಬಹುದಾಗಿದೆ. ಇಂತಹ ಅಧುನಿಕ ಆವಿಷ್ಕಾರದ ವಿಷಯಗಳು ಮೂರು ದಿನಗಳ ಸಮಾವೇಶದಲ್ಲಿ ಚರ್ಚೆಗೆ ಬರಲಿವೆ. ಇದರಿಂದ ದೇಶ ವಿದೇಶಗಳ ಹೃದಯ ತಜ್ಞರಿಗೆ ಹೆಚ್ಚಿನ ಮಾಹಿತಿ ದೊರಕುತ್ತದೆ ಎಂದು ಅವರು ಹೇಳಿದರು.
ಹೃದಯದಲ್ಲಿ ಬೀಳುವ ಸಣ್ಣ ರಂಧ್ರಗಳನ್ನು ಶಸ್ತ್ರ ಚಿಕಿತ್ಸೆ ಇಲ್ಲದೆ ಗುಣಪಡಿಸುವ ಬಗ್ಗೆ ಸ್ವತಃ ತಾವೇ ಪ್ರಬಂಧ ಮಂಡಿಸುತ್ತಿರುವುದಾಗಿ ತಿಳಿಸಿದ ಮಂಜುನಾಥ್ ಅವರು, 15ಕ್ಕೂ ಹೆಚ್ಚು ಖ್ಯಾತ ಹೃದ್ರೋಗ ತಜ್ಞರನ್ನು ಈ ಸಂದರ್ಭದಲ್ಲಿ ಪುರಸ್ಕರಿಸಲಾಗುವುದು ಎಂದು ತಿಳಿಸಿದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications