ವಿಶ್ವ ವಿಖ್ಯಾತ ಜಂಬೂಸವಾರಿ ನಡೆಯೋದುಗ್ಯಾರಂಟಿ: ವಿಶ್ವನಾಥ್
ಮೈಸೂರು : ರಾಜ್ಕುಮಾರ್ ಅಪಹರಣ ಹಿನ್ನೆಲೆಯಲ್ಲಿ ದಸರಾ ಮೆರವಣಿಗೆ ನಡೆಯುತ್ತದೋ ಇಲ್ಲವೋ ಎಂಬ ಅನಿಶ್ಚಿತತೆಗೆ ಕೊನೆಗೂ ತೆರೆ ಬಿದ್ದಿದೆ. ವಿಶ್ವ ವಿಖ್ಯಾತ ಜಂಬೂ ಸವಾರಿ ನಡೆಯುವುದು ಈಗ ನೂರಕ್ಕೆ ನೂರು ಸ್ಥಿರಪಟ್ಟಿದೆ.
ಬುಧವಾರ ರಾಜ್ಯ ಸರಕಾರ ದಸರಾ ಮೆರವಣಿಗೆಗೆ ತನ್ನ ಹಸಿರು ನಿಶಾನೆ ತೋರಿದೆ. ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರೇ ಅ. 8 ರಂದು ನಡೆಯುವ ಮೆರವಣಿಗೆಗೆ ಅರಮನೆಯ ಮುಂದೆ ಧ್ವಜ ಹಾರಿಸುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಲಿದ್ದಾರೆ. ಈ ವಿಷಯವನ್ನು ರಾಜ್ಯದ ಪ್ರಾಥಮಿಕ ಶಿಕ್ಷಣ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಎಚ್. ವಿಶ್ವನಾಥ್ ಇಂದಿಲ್ಲಿ ತಿಳಿಸಿದರು.
ಬೆಳಕಿನ ಹಬ್ಬವನ್ನೂ ನಾಚಿಸುವಂತೆ ಸಿಡಿಮದ್ದುಗಳ ಪ್ರದರ್ಶನದ ಸಂಭ್ರಮದೊಂದಿಗೆ ನಡೆಯುತ್ತಿದ್ದ ದಸರೆ ಮೆರವಣಿಗೆಯಲ್ಲಿ ಈಬಾರಿ ಸಿಡಿಮದ್ದಿನ ಪ್ರದರ್ಶನ ರದ್ದು ಪಡಿಸಲಾಗಿದೆ. ಆದರೆ, ಸರಳವಾಗಿ ಹಾಗೂ ಸಾಂಪ್ರದಾಯಿಕವಾಗಿ ದಸರೆ ಮೆರವಣಿಗೆ ಯಾವುದೇ ಅಡೆತಡೆ ಇಲ್ಲದೆ ಜರುಗುತ್ತದೆ ಎಂದು ಸಚಿವರು ಹೇಳಿದ್ದಾರೆ. ( ಮೈಸೂರು ಪ್ರತಿನಿಧಿಯಿಂದ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications