ಮದಕರಿ ನಾಯಕರ ಕಾಲದ ವಿಗ್ರಹಗಳ ವಶ
ಬೆಂಗಳೂರು : ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿಕೋಟಿ ಗಟ್ಟಲೆ ಬೆಲೆ ಬಾಳುವ ಚಿತ್ರದುರ್ಗಮದಕರಿ ನಾಯಕರ ಕಾಲಕ್ಕೆ ಸೇರಿದ್ದೆನ್ನಲಾದ ನೂರಕ್ಕೂ ಹೆಚ್ಚು ಕಲಾತ್ಮಕ ಪಂಚಲೋಹದ ಹಾಗೂ ಕಂಚಿನ ಪ್ರತಿಮೆಗಳನ್ನು ಬೆಂಗಳೂರು ಅಪರಾಧ ವಿಭಾಗದ ಪೊಲೀಸರು ವಶಪಡಿಸಿಕೊಂಡಿದ್ದು, ಈ ಅಪೂರ್ವ ಪ್ರಾಚ್ಯ ವಸ್ತುಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯಾಬ್ಬನನ್ನು ಬಂಧಿಸಿದ್ದಾರೆ.
18ನೇ ಶತಮಾನ ಅಥವಾ ಅದಕ್ಕೂ ಹಿಂದಿನದೆಂದು ಹೇಳಲಾಗಿರುವ ಈ ಪ್ರಾಚೀನ ವಿಗ್ರಹಗಳನ್ನು ಅಶೋಕಾ ಹೋಟೆಲ್ ಎದುರು ಮಾರಾಟ ಮಾಡಲು ಯತ್ನಿಸುತ್ತಿದ್ದ ದೇವಕುಮಾರ್ ಎಂಬುವವನನ್ನು ಪೊಲೀಸರು ಬಂಧಿಸಿದ್ದಾರೆ. ಈ ವಿಷಯವನ್ನು ನಗರ ಪೊಲೀಸ್ ಕಮೀಷನರ್ ಟಿ. ಮಡಿಯಾಳ್ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಮದಕರಿ ನಾಯಕರ ವಂಶಸ್ಥನೆಂದು ಹೇಳಿಕೊಳ್ಳುವ ಚಿತ್ರದುರ್ಗದ ಗಂಡುಗಲಿ ನಾಯಕ ಎಂಬಾತನ ಸಹಕಾರದೊಂದಿಗೆ ದೇವಕುಮಾರ್ ಅಕ್ರಮವಾಗಿ ಈ ವಿಗ್ರಹಗಳನ್ನು ಮಾರಾಟ ಮಾಡುತ್ತಿದ್ದ ಎಂದು ಅವರು ಹೇಳಿದ್ದಾರೆ. ದೇವಕುಮಾರ್ ನೀಡಿದ ಸುಳಿವಿನ ಮೇರೆಗೆ ಚಿತ್ರದುರ್ಗದ ಗಂಡುಗಲಿ ನಾಯಕನ ಮನೆಯ ಮೇಲೆ ದಾಳಿ ನಡೆಸಲಾಗಿದೆ. ಈತ ಮದಕರಿ ನಾಯಕರ ವಂಶಸ್ಥ ಎಂಬುದು ಇನ್ನೂ ಖಚಿತಪಟ್ಟಿಲ್ಲ ಎಂದು ಅವರು ಹೇಳಿದರು.
ದೇವಕುಮಾರ್ ಸಹ ಗಂಡುಗಲಿ ನಾಯಕರ ಸಂಬಂಧಿ ಎನ್ನಲಾಗಿದೆ. ಗಂಡುಗಲಿ ನಾಯಕರು ಈಗ ನಾಪತ್ತೆಯಾಗಿದ್ದು, ಅವರ ಶೋಧ ಮುಂದುವರಿದಿದೆ. ಹೈಗ್ರೌಂಡ್ಸ್ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಗೃಹ ಸಚಿವರ ಪ್ರಶಂಸೆ : ಅತ್ಯಮೂಲ್ಯವಾದ ಈ ವಿಗ್ರಹಗಳನ್ನು ವಶಪಡಿಸಿಕೊಂಡಿರುವ ಪೊಲೀಸರನ್ನು ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು ಮುಕ್ತ ಕಂಠದಿಂದ ಪ್ರಶಂಸಿಸಿದ್ದಾರೆ.
-
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Language Row: ಉತ್ತರ ಭಾರತದಲ್ಲಿ ಯಾಕೆ ತಮಿಳು - ಕನ್ನಡ ಇಲ್ಲ ಎಂದ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್












Click it and Unblock the Notifications