ಅಪಹೃತ ಉದ್ಯಮಿ ನಾರಾಯಣ ಭಟ್ ಬಿಡುಗಡೆ, ಮೂವರ ಬಂಧನ
ಬೆಂಗಳೂರು : ಬುಧವಾರ ಬೆಳಗ್ಗೆ ಅಪಹೃತರಾಗಿದ್ದ ಉದ್ಯಮಿ ನಾರಾಯಣ ಭಟ್ ಅವರನ್ನು ಸುರಕ್ಷಿತವಾಗಿ ಬಿಡುಗಡೆಗೊಳಿಸುವಲ್ಲಿ ರಾಜ್ಯದ ಪೊಲೀಸರು ಯಶಸ್ವಿಯಾಗಿದ್ದಾರೆ. ಕೋಲಾರ ಜಿಲ್ಲೆ ವೇವಗಲ್ ತಾಲೂಕು ನರಸಾಪುರ ಠಾಣೆ ವ್ಯಾಪ್ತಿಯ ಲಕ್ಷ್ಮೀಸಾಗರ ಬಳಿ ಈ ಉದ್ಯಮಿಯನ್ನು ಅಪಹರಣಕಾರರಿಂದ ಪೊಲೀಸರು ಬಿಡುಗಡೆಗೊಳಿಸಿದ್ದಾರೆ.
ಈ ಸಂಬಂಧ ಮೂವರು ದುಷ್ಕರ್ಮಿಗಳನ್ನು ಬಂಧಿಸಲಾಗಿದೆ. ಇಬ್ಬರು ತಲೆ ತಪ್ಪಿಸಕೊಂಡಿದ್ದಾರೆ. ಪರಾರಿಯಾಗಿರುವ ಇಬ್ಬರ ಶೋಧ ಮುಂದುವರಿದಿದೆ. ಬುಧವಾರ ಬೆಳಗ್ಗೆ ವಾಯುವಿಹಾರಕ್ಕೆ ಹೊರಟಿದ್ದ ನಮಸ್ತೆ ಗಾರ್ಮೇಂಟ್ಸ್‌ನ ಮಾಲಿಕರಾದ ಕಂಡಿಗೆ ನಾರಾಯಣ ಭಟ್ ಅವರನ್ನು ಅಪಹರಿಸಿದ್ದ ದುಷ್ಕರ್ಮಿಗಳು ಅವರ ಬಿಡುಗಡೆಗೆ ಒಂದು ಕೋಟಿ ರುಪಾಯಿಗಳ ಬೇಡಿಕೆ ಇಟ್ಟಿದ್ದರು.
ಈ ಸಂಬಂಧ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿತ್ತು. ಕೋಲಾರ ಜಿಲ್ಲೆಯ ಲಕ್ಷ್ಮೀಸಾಗರದ ಬಳಿ ಹಸಿರು ಮೆಟಡೋರ್ ವಾಹನ ಒಂದರಲ್ಲಿ ನಾರಾಯಣ ಭಟ್ ಅವರನ್ನು ದುಷ್ಕರ್ಮಿಗಳು ಇಟ್ಟುಕೊಂಡಿದ್ದಾರೆ ಎಂಬ ಸುಳಿವು ಗುರುವಾರ ಮಧ್ಯಾಹ್ನ 2.30ರ ಸಮಯದಲ್ಲಿ ನರಸಾಪುರ ಪೊಲೀಸರಿಗೆ ದೊರಕಿತು. ಆರೋಪಿಗಳು ನರಸಾಪುರ ಬಳಿಯ ಡಾಬಾ ಬಳಿ ಅನುಮಾನ್ಪದವಾಗಿ ಮೆಟಡೋರ್ ವಾಹನ ನಿಲ್ಲಿಸಿಕೊಂಡು ನಿಂತಿದ್ದರಿಂದ ಅನುಮಾನ ಬಂದು ಡಾಬಾ ಮಾಲಿಕ ಎಸ್. ಗೌಡ ಎನ್ನುವವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು.
ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ವೇಮಗಲ್ ಪೊಲೀಸ್ ಠಾಣೆಗೂ ಸುದ್ದಿ ಮುಟ್ಟಿಸಿದರು. ವೇಮಗಲ್ ಪೊಲೀಸರ ನೆರವಿನೊಂದಿಗೆ ಅಪಹರಣಕಾರರ ಪೈಕಿ ಮೂವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾದರು ಎಂದು ಪೊಲೀಸ್ ಅಧಿಕಾರಿ ಪೂವಯ್ಯ ಅವರು ತಿಳಿಸಿದ್ದಾರೆ.
ಬಂದಿತರನ್ನು ಆವಲಹಳ್ಳಿಯ ರವಿಕುಮಾರ್, ಕೋಣನಕುಂಟೆಯ ದಾಸ್ ಹಾಗೂ ಇಸ್ರೋ ಲೇಔಟ್‌ನ ಮಂಜು ಎಂದು ಗುರುತಿಸಲಾಗಿದೆ.
ಬುಧವಾರ ಬೆಳಗ್ಗೆ ನಾರಾಯಣ ಭಟ್ ಅವರನ್ನು ಅಪಹರಿಸಿದ ನಂತರ ದುಷ್ಕರ್ಮಿಗಳು ಅವರನ್ನು ಮೆಟಡೋರ್ ವಾಹನದಲ್ಲಿಯೇ ಬಂಧಿಸಿ ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲೇ ಸುತ್ತು ಹಾಕುತ್ತಿದ್ದರು. ಗುರುವಾರ ಬೆಳಗ್ಗೆ ಪತ್ರಿಕೆಗಳಲ್ಲಿ ಭಟ್ ಅಪಹರಣದ ಸುದ್ದಿ ಪ್ರಕಟವಾಗಿರುವ ವಿಷಯ ಹಾಗೂ ಪೊಲೀಸರು ಈ ಸಂಬಂಧ ಕಾರ್ಯೋನ್ಮುಖರಾಗಿದ್ದಾರೆ ಎನ್ನುವುದನ್ನು ಅರಿತ ಅಪಹರಣಕಾರರು ವಾಹನವನ್ನು ಕೋಲಾರದ ಕಡೆಗೆ ತಿರುಗಿಸಿದರು ಎಂದು ತಿಳಿಸಿರುವ ಪೊಲೀಸರು ಗುರುವಾರ ರಾತ್ರಿ 9.30ರ ಹೊತ್ತಿಗೆ ನಾರಾಯಣಭಟ್ ಅವರನ್ನು ಬೆಂಗಳೂರಿಗೆ ಕರೆತರಲಾಗುವುದು ಎಂದೂ ಹೇಳಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications